Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:10 - ಕನ್ನಡ ಸತ್ಯವೇದವು C.L. Bible (BSI)

10 “ನನ್ನ ಹೆತ್ತತಾಯೇ, ನನ್ನ ಗತಿಯನ್ನು ಏನು ಹೇಳಲಿ! ಜಗದ ಜನರಿಗೆಲ್ಲ ನಾನೊಬ್ಬ ಜಗಳಗಂಟಿಗ, ವ್ಯಾಜ್ಯಗಾರ. ನಾನು ಹಣವನ್ನು ಸಾಲವಾಗಿ ಕೊಟ್ಟವನಲ್ಲ, ಕೊಂಡವನೂ ಅಲ್ಲ. ಆದರೂ ನನ್ನನ್ನು ಎಲ್ಲರು ಶಪಿಸುವವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ಬಯ್ಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ತಾಯೀ, ನೀನು ಜನ್ಮಕೊಟ್ಟಿದ್ದಕ್ಕಾಗಿ ನನಗೆ ದುಃಖವಾಗುತ್ತದೆ. ಯೆರೆಮೀಯನಾದ ನಾನು ಇಡೀ ದೇಶದ ಜನರ ವಿರುದ್ಧವಾಗಿ ವಾದಿಸುತ್ತಾ ನಿಂದಿಸುತ್ತಾ ಇರುವೆ. ನಾನು ಯಾರಿಗೂ ಸಾಲವನ್ನು ಕೊಟ್ಟಿಲ್ಲ; ಸಾಲವನ್ನು ತೆಗೆದುಕೊಂಡಿಲ್ಲ. ಆದರೆ ಪ್ರತಿಯೊಬ್ಬರು ನನ್ನನ್ನು ಶಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ತಾಯಿಯೇ, ನನಗೆ ಕಷ್ಟ! ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ, ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ. ಆದರೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:10
32 ತಿಳಿವುಗಳ ಹೋಲಿಕೆ  

ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು.


“ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಸಾಲಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.


ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.


“ಬಳಿಕ ಜನರು ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು. ನೀವು ನನ್ನವರು, ಆದುದರಿಂದಲೇ ಜನಾಂಗಗಳೆಲ್ಲ ನಿಮ್ಮನ್ನು ದ್ವೇಷಿಸುವುವು.


ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ.


ನಾನು ನಿನ್ನನ್ನು ಆ ಜನರಿಗೆ ದುರ್ಗಮವಾದ ಕಂಚಿನ ಪೌಳಿಗೋಡೆಯನ್ನಾಗಿಸುವೆನು. ನಿನಗೆ ವಿರುದ್ಧ ಅವರು ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗದು. ನಿನ್ನ ನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು.


ಕುಪ್ಪಳಿಸುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯಂತೆ, ಕಾರಣವಿಲ್ಲದೆ ಕೊಟ್ಟ ಶಾಪ ಗಾಳಿ ಪಾಲಾಗುತ್ತದೆ.


ಅವರೆನ್ನನು ಶಪಿಸಿದರೂ ನೀನೆನ್ನನು ಹರಸು I ನನ್ನೆದುರಾಳಿಗೆ ಅಪಮಾನವನು ಹೊರಿಸು I ನಿನ್ನ ದಾಸನೆನಗೆ ಆನಂದವನು ಪಾಲಿಸು II


ಕೊಡುವನು ಕಡವನು, ಬಯಸನು ಬಡ್ಡಿಯನು I ಎಡವರ ಕೇಡಿಗೆ ಪಡೆಯನು ಲಂಚವನು I ಕದಲನೆಂದಿಗೂ ಈಪರಿ ನಡೆವವನು II


ಅವನು, “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗನ್ನಬಾರದು,” ಎಂದನು.


ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ.


ಅವನಿಂದ ಬಡ್ಡಿಯನ್ನಾಗಲಿ, ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ನೀವು ದೇವರಲ್ಲಿ ಭಯಭಕ್ತಿಯಿಟ್ಟು, ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೋಡಿಕೊಳ್ಳಬೇಕು.


ಆದರೆ ನೀನು ಅನುಸರಿಸುವ ಪಂಥದ ವಿರುದ್ಧ ಎಲ್ಲೆಲ್ಲೂ ಜನರು ಮಾತನಾಡುತ್ತಿದ್ದಾರೆಂದು ಬಲ್ಲೆವು. ಆದುದರಿಂದ ನಿನ್ನ ಅಭಿಪ್ರಾಯವನ್ನು ನಿನ್ನ ಬಾಯಿಂದಲೇ ಕೇಳಬಯಸುತ್ತೇವೆ,” ಎಂದರು.


ನೀವು ಅವನಿಗೆ ಸಾಲಕೊಟ್ಟರೆ ಬಡ್ಡಿಯನ್ನು ಕೇಳಬೇಡಿ, ದವಸಧಾನ್ಯ ಕೊಟ್ಟರೆ ಲಾಭ ಕೇಳಬೇಡಿ.


ತಲೆ ಕೂದಲಿಗಿಂತ ಮಿಗಿಲಿಹರು ನಿಷ್ಕಾರಣ ದ್ವೇಷಿಗಳು I ಬಲಿಷ್ಟರಿಹರು ನನ್ನ ಕೊಲೆಗಡುಕರು, ನಿರ್ನಿಮಿತ್ತ ಶತ್ರುಗಳು I ಕಳ್ಳನಾನಲ್ಲನಾದರೂ ದಂಡಕೋರುತಿಹರು ವೈರಿಗಳು II


ಕೇಡನ್ನು ನಾ ನೋಡುವಂತೆ ಮಾಡಿದೆಯೇಕೆ? ಕಷ್ಟವನ್ನು ನಾ ಕಾಣುವಂತೆ ಮಾಡಿದೆಯೇಕೆ? ಹಿಂಸೆಬಾಧೆಗಳು ಇವೆ ನನ್ನ ಕಣ್ಣ ಮುಂದೆ. ಇಗೋ, ಜಗಳ ನಡೆಯುತಿದೆ, ವ್ಯಾಜ್ಯವೇಳುತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು