Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:11 - ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರಾ, ನಾನು ನಿಮಗೆ ಶ್ರೇಷ್ಠವಾದ ಸೇವೆಸಲ್ಲಿಸದೆ ಹೋಗಿದ್ದರೆ, ನನ್ನ ಶತ್ರುಗಳು ಕಷ್ಟಸಂಕಟಗಳಲ್ಲಿ ಸಿಕ್ಕಿಬಿದ್ದ ಕಾಲದಲ್ಲಿ ಅವರ ಪರವಾಗಿ ನಿನಗೆ ಮೊರೆಯಿಡದೆ ಇದ್ದಿದ್ದರೆ ನನಗೆ ಶಾಪ ತಗುಲಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಕ್ಕೆ ಯೆಹೋವನು, “ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ಶತ್ರುವನ್ನು ನಿನಗೆ ಶರಣಾಗತನನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಕ್ಕೆ ಯೆಹೋವನು - ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು, ನಿಜನಿಜವಾಗಿ ನಿನ್ನ ಶತ್ರುವನ್ನು ಕೇಡಿನಲ್ಲಿಯೂ ಇಕ್ಕಟ್ಟಿನಲ್ಲಿಯೂ ನಿನಗೆ ಶರಣಾಗತನನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರೇ, ನಿಜವಾಗಿಯೂ ನಾನು ನಿನ್ನ ಸೇವೆಯನ್ನು ಚೆನ್ನಾಗಿ ಮಾಡಿದ್ದೇನೆ. ಕಷ್ಟದ ಕಾಲದಲ್ಲಿ ನನ್ನ ವೈರಿಗಳ ಬಗ್ಗೆ ನಾನು ನಿನ್ನಲ್ಲಿ ಪ್ರಾರ್ಥಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಕ್ಕೆ ಯೆಹೋವ ದೇವರು, ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಶತ್ರುವನ್ನು ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ನಿನಗೆ ಶರಣಾಗತನನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:11
15 ತಿಳಿವುಗಳ ಹೋಲಿಕೆ  

ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.


ಹೀಗಿರುವಲ್ಲಿ ಅರಸ ಚಿದ್ಕೀಯನು ಶೆಲೆಮ್ಯನ ಮಗ ಯೆಹೂಕಲನನ್ನು ಮತ್ತು ಯಾಜಕ ಮಾಸೇಯನ ಮಗ ಚೆಫನ್ಯನನ್ನು ಯೆರೆಮೀಯನ ಬಳಿಗೆ ಕಳಿಸಿ, “ನಮಗಾಗಿ ನಮ್ಮ ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸು” ಎಂದು ವಿನಂತಿಸಿದನು.


ಪಾಪಾತ್ಮನು ನೂರು ಸಾರಿ ಕೆಟ್ಟದ್ದನ್ನು ಮಾಡಿ ದೀರ್ಘಕಾಲ ಬದುಕಿದರೂ ದೇವರಿಗೆ ಹೆದರಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.


“ದಯಮಾಡಿ ನಮ್ಮ ಬಿನ್ನಹವನ್ನು ಆಲಿಸಬೇಕು.


ಇವರು ಬಂದು, “ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಮಗೆ ವಿರುದ್ಧ ಯುದ್ಧಮಾಡುತ್ತಿರುವುದು ತಿಳಿದ ವಿಷಯ. ಸರ್ವೇಶ್ವರ ಸ್ವಾಮಿ ನಮ್ಮ ಪಕ್ಷ ವಹಿಸುವರೆ? ತಮ್ಮ ಅದ್ಭುತಗಳಲ್ಲಿ ಒಂದನ್ನು ಮಾಡಿ ಈ ಶತ್ರುವನ್ನು ನಮ್ಮಿಂದ ತೊಲಗುವಂತೆ ಮಾಡಬಹುದೆ? ದಯಮಾಡಿ ಸರ್ವೇಶ್ವರನ ಚಿತ್ತವೇನೆಂದು ವಿಚಾರಿಸಿ ತಿಳಿಸಬೇಕು,” ಎಂದು ವಿನಂತಿಸಿದರು.


ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, “ದೇವರಿಂದ ಯಾವುದಾದರು ಸಂದೇಶ ದೊರೆಯಿತೊ?” ಎಂದು ಮನೆಯಲ್ಲಿ ಗುಟ್ಟಾಗಿ ವಿಚಾರಿಸಿದನು. ಯೆರೆಮೀಯನು, “ಹೌದು, ದೊರೆಯಿತು. ತಾವು ಬಾಬಿಲೋನಿನ ಅರಸನ ಕೈಗೆ ಸಿಕ್ಕಿಬೀಳುವಿರಿ,” ಎಂದನು.


ಅರಸ ಚಿದ್ಕೀಯನು ಪ್ರವಾದಿ ಯೆರೆಮೀಯನನ್ನು ಸರ್ವೇಶ್ವರನ ಆಲಯದ ಮೂರನೆಯ ಬಾಗಿಲ ಬಳಿಗೆ ಕರೆತರಿಸಿ, “ನಾನು ನಿನ್ನಲ್ಲಿ ಒಂದು ವಿಷಯವನ್ನು ಕೇಳುತ್ತೇನೆ, ನನಗೆ ಏನನ್ನೂ ಮರೆಮಾಡಬೇಡ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು