Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:13 - ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ : “ನಾಡಿನಾದ್ಯಂತ ನನ್ನ ಜನರು ಮಾಡಿದ ಎಲ್ಲ ಪಾಪಗಳ ನಿಮಿತ್ತ ಅವರ ಸೊತ್ತು ಸಂಪತ್ತನ್ನು ಪುಕ್ಕಟೆಯಾಗಿ ಕೊಳ್ಳೆಗಾರರ ಪಾಲಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ನಿನ್ನ ಸಕಲ ಪ್ರಾಂತ್ಯಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ ನಾನು ನಿನ್ನ ಸೊತ್ತು ಮತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡುಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಸಕಲ ಪ್ರಾಂತ್ಯಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿವಿುತ್ತ ನಾನು ನಿನ್ನ ಸೊತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡುಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೂದದ ಜನರಲ್ಲಿ ಅನೇಕ ಭಂಡಾರಗಳಿವೆ. ಆ ಭಂಡಾರಗಳನ್ನು ನಾನು ಬೇರೆಯವರಿಗೆ ಒಪ್ಪಿಸುತ್ತೇನೆ. ಬೇರೆಯವರು ಆ ಭಂಡಾರಗಳನ್ನು ಹಣ ಕೊಟ್ಟು ತೆಗೆದುಕೊಳ್ಳಬೇಕಾಗಿಲ್ಲ. ನಾನು ಅವರಿಗೆ ಅವುಗಳನ್ನು ಉಚಿತವಾಗಿ ಕೊಟ್ಟುಬಿಡುತ್ತೇನೆ. ಏಕೆಂದರೆ ಯೆಹೂದವು ಅನೇಕ ಪಾಪಗಳನ್ನು ಮಾಡಿದೆ. ದೇಶದ ಪ್ರತಿಯೊಂದು ಭಾಗದಲ್ಲಿಯೂ ಯೆಹೂದ ಪಾಪಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿನ್ನ ಸಕಲ ಪ್ರಾಂತಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ ನಾನು ನಿನ್ನ ಸೊತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡು ಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:13
8 ತಿಳಿವುಗಳ ಹೋಲಿಕೆ  

ನಿಮ್ಮ ಪ್ರಾಂತ್ಯಗಳಲ್ಲೆಲ್ಲ ನೀವು ಮಾಡಿದ ಪಾಪದ ನಿಮಿತ್ತ ನಾನು ನಿಮ್ಮ ಎಲ್ಲ ಸೊತ್ತುಸಂಪತ್ತುಗಳನ್ನು ಮತ್ತು ಪೂಜಾಸ್ಥಳಗಳನ್ನು ಸೂರೆಗೆ ಈಡುಮಾಡುವೆನು.


ಬಿಡುಕಾಸಿಗಿಂತ ಕಡೆಗಾಣಿಸಿರುವೆ ನಿನ್ನ ಪ್ರಜೆಯನು I ಲಾಭವಿಲ್ಲದವರಂತೆ ವಿಕ್ರಯಿಸಿರುವೆ ಅದನು II


ಏಕೆಂದರೆ ಸರ್ವೇಶ್ವರ ಹೀಗೆಂದು ಹೇಳಿದ್ದಾರೆ - ‘ಬೆಲೆಯಿಲ್ಲದೆ ಮಾರಲ್ಪಟ್ಟಿರಿ; ಹಣವಿಲ್ಲದೆ ಮುಕ್ತರಾಗುವಿರಿ.’


ಅಷ್ಟು ಮಾತ್ರವಲ್ಲ, ಈ ನಗರದ ಎಲ್ಲ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಹಾಗು ಜುದೇಯದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಇವರ ಶತ್ರುಗಳ ಕೈವಶಮಾಡುವೆನು. ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.


ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಕರೆದೊಯ್ದಿದ್ದಾರೆ. ಇಲ್ಲಿ ನಾನು ಸುಮ್ಮನಿರುವುದಾದರೂ ಹೇಗೆ? ಆಳುತ್ತಿರುವವರು ನನ್ನ ಪ್ರಜೆಯಾದವರನ್ನು ಗೋಳಿಡಿಸುತ್ತಿದ್ದಾರೆ, ಎಡೆಬಿಡದೆ ನನ್ನ ಶ್ರೀ ನಾಮವು ದಿನವೆಲ್ಲ ದೂಷಣೆಗೆ ಗುರಿಯಾಗುತ್ತಿದೆ.


ಅವರ ವಿಧವೆಯರು ನನ್ನ ಭಾಗಕ್ಕೆ ಕಡಲ ಮರಳಿನಂತೆ ಯುವಜನರಿಗೆ ಸಾವು ಬರಮಾಡಿದೆ ನಡುಜೀವನದಲ್ಲೆ. ಅವರ ತಾಯಂದಿರನ್ನು ದುಃಖಕ್ಕೆ ಈಡುಮಾಡಿದೆ ತಟ್ಟನೆ ಅವರನ್ನು ಕಳವಳಕ್ಕೂ ದಿಗಿಲಿಗೂ ಗುರಿಪಡಿಸಿದೆ.


ಶೆಬದವರು, ದೆದಾನಿನವರು, ತಾರ್ಷೀಷಿನ ವರ್ತಕರು ಹಾಗು ಅದರ ಸಿಂಹಪ್ರಾಯರೆಲ್ಲರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ದನ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯೋ?’ ಎಂದು ಕೇಳುವರು.


ಅವರ ಆಸ್ತಿಪಾಸ್ತಿಯೆಲ್ಲಾ ಸೂರೆಯಾಗುವುದು, ಅವರ ಮನೆಮಠಗಳು ಹಾಳಾಗುವುವು; ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು; ದ್ರಾಕ್ಷಾತೋಟಗಳನ್ನು ಬೆಳೆಸಿಕೊಂಡರೂ ಅವುಗಳಿಂದ ದ್ರಾಕ್ಷಾರಸವನ್ನು ಕುಡಿಯರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು