Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:17 - ಕನ್ನಡ ಸತ್ಯವೇದವು C.L. Bible (BSI)

17 ವಿನೋದಗಾರರ ಕೂಟದಲ್ಲಿ ಭಾಗವಹಿಸಿ ನಾನು ಉಲ್ಲಾಸಪಟ್ಟವನಲ್ಲ. ನಿಮ್ಮ ಕೈ ನನ್ನ ಮೇಲೆ ಇದ್ದುದರಿಂದ ನಾನು ಒಬ್ಬಂಟಿಗನಾದೆ. ಕೋಪಾವೇಶದಿಂದ ತುಂಬಿದವನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ವಿನೋದಗಾರರ ಕೂಟದಲ್ಲಿ ಕುಳಿತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ. ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕುಳಿತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ವಿನೋದಗಾರರ ಕೂಟದಲ್ಲಿ ಕೂತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ; ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕೂತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ತಮಾಷೆ ಮಾಡಿಕೊಂಡು ನಗುತ್ತಲಿದ್ದ ಗುಂಪಿನಲ್ಲಿ ನಾನೆಂದೂ ಸೇರಲಿಲ್ಲ. ನನ್ನ ಮೇಲೆ ಆದ ನಿನ್ನ ಪ್ರಭಾವದಿಂದ ನಾನೊಬ್ಬನೇ ಕುಳಿತುಕೊಂಡಿರುತ್ತಿದ್ದೆ. ನನ್ನ ಸುತ್ತಮುತ್ತಲಿನ ದುಷ್ಟತನದ ಮೇಲೆ ನನ್ನಲ್ಲಿ ರೋಷವನ್ನು ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ವಿನೋದಗಾರರ ಕೂಟದಲ್ಲಿ ಕೂತುಕೊಳ್ಳಲಿಲ್ಲ, ಉಲ್ಲಾಸ ಪಡಲೂ ಇಲ್ಲ; ನೀವು ನನ್ನ ಮೇಲೆ ಕೈ ಇಟ್ಟಿದ್ದರಿಂದ ಒಂಟಿಗನಾಗಿ ಕೂತುಕೊಂಡೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:17
13 ತಿಳಿವುಗಳ ಹೋಲಿಕೆ  

‘ನನ್ನ ಮೇಲೆ ಇದನ್ನು ಹೇರಿಸಿದನು ಸರ್ವೇಶ್ವರನು ಎಂದು ಏಕಾಕಿಯಾಗಿ ಕುಳಿತು ಮೌನದಿಂದಿರು.


ದುರ್ಜನರ ಆಲೋಚನೆಯಂತೆ ನಡೆಯದೆ I ಪಾಪಾತ್ಮರ ಪಥದಲಿ ಕಾಲೂರದೆ I ಧರ್ಮನಿಂದಕರ ಕೂಟದಲಿ ಕೂರದೆ II


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.


ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.


ಮನೆಮೇಲಿನ ಒಂಟಿ ಪಕ್ಷಿಯಾದೆ I ಬಳಲುತ್ತಿರುವೆನು ನಿದ್ರೆಯಿಲ್ಲದೆ II


ಇಲ್ಲಿಗೆ ಆ ಕನಸಿನ ವಿವರ ಮುಗಿಯಿತು. ದಾನಿಯೇಲನಾದ ನಾನು ನನ್ನ ಆಲೋಚನೆಗಳಿಂದ ಬಹಳ ಕಳವಳಗೊಂಡೆ. ನನ್ನ ಮುಖ ಬಾಡಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲೇ ಇಟ್ಟುಕೊಂಡೆ.


“ಔತಣದ ಮನೆಗೂ ಹೋಗಬೇಡ. ಅಲ್ಲಿಯವರೊಡನೆ ಕುಳಿತು, ತಿಂದು, ಕುಡಿಯಬೇಡ,


ರಾಷ್ಟ್ರಗಳ ಮೇಲೂ ರಾಜ್ಯಗಳ ಮೇಲೂ ಅಧಿಕಾರವುಳ್ಳವನನ್ನಾಗಿ ನಾನು ನಿನ್ನನ್ನು ಈ ದಿನ ನೇಮಿಸಿದ್ದೇನೆ. ಇದರಿಂದಾಗಿ ಕಿತ್ತುಹಾಕುವ ಹಾಗು ಕೆಡುವುವ, ನಾಶಪಡಿಸುವ ಹಾಗು ನೆಲಸಮಮಾಡುವ, ಕಟ್ಟುವ ಹಾಗು ನೆಡುವ ಕಾರ್ಯ ನಿನ್ನದು,” ಎಂದರು


ಆಗ ದೇವದೂತನು: “ಸೇನಾಧಿಶ್ವರ ಸರ್ವೇಶ್ವರಾ, ಕಳೆದ ಎಪ್ಪತ್ತು ವರ್ಷಗಳಿಂದ ನೀವು ಕೋಪದಿಂದಿರುವಿರಿ, ಏಕೆ? ಇನ್ನೆಷ್ಟು ಕಾಲ ಜೆರುಸಲೇಮಿಗೂ ಜುದೇಯದ ಇತರ ಪಟ್ಟಣಗಳಿಗೂ ಕರುಣೆತೋರಿಸದೆ ಇರುವಿರಿ?” ಎಂದು ಕೇಳಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು