Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:2 - ಕನ್ನಡ ಸತ್ಯವೇದವು C.L. Bible (BSI)

2 ‘ನಾವೆಲ್ಲಿಗೆ ಹೋಗಬೇಕು?’ ಎಂದು ಕೇಳಿಯಾರು. ಆಗ ನೀನು ಅವರಿಗೆ : ‘ಇದು ಸರ್ವೇಶ್ವರನ ಸಂದೇಶ: ಮರಣವ್ಯಾಧಿಗೆ ಗೊತ್ತಾದವರು ಮರಣವ್ಯಾಧಿಗೆ ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಕ್ಷಾಮಕ್ಕೆ ಗೊತ್ತಾದವರು ಕ್ಷಾಮಕ್ಕೆ ಸೆರೆಗೆ ಗೊತ್ತಾದವರು ಸೆರೆಗೆ ಗುರಿಯಾಗಿ ಸಾಯುವರು’ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಅವರಿಗೆ - ಮರಣವ್ಯಾಧಿಗೆ ಗೊತ್ತಾದವರು ಮರಣವ್ಯಾಧಿಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ, ಕ್ಷಾಮಕ್ಕೆ ಗೊತ್ತಾದವರು ಕ್ಷಾಮಕ್ಕೆ, ಸೆರೆಗೆ ಗೊತ್ತಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ನಿನಗೆ, ‘ನಾವು ಎಲ್ಲಿ ಹೋಗಬೇಕು?’ ಎಂದು ಹೇಳಿದರೆ, ನೀನು ಅವರಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಮರಣಕ್ಕೆ ಇರುವವರು ಮರಣಕ್ಕೆ; ಖಡ್ಗಕ್ಕೆ ಇರುವವರು ಖಡ್ಗಕ್ಕೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ; ಸೆರೆಗೆ ಇರುವವರು ಸೆರೆಗೆ,’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:2
18 ತಿಳಿವುಗಳ ಹೋಲಿಕೆ  

ಅವನು ಬಂದು ಈಜಿಪ್ಟ್ ದೇಶದ ಮೇಲೆ ಧಾಳಿಮಾಡುವನು. ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಮನೆಗೆ ಗೊತ್ತಾದವರು ಸೆರೆಮನೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.


ಆಗ ನಾನು: “ಇನ್ನು ಮೇಲೆ ನಾನು ನಿಮ್ಮನ್ನು ಮೇಯಿಸೆನು. ಸಾಯಬೇಕಾದವು ಸಾಯಲಿ, ಹಾಳಾಗಬೇಕಾದವು ಹಾಳಾಗಿಹೋಗಲಿ, ಉಳಿದವುಗಳು ಒಂದನ್ನೊಂದು ಕಚ್ಚಿ ಕಬಳಿಸಿಬಿಡಲಿ,” ಎಂದೆ.


ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಖಡ್ಗದಿಂದ ಹತಿಸುವವನು ಖಡ್ಗದಿಂದಲೇ ಹತನಾಗಬೇಕು. ಆದ್ದರಿಂದ ದೇವಜನರು ಸಹನೆಯಿಂದಲೂ ವಿಶ್ವಾಸದಿಂದಲೂ ನಡೆದುಕೊಳ್ಳಬೇಕು.


ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; (ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).


ನಿನ್ನಲ್ಲಿನ ಮೂರನೆಯ ಒಂದು ಭಾಗದ ಜನರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲೆ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಇವರು ಉಪವಾಸ ಕೈಗೊಂಡರೂ ಇವರ ಮೊರೆಯನ್ನು ನಾನು ಕೇಳುವುದಿಲ್ಲ. ದಹನಬಲಿಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸುವುದಿಲ್ಲ. ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಇವರನ್ನು ಮುಗಿಸಿಬಿಡುತ್ತೇನೆ,” ಎಂದು ಹೇಳಿದರು.


ಬೀಳುವನು ಕುಳಿಯಲ್ಲಿ, ಭಯಭೀತಿಯ ಸಪ್ಪಳಕ್ಕೆ ಓಡಿಹೋಗುವವನು, ಸಿಕ್ಕಿಬೀಳುವನು ಬಲೆಯಲ್ಲಿ ಕುಳಿಯ ಹತ್ತಿ ಬರುವವನು. ತೆರೆದಿವೆ ನೋಡಿ, ಆಕಾಶದ ದ್ವಾರಗಳು, ಕಂಪಿಸುತ್ತಿವೆ ಬುವಿಯ ಅಸ್ತಿವಾರಗಳು.


ಅದು ಹೇಗೆಂದರೆ: “ಸಿಂಹದ ಬಾಯಿಯಿಂದ ತಪ್ಪಿಸಿಕೊಂಡು ಓಡುತ್ತಿರುವವನು ಕರಡಿಯನ್ನು ಎದುರುಗೊಳ್ಳುವಂತೆ ಆಗುವುದು ಅಥವಾ ಅವನು ಅಲ್ಲಿಂದ ಮನೆಗೆ ಓಡಿಬಂದು ಗೋಡೆಯ ಮೇಲೆ ಕೈಯೂರಲು ಅವನಿಗೆ ಹಾವು ಕಚ್ಚಿದಂತೆ ಆಗುವುದು.


ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಖಡ್ಗ, ಕ್ಷಾಮ, ದುಷ್ಟಮೃಗ, ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಜೆರುಸಲೇಮಿನ ಮೇಲೆ ಒಟ್ಟಿಗೆ ಬರಮಾಡಿ ಜನ ಜಾನುವಾರಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


ಅವರ ಪ್ರವಾದನೆಗೆ ಕಿವಿಗೊಡುವ ಜನರು ಕೂಡ ಕ್ಷಾಮಖಡ್ಗಗಳಿಗೆ ತುತ್ತಾಗುವರು. ಜೆರುಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು. ಅವರನ್ನೂ ಅವರ ಮಡದಿ ಮಕ್ಕಳನ್ನೂ ಹೂಣಲು ಸಹ ಯಾರೂ ಇರುವುದಿಲ್ಲ. ಅವರ ದುಷ್ಟತನವನ್ನು ಅವರ ಮೇಲೆಯೆ ಸುರಿದುಬಿಡುವೆನು.”


ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.”


ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಜೆರುಸಲೇಮಿನವರ ಯೋಜನೆಗಳನ್ನು ಮಣ್ಣುಪಾಲಾಗಿಸುವೆನು. ಅವರ ಶತ್ರುಗಳ ಹಾಗು ಕೊಲೆಗಡುಕರ ಕತ್ತಿಗೆ ಅವರನ್ನು ತುತ್ತಾಗಿಸುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗಿಸುವೆನು.


ಇದನ್ನೂ ನುಡಿ, - ‘ನಾನು ನಿಮಗೆ ಮುಂಗುರುತಾಗಿದ್ದೇನೆ. ನಾನು ಮಾಡಿದಂತೆಯೇ ಅವರಿಗಾಗುವುದು: ಅವರು ವಲಸೆಯಾಗಿ ಸೆರೆಹೋಗುವರು.


“ಮತ್ತು ಅವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿ ಇರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿ ಇರುವವರನ್ನು ನಾನು ಮೃಗಗಳಿಗೆ ತುತ್ತು ಮಾಡುವೆನು; ಗುಹೆದುರ್ಗಗಳಲ್ಲಿ ಇರುವವರನ್ನು ವ್ಯಾಧಿಯು ಸಾಯಿಸುವುದು.


ಖೈದಿಗಳೊಂದಿಗೆ ಕಾರಾಗೃಹವನ್ನು ಸೇರುವಿರಿ; ಇಲ್ಲವೆ, ಇತರರ ಸಮೇತ ಹತರಾಗುವಿರಿ. ಇದೇ ನಿಮ್ಮ ಗತಿ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು