Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:21 - ಕನ್ನಡ ಸತ್ಯವೇದವು C.L. Bible (BSI)

21 ಇದು ಸರ್ವೇಶ್ವರನಾದ ನನ್ನ ಮಾತು. ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಕ್ರೂರಿಗಳ ಕೈಯಿಂದ ರಕ್ಷಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು” ಎಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು; ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನಾನು ನಿನ್ನನ್ನು ಆ ದುಷ್ಟ ಜನರಿಂದ ರಕ್ಷಿಸುತ್ತೇನೆ. ಆ ಜನರು ನಿನ್ನನ್ನು ಬೆದರಿಸುತ್ತಾರೆ. ಆದರೆ ನಾನು ನಿನ್ನನ್ನು ಆ ಜನರಿಂದ ರಕ್ಷಿಸುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ದುಷ್ಟರ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:21
24 ತಿಳಿವುಗಳ ಹೋಲಿಕೆ  

ದೇವರೇ ನಮ್ಮನ್ನು ಈ ಭಯಂಕರ ಮರಣದಿಂದ ಪಾರುಮಾಡಿದರು. ಇನ್ನು ಮುಂದಕ್ಕೂ ಪಾರುಮಾಡುವರು. ಹೌದು, ನೀವು ಸಹ ನಮಗಾಗಿ ಪ್ರಾರ್ಥಿಸುತ್ತಾ ನಮ್ಮೊಡನೆ ಸಹಕರಿಸಿದರೆ, ಇನ್ನು ಮುಂದಕ್ಕೂ ನಮ್ಮನ್ನು ಪಾರುಮಾಡುವರು ಎಂಬ ಭರವಸೆಯಿಂದ ಇದ್ದೇವೆ. ಇದರ ಫಲವಾಗಿ ನಮಗೆ ದೊರೆಯುವ ವರದಾನಗಳಿಗಾಗಿ ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸುವರು.


ಅವರನ್ನು ಬಿಡಿಸಬಲ್ಲವನು ಬಲಿಷ್ಠನು. ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದೇ ಆತನ ನಾಮಧೇಯ. ಆತನೇ ಅವರ ವ್ಯಾಜ್ಯವನ್ನು ಜಯಿಸಿ, ನಾಡಿಗೆ ಶಾಂತಿಯನ್ನು ತಂದು, ಬಾಬಿಲೋನಿಯದವರಿಗೆ ಕಳವಳವನ್ನುಂಟುಮಾಡುವನು.”


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ಏಕೆಂದರೆ ಭಯೋತ್ಪಾದಕರು ನಿಶ್ಶೇಷರಾಗುವರು, ಧರ್ಮನಿಂದಕರು ನಿರ್ನಾಮವಾಗುವರು.


ತನ್ನಾಶ್ರಿತರನು ಪ್ರಭು ಕೈ ನೀಡಿ ಕಾಪಾಡುವನು I ದುಷ್ಟರ ವಶದಿಂದವರನು ತಪ್ಪಿಸಿ ಉದ್ಧರಿಸುವನು II


ಕೇಡು ಮಾಡಬಂದರೆನಗೆ ಕೊಲೆಗಡುಕರು I ಎಡವಿಬಿದ್ದರು, ತಾವೇ ಅಳಿದುಹೋದರು II


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಅರೀಯೇಲೇ, ಗುಂಪುಗುಂಪಾಗಿ ಕೂಡಿಬರುವ ನಿನ್ನ ಶತ್ರುಗಳು ಧೂಳಿಪುಡಿಯಂತೆ ತೂರಿಹೋಗುವರು. ತಂಡೋಪತಂಡವಾಗಿ ಬಂದಿರುವ ಭಯಂಕರ ಸೈನಿಕರು ಹೊಟ್ಟಿನಂತೆ ಹಾರಿಹೋಗುವರು. ತಟ್ಟನೆ ಕ್ಷಣಮಾತ್ರದಲ್ಲಿ ಕಣ್ಮರೆಯಾಗುವರು.


ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು I ತನ್ನ ಭಕ್ತರ ಪ್ರಾಣವನು ಕಾಪಾಡುವನು I ದುಷ್ಟರ ಕೈಯಿಂದವರನು ಬಿಡಿಸುವನು II


ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.


ಸರ್ವೇಶ್ವರ ಸ್ವಾಮಿ ನನಗೆ ಈ ಸಂದೇಶವನ್ನು ದಯಪಾಲಿಸಿದರು :


ಸರ್ವೇಶ್ವರನನ್ನು ಸ್ತುತಿಸಿರಿ, ಸರ್ವೇಶ್ವರನನ್ನು ಸಂಕೀರ್ತಿಸಿರಿ. ಅವರು ಬಡವರ ಪ್ರಾಣವನ್ನು ಬಿಡಿಸಿದ್ದಾರೆ ಕೆಡುಕರ ಕೈಯಿಂದ.


ಸರ್ವೇಶ್ವರ ಯಕೋಬರ ವಿಮೋಚಕ ಅವರನ್ನು ಅವರಿಗಿಂತ ಬಲಿಷ್ಠರ ಕೈಯಿಂದ ಬಿಡಿಸಿದಾತ.


ಜೆರುಸಲೇಮ್ ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ರಕ್ಷಾದಳದ ನಾಯಕ ನೆಬೂಜರದಾನನಿಗೆ,


“ಇವನನ್ನು ಕರೆದುಕೊಂಡುಹೋಗಿ ಚೆನ್ನಾಗಿ ನೋಡಿಕೊ. ಯಾವ ಹಾನಿಯನ್ನು ಮಾಡಕೂಡದು. ಬೇಡುವುದನ್ನೆಲ್ಲ ಕೊಡು,” ಎಂದು ಆಜ್ಞಾಪಿಸಿದನು.


ನಾವು ಸೇವೆಮಾಡುವ ದೇವರಿಗೆ ಚಿತ್ತವಿದ್ದರೆ ಅವರೇ ಧಗಧಗನೆ ಉರಿಯುವ ಆವಿಗೆಯೊಳಗಿಂದಲೂ ನಮ್ಮನ್ನು ಕಾಪಾಡಬಲ್ಲರು. ಅವರೇ ನಮ್ಮನ್ನು ನಿಮ್ಮ ಕೈಯಿಂದಲೂ ಬಿಡಿಸಬಲ್ಲರು.


ಅದಕ್ಕೆ ಅವರು, “ಆದರೆ, ಇಗೋ ಕಟ್ಟಿಲ್ಲದ ನಾಲ್ವರನ್ನು ನಾನು ನೋಡುತ್ತಿದ್ದೇನೆ. ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ; ಅವರಿಗೆ ಯಾವ ಹಾನಿಯೂ ಆಗುತ್ತಿಲ್ಲ.


ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು