Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:3 - ಕನ್ನಡ ಸತ್ಯವೇದವು C.L. Bible (BSI)

3 “ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು ವಿಧಿಸುವೆನು : ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಯನ್ನು, ನುಂಗಿ ನಾಶಮಾಡುವುದಕ್ಕೆ ಪ್ರಾಣಿಪಕ್ಷಿಗಳನ್ನು ನೇಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನಾನು ಅವರಿಗೆ ನಾಲ್ಕು ವಿಧವಾದ ಬಾಧಕರನ್ನು, ಅಂದರೆ ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವುದಕ್ಕೆ ಆಕಾಶದ ಪಕ್ಷಿಗಳನ್ನೂ ಮತ್ತು ಭೂಜಂತುಗಳನ್ನೂ ನೇಮಿಸುವೆನು” ಎಂಬುದು ಯೆಹೋವನಾದ ನನ್ನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು, ಅಂದರೆ ಕಡಿಯುವದಕ್ಕೆ ಖಡ್ಗವನ್ನು, ಸೀಳುವದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವದಕ್ಕೆ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನೇವಿುಸುವೆನು ಎಂಬದು ಯೆಹೋವನಾದ ನನ್ನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಅವರ ವಿರುದ್ಧ ನಾಲ್ಕು ರೀತಿಯ ವಿನಾಶಕರನ್ನು ಕಳುಹಿಸುತ್ತೇನೆ.’ ಇದು ಯೆಹೋವನ ನುಡಿ. ‘ಅವರನ್ನು ಕೊಲೆಮಾಡಲು ಖಡ್ಗಧಾರಿಗಳಾದ ಶತ್ರುಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ಎಳೆದುಕೊಂಡು ಹೋಗುವುದಕ್ಕಾಗಿ ನಾಯಿಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ತಿನ್ನಲು ಮತ್ತು ನಾಶಮಾಡಲು ಗಾಳಿಯಲ್ಲಿ ಹಾರಾಡುವ ಪಕ್ಷಿಗಳನ್ನೂ ಕಾಡುಪ್ರಾಣಿಗಳನ್ನೂ ಕಳುಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ನಾನು ಅವರಿಗೆ ವಿರೋಧವಾಗಿ ನಾಲ್ಕು ವಿಧವಾದ ವಿನಾಶಗಳನ್ನು ಎಂದರೆ, ಕೊಲ್ಲುವುದಕ್ಕೆ ಖಡ್ಗವನ್ನೂ, ಹರಿಯುವುದಕ್ಕೆ ನಾಯಿಗಳನ್ನು, ನುಂಗುವುದಕ್ಕೂ ನಾಶಮಾಡುವುದಕ್ಕೂ ಆಕಾಶದ ಪಕ್ಷಿಗಳನ್ನೂ, ಕಾಡುಮೃಗಗಳನ್ನೂ ನೇಮಿಸುತ್ತೇನೆ ಎಂಬುದು ಯೆಹೋವ ದೇವರಾದ ನನ್ನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:3
21 ತಿಳಿವುಗಳ ಹೋಲಿಕೆ  

ನಿಮ್ಮ ಹೆಣಗಳು ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು; ಅವುಗಳನ್ನು ಬೆದರಿಸಿ ಓಡಿಸುವುದಕ್ಕೂ ಯಾರೂ ಇರುವುದಿಲ್ಲ.


ನಿಮ್ಮ ಮೇಲೆ ಕ್ರೂರಪ್ರಾಣಿಗಳನ್ನು ಬರಮಾಡುವೆನು. ಅವು ನಿಮ್ಮ ಮಕ್ಕಳನ್ನು ಕೊಂದುಹಾಕುವುವು; ನಿಮ್ಮ ಪಶುಪ್ರಾಣಿಗಳನ್ನು ನಾಶಮಾಡುವುವು; ನಿಮ್ಮನ್ನು ಅಲ್ಪಸಂಖ್ಯಾತರನ್ನಾಗಿ ಮಾಡುವುವು, ನಿಮ್ಮ ದಾರಿಗಳು ಪಾಳುಬೀಳುವುವು.


ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.


ಆಗ ಬೂದು ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು, ‘ಮೃತ್ಯು’ ಎಂದು. ಅವನನ್ನು ‘ಮೃತ್ಯುಲೋಕ’ ಎಂಬಾತನು ಹಿಂಬಾಲಿಸಿದನು. ಇವರಿಗೆ ಖಡ್ಗ, ಕ್ಷಾಮ, ಅಂಟುಜಾಡ್ಯ, ಕಾಡುಮೃಗ ಇವುಗಳಿಂದ ಭೂಲೋಕದ ಕಾಲುಭಾಗದ ಜನತೆಯನ್ನು ಕೊಂದುಹಾಕುವುದಕ್ಕೆ ಅಧಿಕಾರವನ್ನು ಕೊಡಲಾಗಿತ್ತು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಖಡ್ಗ, ಕ್ಷಾಮ, ದುಷ್ಟಮೃಗ, ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಜೆರುಸಲೇಮಿನ ಮೇಲೆ ಒಟ್ಟಿಗೆ ಬರಮಾಡಿ ಜನ ಜಾನುವಾರಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


ಶತ್ರುಗಳ ಕತ್ತಿಯ ಮೂಲಕ ನಿಮ್ಮನ್ನು ಸಂಹರಿಸುವೆನು.ನೀವು ನನ್ನ ನಿಬಂಧನವನ್ನು ಮೀರಿದುದರಿಂದ ಆ ಕತ್ತಿ ಪ್ರತಿದಂಡನೆ ಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ಅಂಟುರೋಗವುಂಟಾಗುವಂತೆ ಮಾಡುವೆನು. ಹೀಗೆ ನೀವು ಶತ್ರುಗಳಿಗೆ ಶರಣಾಗುವಿರಿ.


ಈ ಜನರ ಹೆಣಗಳು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವುವು. ಅವುಗಳನ್ನು ಬೆದರಿಸಿ ಓಡಿಸಲು ಯಾರೂ ಇರುವುದಿಲ್ಲ.


ಹೀಗೆ ಕಡಿಯಲ್ಪಟ್ಟವರ ಶವಗಳೆಲ್ಲ ರಣಹದ್ದುಗಳ ಮತ್ತು ಕಾಡುಮೃಗಗಳ ಪಾಲಾಗುವುವು; ಪಕ್ಷಿಗಳಿಗೆ ಬೇಸಿಗೆಯ ಆಹಾರವಾಗುವುವು, ಪ್ರಾಣಿಗಳಿಗೆ ಚಳಿಗಾಲದ ಉಣಿಸಾಗುವುವು.


ನನ್ನ ಸೊತ್ತಾದ ಜನತೆ ನನ್ನ ದೃಷ್ಟಿಗೆ ಚಿತ್ರವರ್ಣದ ಪಕ್ಷಿಯಂತೆ ಅದರ ಸುತ್ತ ರಣಹದ್ದುಗಳ ಕೂಟ ಸೇರಿದೆ ಕಾಡುಮೃಗಗಳನ್ನೆಲ್ಲ ಕರೆದುತನ್ನಿ ಅದನ್ನು ತಿಂದುಬಿಡಲಿಕ್ಕೆ.


ಅವರ ಪ್ರವಾದನೆಗೆ ಕಿವಿಗೊಡುವ ಜನರು ಕೂಡ ಕ್ಷಾಮಖಡ್ಗಗಳಿಗೆ ತುತ್ತಾಗುವರು. ಜೆರುಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು. ಅವರನ್ನೂ ಅವರ ಮಡದಿ ಮಕ್ಕಳನ್ನೂ ಹೂಣಲು ಸಹ ಯಾರೂ ಇರುವುದಿಲ್ಲ. ಅವರ ದುಷ್ಟತನವನ್ನು ಅವರ ಮೇಲೆಯೆ ಸುರಿದುಬಿಡುವೆನು.”


ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.”


ಆತ ನನಗೆ ದಾರಿ ತಪ್ಪಿಸಿರುವನು ತುಂಡರಿಸಿ ದಿಕ್ಕಿಲ್ಲದವನಂತೆ ಮಾಡಿರುವನು.


“ಮತ್ತು ಅವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿ ಇರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿ ಇರುವವರನ್ನು ನಾನು ಮೃಗಗಳಿಗೆ ತುತ್ತು ಮಾಡುವೆನು; ಗುಹೆದುರ್ಗಗಳಲ್ಲಿ ಇರುವವರನ್ನು ವ್ಯಾಧಿಯು ಸಾಯಿಸುವುದು.


ಅದು ಹೇಗೆಂದರೆ: “ಸಿಂಹದ ಬಾಯಿಯಿಂದ ತಪ್ಪಿಸಿಕೊಂಡು ಓಡುತ್ತಿರುವವನು ಕರಡಿಯನ್ನು ಎದುರುಗೊಳ್ಳುವಂತೆ ಆಗುವುದು ಅಥವಾ ಅವನು ಅಲ್ಲಿಂದ ಮನೆಗೆ ಓಡಿಬಂದು ಗೋಡೆಯ ಮೇಲೆ ಕೈಯೂರಲು ಅವನಿಗೆ ಹಾವು ಕಚ್ಚಿದಂತೆ ಆಗುವುದು.


ಕ್ಷಯಿಸಿಹೋಗುವರವರು ಕ್ಷಾಮಡಾಮರದಿಂದ ಸಾಯುವರು ಶಾಪದಿಂದ, ಅಂಟುರೋಗಗಳಿಂದ, ನಾ ಕಳುಹಿಸುವ ಕಾಡುಮೃಗ, ವಿಷಸರ್ಪಗಳಿಂದ.


ಇವರು ಉಪವಾಸ ಕೈಗೊಂಡರೂ ಇವರ ಮೊರೆಯನ್ನು ನಾನು ಕೇಳುವುದಿಲ್ಲ. ದಹನಬಲಿಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸುವುದಿಲ್ಲ. ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಇವರನ್ನು ಮುಗಿಸಿಬಿಡುತ್ತೇನೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು