Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:8 - ಕನ್ನಡ ಸತ್ಯವೇದವು C.L. Bible (BSI)

8 ಅವರ ವಿಧವೆಯರು ನನ್ನ ಭಾಗಕ್ಕೆ ಕಡಲ ಮರಳಿನಂತೆ ಯುವಜನರಿಗೆ ಸಾವು ಬರಮಾಡಿದೆ ನಡುಜೀವನದಲ್ಲೆ. ಅವರ ತಾಯಂದಿರನ್ನು ದುಃಖಕ್ಕೆ ಈಡುಮಾಡಿದೆ ತಟ್ಟನೆ ಅವರನ್ನು ಕಳವಳಕ್ಕೂ ದಿಗಿಲಿಗೂ ಗುರಿಪಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು. ಯುವಕರ ಮತ್ತು ತಾಯಂದಿರ ಮೇಲೆ ಕೊಳ್ಳೆ ಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು. ಅವರ ಮೇಲೆ ಕಳವಳವನ್ನು ಮತ್ತು ದಿಗಿಲನ್ನು ತಟ್ಟನೆ ಬೀಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು; ಯುವಕರ ತಾಯಿಗಳ ಮೇಲೆ ಕೊಳ್ಳೆಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು; ಅವರ ಮೇಲೆ ಕಳವಳವನ್ನೂ ದಿಗಿಲನ್ನೂ ತಟ್ಟನೆ ಬೀಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅನೇಕ ಹೆಂಗಸರು ತಮ್ಮ ಗಂಡಂದಿರನ್ನು ಕಳೆದುಕೊಳ್ಳುವರು. ಸಮುದ್ರದಡದಲ್ಲಿದ್ದ ಮರಳು ಕಣಗಳಿಗಿಂತ ವಿಧವೆಯರ ಸಂಖ್ಯೆ ಹೆಚ್ಚಾಗುವುದು. ಮಧ್ಯಾಹ್ನದಲ್ಲಿಯೇ ನಾನು ಬಾತುಕನನ್ನು ತರುವೆನು. ಆ ಘಾತುಕನು ಯೆಹೂದದ ತಾಯಂದಿರ ಮೇಲೆರಗುವನು. ನಾನು ಯೆಹೂದದ ಜನರಿಗೆ ನೋವನ್ನು ಮತ್ತು ಭಯವನ್ನು ತರುವೆನು; ಅತೀ ಶೀಘ್ರದಲ್ಲಿಯೇ ಹೀಗಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಕಿಗಿಂತ ಹೆಚ್ಚಾಗಿರುವರು, ಯುವಕರ ತಾಯಿಗಳ ಮೇಲೆ ನಾಶ ಮಾಡುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು, ಅವರ ಮೇಲೆ ಕಳವಳವನ್ನೂ, ದಿಗಿಲನ್ನೂ ತಟ್ಟನೆ ಬೀಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:8
15 ತಿಳಿವುಗಳ ಹೋಲಿಕೆ  

ಎಲೌ, ಸಿಯೋನ್ ನಗರಿಯೇ, ನಿನ್ನ ವೀರರು ಖಡ್ಗಕ್ಕೆ ತುತ್ತಾಗುವರು; ನಿನ್ನ ಯೋಧರು ಯುದ್ಧದಲ್ಲಿ ಮಡಿಯುವರು.


ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕು.


ಆದಕಾರಣ ಅಡವಿಯ ಸಿಂಹ ಅವರನ್ನು ಕೊಲ್ಲುವುದು ಕಾಡಿನ ತೋಳ ಕೊಳ್ಳೆಹೊಡೆಯುವುದು ಚಿರತೆ ಅವರ ಪಟ್ಟಣಗಳಿಗೆ ಹೊಂಚುಹಾಕುವುದು ಅಲ್ಲಿಂದ ಹೊರಬರುವ ಪ್ರತಿಯೊಬ್ಬನನ್ನು ಸೀಳುವುದು. ಅವರ ಅಪರಾಧಗಳೋ ಬಹಳ, ಅವರ ದ್ರೋಹಗಳೋ ಅಪಾರ !


ಇಗೋ ಅವರು ರಾಷ್ಟ್ರಗಳಿಗೆ ಅರುಹಿಸುವ ಸಮಾಚಾರ : ಮುತ್ತಿಗೆ ಹಾಕುವವರು ದೂರದೇಶದಿಂದ ಜೆರುಸಲೇಮಿಗೆ ಬರುವರು. ಜುದೇಯದ ಪಟ್ಟಣಗಳಿಗೆ ವಿರುದ್ಧ ಘೋಷಣೆಗಳನ್ನು ಪ್ರಕಟಿಸುವರು.


ನಿನ್ನ ಪುರದ್ವಾರಗಳಲ್ಲಿ ದುಃಖ ಪ್ರಲಾಪ ತುಂಬಿರುವುದು. ನೀನು ನಗ್ನಳಂತೆ ನೆಲದ ಮೇಲೆ ಕುಳಿತುಬಿಡುವೆ.


ಆ ಕಾಲ ಬಂದಾಗ ಏಳುಮಂದಿ ಅವಿವಾಹಿತ ಮಹಿಳೆಯರು ಒಬ್ಬ ಪುರುಷನನ್ನು ಹಿಡಿದುಕೊಂಡು: “ನಾವು ಸ್ವಂತವಾಗಿ ದುಡಿದು ಊಟಮಾಡುತ್ತೇವೆ, ಸ್ವಂತವಾಗಿ ಸಂಪಾದನೆಮಾಡಿ ಬಟ್ಟೆ ಉಡುತ್ತೇವೆ. ನೀನು ನಮ್ಮ ಯಜಮಾನನೆನಿಸಿಕೊಂಡು ನಮ್ಮ ಮಾನವನ್ನು ಕಾಪಾಡಿದರೆ ಸಾಕು,” ಎಂದು ಕೋರುವರು.


ಏಕೆಂದರೆ ಇಲ್ಲಿ ಆ ಗಂಡುಹೆಣ್ಣು ಮಕ್ಕಳಿಗೆ, ಅವರನ್ನು ಹೆತ್ತ ತಾಯಿಯರಿಗೆ, ಅವರನ್ನು ಈ ನಾಡಿನಲ್ಲಿ ಪಡೆದ ತಂದೆಯರಿಗೆ ಸಂಭವಿಸಲು ಇರುವುದನ್ನು ಸರ್ವೇಶ್ವರನಾದ ನಾನು ಹೇಳುತ್ತೇನೆ, ಕೇಳು:


ಆದರೆ ಈಗ ಅವರ ಮಕ್ಕಳು ಕ್ಷಾಮಕ್ಕೆ ಗುರಿಯಾಗಲಿ. ಕತ್ತಿಗೆ ತುತ್ತಾಗಲಿ. ಅವರ ಮಡದಿಯರು ವಿಧವೆಯರಾಗಲಿ, ಮಕ್ಕಳನ್ನು ಕಳೆದುಕೊಳ್ಳಲಿ, ಅವರ ಗಂಡಂದಿರು ಸತ್ತುಬೀಳಲಿ. ಯುವಕರು ಕಾಳಗ-ಕತ್ತಿಗೆ ಬಲಿಯಾಗಲಿ.


ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನಗೆ ವಿರುದ್ಧ ಏರ್ಪಡಿಸುವೆನು. ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಬೆಂಕಿಗೆ ಕಡಿದು ಹಾಕುವರು.


ನಾವು ತಂದೆಯಿಲ್ಲದ ಅನಾಥರು ನಮ್ಮ ತಾಯಿಗಳು ವಿಧವೆಯರು.


ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ. ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ಹಗಲಿನಲ್ಲೇ ನೀವು ಮುಗ್ಗರಿಸುತ್ತೀರಿ. ರಾತ್ರಿಯಲ್ಲಿ ಪ್ರವಾದಿಗಳು ಸಹ ನಿಮ್ಮೊಂದಿಗೆ ಮುಗ್ಗರಿಸುತ್ತಾರೆ. ನಿಮ್ಮ ವಂಶವೃಕ್ಷವನ್ನೇ ನಾನು ನಿರ್ಮೂಲಮಾಡುವೆನು.


ಸರ್ವೇಶ್ವರ ಜನರಿಗೆ : “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು