Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:11 - ಕನ್ನಡ ಸತ್ಯವೇದವು C.L. Bible (BSI)

11 ಆಗ ನೀನು ಅವರಿಗೆ ಹೀಗೆಂದು ಹೇಳಬೇಕು : ಸರ್ವೇಶ್ವರನ ಈ ಮಾತಿಗೆ ಕಿವಿಗೊಡಿ : ‘ನಿಮ್ಮ ಪೂರ್ವಜರು ನನ್ನನ್ನು ತೊರೆದುಬಿಟ್ಟರು. ಅನ್ಯದೇವತೆಗಳನ್ನು ಹಿಂಬಾಲಿಸಿದರು. ಅವುಗಳಿಗೆ ಸೇವೆಸಲ್ಲಿಸಿ ಪೂಜಿಸಿದರು. ನನ್ನನ್ನು ಬಿಟ್ಟುದಲ್ಲದೆ ನನ್ನ ಧರ್ಮವಿಧಿಗಳನ್ನು ಮೀರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪೂರ್ವಿಕರು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ, ಪೂಜಿಸಿ ನನ್ನನ್ನು ಬಿಟ್ಟು, ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು ಅವರಿಗೆ ಹೀಗೆ ಹೇಳಬೇಕು - ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪಿತೃಗಳು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸಿ ನನ್ನನ್ನು ಬಿಟ್ಟು ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀನು ಅವರಿಗೆ ಹೀಗೆ ಹೇಳಬೇಕು: ‘ನಿಮ್ಮ ಪೂರ್ವಿಕರು ನನ್ನ ಉಪದೇಶದಂತೆ ನಡೆಯುವದನ್ನು ಬಿಟ್ಟುಬಿಟ್ಟರು’ ಎಂದು ದೇವರು ಹೇಳುತ್ತಾನೆ. ‘ಅವರು ನನ್ನ ಅನುಸರಣೆಯನ್ನು ಬಿಟ್ಟು ಬೇರೆ ದೇವರುಗಳನ್ನು ಅನುಸರಿಸಲು ಮತ್ತು ಸೇವಿಸಲು ಪ್ರಾರಂಭಿಸಿದರು. ಅವರು ಅನ್ಯದೇವರುಗಳನ್ನು ಪೂಜಿಸಿದರು. ನಿಮ್ಮ ಪೂರ್ವಿಕರು ನನ್ನನ್ನು ತ್ಯಜಿಸಿ ನನ್ನ ಧರ್ಮವಿಧಿಗಳನ್ನು ಮೀರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ‘ನಿಮ್ಮ ಪಿತೃಗಳು ನನ್ನನ್ನು ಬಿಟ್ಟುಬಿಟ್ಟದ್ದರಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಅವರು ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳನ್ನು ಆರಾಧಿಸಿ, ನನ್ನನ್ನು ತೊರೆದುಬಿಟ್ಟು, ನನ್ನ ನಿಯಮವನ್ನು ಕೈಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:11
21 ತಿಳಿವುಗಳ ಹೋಲಿಕೆ  

ಕ್ರೈಸ್ತರಲ್ಲದವರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಮಾಡಿದ್ದು ಸಾಕು. ಆಗ ನೀವು ಅಶ್ಲೀಲತೆ, ಕಾಮ, ಕುಡುಕುತನ, ಅಮಲೇರುವಿಕೆ, ದುಂದೌತಣ ಮತ್ತು ಯೋಗ್ಯವಲ್ಲದ ವಿಗ್ರಹಾರಾಧನೆ - ಈ ಮುಂತಾದವುಗಳಿಗೆ ಒಳಗಾಗಿದ್ದಿರಿ.


ಆದರೆ ಯಾರ ಮನಸ್ಸು ತಮ್ಮ ಅಸಹ್ಯವಸ್ತುಗಳನ್ನೂ ಅನಿಷ್ಟ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು, ಇದು ಸರ್ವೇಶ್ವರನಾದ ದೇವರ ನುಡಿ.”


‘ಈ ನಗರದವರು ತಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯನ್ನು ನಿರಾಕರಿಸಿ ಅನ್ಯದೇವತೆಗಳನ್ನು ಪೂಜಿಸಿ ಆರಾಧಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು’ ಎಂದು ಹೇಳಿಕೊಳ್ಳುವರು.”


ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.


ಆಗ ಅವರಿಗೆ, ‘ಈ ನಾಡಿನವರು ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಬರಮಾಡಿದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಸರ್ವೇಶ್ವರ ಈ ಎಲ್ಲಾ ಆಪತ್ತು-ವಿಪತ್ತುಗಳನ್ನು ಬರಮಾಡಿದ್ದಾರೆ’ ಎಂಬ ಉತ್ತರಸಿಕ್ಕುವುದು,” ಎಂದರು.


ನನ್ನ ಮಾತನ್ನು ಕೇಳದೆ, ಧರ್ಮಮಾರ್ಗದಲ್ಲಿ ನಡೆಯದೆ, ಹಟಮಾರಿಗಳಂತೆ ಸ್ವೇಚ್ಛಾನುಸಾರ ನಡೆದುಕೊಂಡರು. ತಮ್ಮ ಪೂರ್ವಜರು ಕಲಿಸಿಕೊಟ್ಟ ಹಾಗೆ ಬಾಳ್‍ದೇವತೆಗಳನ್ನು ಹಿಂಬಾಲಿಸಿದರು.


ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’


ಆಗ ಅವರಿಗೆ, ‘ಈ ನಾಡಿನವರು ತಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿದ ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಭಿಸಿ, ಅವುಗಳಿಗೆ ಅಡ್ಡಬಿದ್ದು ಸೇವೆಸಲ್ಲಿಸಿದ್ದರಿಂದಲೇ ಅವರು ಈ ಎಲ್ಲಾ ಆಪತ್ತುಗಳನ್ನು ಅವರಿಗೆ ಬರಮಾಡಿ ಇದ್ದಾರೆ,’ ಎಂಬ ಉತ್ತರ ಸಿಕ್ಕುವುದು,” ಎಂದರು.


ಸರ್ವೇಶ್ವರ ಇಂತೆನ್ನುತ್ತಾರೆ: “ಜುದೇಯದ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಏಕೆಂದರೆ ಅವರು ನನ್ನ ಧರ್ಮಶಾಸ್ತ್ರವನ್ನು ತೃಣೀಕರಿಸಿದ್ದಾರೆ. ನನ್ನ ವಿಧಿನಿಯಮಗಳನ್ನು ಮೀರಿದ್ದಾರೆ. ಅವರ ಪೂರ್ವಜರು ಆರಾಧಿಸಿದ ಸುಳ್ಳುದೇವತೆಗಳನ್ನು ಪೂಜಿಸುತ್ತಾ ದಾರಿತಪ್ಪಿದ್ದಾರೆ.


ನಿಮ್ಮ ಪೂರ್ವಜರ ಕಾಲದಿಂದಲೂ ನನ್ನ ವಿಧಿಗಳನ್ನು ಅನುಸರಿಸದೆ, ಅಡ್ಡದಾರಿ ಹಿಡಿದಿದ್ದೀರಿ. ಈಗ ಮರಳಿ ನನಗೆ ಅಭಿಮುಖರಾಗಿರಿ. ನಾನು ನಿಮಗೆ ಅಭಿಮುಖನಾಗುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ‘ನಾವು ನಿಮಗೆ ಅಭಿಮುಖರಾಗಲು ಏನು ಮಾಡಬೇಕು?’ ಎಂದು ಕೇಳುತ್ತೀರೋ?


ಈ ಇಸ್ರಯೇಲರು ಬಾಳ್ ದೇವತೆಯ ಪ್ರತಿಮೆಗಳನ್ನು ಪೂಜಿಸಿ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಇವು ನನಗೇಕೆ ಸಂಭವಿಸಿದವು ಎಂದು ಮನದೊಳಗೇ ನೀನು ಅಂದುಕೊಳ್ಳುವೆ. ನೀನು ಮಾಡಿದುದು ಮಹಾಪಾಪ ! ಆದ್ದರಿಂದ ನಿನ್ನ ಉಡುಗೆಯನ್ನೇ ಕೀಳಲಾಗುವುದು. ನೀನು ಅತ್ಯಾಚಾರಕ್ಕೆ ಈಡಾಗುವೆ.


ಅಲ್ಲಿನವರು ತಮಗೂ ನಿಮಗೂ ಮತ್ತು ನಿಮ್ಮ ಪೂರ್ವಜರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ಪೂಜಿಸುವುದಕ್ಕೆ ತವಕಪಟ್ಟರು. ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದರು. ಆದ್ದರಿಂದಲೇ ಆ ಸ್ಥಳಗಳು ಹಾಳಾದವು, ನಿರ್ಜನಪ್ರದೇಶಗಳಾದವು.


ನಮ್ಮ ಪಿತೃಗಳು ಪಾಪಮಾಡಿ ಗತಿಸಿಹೋದರು ಅವರ ದೋಷಫಲವನ್ನು ನಾವು ಸವಿಯಬೇಕಾಗಿ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು