ಯೆರೆಮೀಯ 16:16 - ಕನ್ನಡ ಸತ್ಯವೇದವು C.L. Bible (BSI)16 ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ, ನಾನು ಬಹುಮಂದಿ ಬೆಸ್ತರನ್ನು ಕಳಿಸುವೆನು, ಅವರು ನನ್ನ ಜನರನ್ನು ಹಿಡಿಯುವರು, ಬಳಿಕ ಬಹುಜನ ಬೇಡರನ್ನು ಕಳಿಸುವೆನು. ಅವರು ಎಲ್ಲ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ನನ್ನ ಜನರನ್ನು ಹೊರಡಿಸಿ ಬೇಟೆಯಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹೋವನು ಹೀಗನ್ನುತ್ತಾನೆ - ಇಗೋ, ನನ್ನ ಜನರನ್ನು ಹಿಡಿಯುವದಕ್ಕೆ ಬಹುಮಂದಿ ಬೆಸ್ತರನ್ನು ಕರೆಯಿಸುವೆನು; ಆಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ ಬೇಟೆಯಾಡುವದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೆಹೋವನು, “ನಾನು ಅನೇಕ ಮೀನುಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಮೀನುಗಾರರು ಯೆಹೂದದ ಜನರನ್ನು ಬಂಧಿಸುವರು. ಇದಾದ ಮೇಲೆ ನಾನು ಹಲವಾರು ಜನ ಬೇಟೆಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಬೇಟೆಗಾರರು ಪ್ರತಿಯೊಂದು ಪರ್ವತ, ಬೆಟ್ಟ ಮತ್ತು ಬಂಡೆಗಳ ಸಂದುಗೊಂದುಗಳಲ್ಲಿ ಯೆಹೂದ್ಯರನ್ನು ಬೇಟೆಯಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಇಗೋ, ನಾನು ಅನೇಕ ಮೀನುಗಾರರನ್ನು ಕಳುಹಿಸುತ್ತೇನೆ. ಇವರು ಅವರನ್ನು ಹಿಡಿಯುವರು. ಆಮೇಲೆ ಅನೇಕ ಬೇಟೆಗಾರರನ್ನು ಕಳುಹಿಸುವೆನು. ಇವರು ಎಲ್ಲಾ ಬೆಟ್ಟಗಳ ಮೇಲೆಯೂ, ಎಲ್ಲಾ ಗುಡ್ಡಗಳ ಮೇಲೆಯೂ, ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡುವರು. ಅಧ್ಯಾಯವನ್ನು ನೋಡಿ |