Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:2 - ಕನ್ನಡ ಸತ್ಯವೇದವು C.L. Bible (BSI)

2 “ನೀನು ಮದುವೆಯಾಗಬೇಡ, ಗಂಡು ಅಥವಾ ಹೆಣ್ಣು ಮಕ್ಕಳು ನಿನಗೆ ಈ ಸ್ಥಳದಲ್ಲಿ ಹುಟ್ಟದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಮದುವೆಯಾಗಬೇಡ, ಗಂಡು ಮತ್ತು ಹೆಣ್ಣು ಮಕ್ಕಳು ಈ ಸ್ಥಳದಲ್ಲಿ ಹುಟ್ಟದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಮದುವೆಯಾಗಬೇಡ, ಗಂಡು ಹೆಣ್ಣು ಮಕ್ಕಳು ಈ ಸ್ಥಳದಲ್ಲಿ ನಿನಗೆ ಹುಟ್ಟದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆರೆಮೀಯನೇ, ನೀನು ಮದುವೆ ಮಾಡಿಕೊಳ್ಳಬಾರದು. ನೀನು ಇಲ್ಲಿ ಮಕ್ಕಳನ್ನು ಹೊಂದಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀನು ಮದುವೆಯಾಗಬೇಡ. ನಿನಗೆ ಪುತ್ರರಾಗಲಿ, ಪುತ್ರಿಯರಾಗಲಿ ಈ ಸ್ಥಳದಲ್ಲಿ ಹುಟ್ಟದಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:2
9 ತಿಳಿವುಗಳ ಹೋಲಿಕೆ  

ಕಾಲವೊಂದು ಬರುವುದು; ಆಗ ಜನರು, ‘ಬಂಜೆಯರೇ ಭಾಗ್ಯವಂತರು! ಹೆರದವಳೇ, ಹಾಲೂಡಿಸದವಳೇ ಧನ್ಯಳು!’ ಎನ್ನುವರು.


ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಮತ್ತು ಹಾಲೂಡಿಸುವ ತಾಯಂದಿರ ಗೋಳೇನು! ಈ ನಾಡು ಮಹಾವಿಪತ್ತಿಗೆ ಈಡಾಗುವುದು. ಈ ಜನತೆ ದೈವಕೋಪಕ್ಕೆ ಗುರಿಯಾಗುವುದು.


ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳಿಗೆ ಗೊತ್ತುಮಾಡಿದ್ದ ಅಳಿಯಂದಿರಿಗೆ ಸಂಗತಿಯನ್ನು ಹೇಳಿ, “ನೀವೆದ್ದು ಈ ಸ್ಥಳವನ್ನು ಬಿಟ್ಟ ಹೊರಡಿರಿ; ಈ ಊರನ್ನು ಸರ್ವೇಶ್ವರ ಸ್ವಾಮಿ ನಾಶ ಮಾಡಲಿದ್ದಾರೆ” ಎಂದು ಹೇಳಿದನು. ಆ ಅಳಿಯಂದಿರಿಗೆ ಇದೊಂದು ಪರಿಹಾಸ್ಯವಾಗಿ ಕಾಣಿಸಿತು.


ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಹಾಗೂ ಹಾಲೂಡಿಸುವ ತಾಯಂದಿರ ಗೋಳೇನು!


ಸರ್ವೇಶ್ವರ ಸ್ವಾಮಿ ನನಗೆ ಈ ಸಂದೇಶವನ್ನು ದಯಪಾಲಿಸಿದರು :


ಏಕೆಂದರೆ ಇಲ್ಲಿ ಆ ಗಂಡುಹೆಣ್ಣು ಮಕ್ಕಳಿಗೆ, ಅವರನ್ನು ಹೆತ್ತ ತಾಯಿಯರಿಗೆ, ಅವರನ್ನು ಈ ನಾಡಿನಲ್ಲಿ ಪಡೆದ ತಂದೆಯರಿಗೆ ಸಂಭವಿಸಲು ಇರುವುದನ್ನು ಸರ್ವೇಶ್ವರನಾದ ನಾನು ಹೇಳುತ್ತೇನೆ, ಕೇಳು:


ಸಂಸಾರಿಗಳಾಗಿ ಗಂಡು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಗಳನ್ನು ತೆಗೆದುಕೊಳ್ಳಿ. ನಿಮ್ಮ ಹೆಣ್ಣುಗಳನ್ನು ಗಂಡುಗಳಿಗೆ ಕೊಡಿ. ಅವರೂ ಗಂಡುಹೆಣ್ಣು ಮಕ್ಕಳನ್ನು ಪಡೆಯಲಿ. ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕಡಿಮೆಯಾಗದಿರಿ.


ಸುತ್ತಮುತ್ತಲೂ ದಿಗಿಲು ಹುಟ್ಟಿಸುವ ನನ್ನ ಹಗೆಗಳನ್ನೆ ಕರೆಸಿದೆಯಲ್ಲಾ ಹಬ್ಬಕ್ಕೋ ಎಂಬಂತೆ ! ಸರ್ವೇಶ್ವರನ ಪ್ರಕೋಪದ ದಿನದಂದು ತಪ್ಪಿಸಿಕೊಳ್ಳಲಿಲ್ಲ ಯಾರೂ; ಉಳಿಯಲಿಲ್ಲ ಯಾರೂ. ಶತ್ರು ಸಂಹರಿಸಿಬಿಟ್ಟನಲ್ಲಾ ನಾನು ಸಾಕಿ ಆರೈಕೆ ಮಾಡಿದವರನ್ನೂ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು