Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಜುದೇಯದ ಜನರಿಗೆ ಹೀಗೆನ್ನುತ್ತಾರೆ : “ಜುದೇಯದ ಪಾಪವನ್ನು ಕಬ್ಬಿಣದ ಲೇಖನಿಯಿಂದ, ವಜ್ರದ ಮೊನೆಯಿಂದ ಬರೆಯಲಾಗಿದೆ. ಅದನ್ನು ನಿಮ್ಮ ಜನರ ಹೃದಯದ ಹಲಗೆಯ ಮೇಲೂ ಅವರ ಬಲಿಪೀಠಗಳ ಕೊಂಬುಗಳ ಮೇಲೂ ಕೆತ್ತಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ. ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ; ಅವರ ಹೃದಯದ ಹಲಗೆಯಲ್ಲಿಯೂ ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಯೆಹೂದದ ಜನರ ಅಪರಾಧ ಅಳಿಸಲಾಗದ ಸ್ಥಳದಲ್ಲಿ ಬರೆಯಲಾಗಿದೆ. ಆ ಅಪರಾಧಗಳು ಕಬ್ಬಿಣದ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಪಾಪಗಳು ವಜ್ರದ ಮೊನೆಯುಳ್ಳ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಹೃದಯವೇ ಆ ಕಲ್ಲು, ಆ ಪಾಪಗಳು ಅವರ ಯಜ್ಞವೇದಿಕೆಗಳ ಕೊಂಬುಗಳಲ್ಲಿ ಕೆತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ, ವಜ್ರದ ಮೊನೆಯಿಂದಲೂ ಬರೆಯಲಾಗಿದೆ. ಅದು ಅವರ ಹೃದಯದ ಹಲಗೆಯ ಮೇಲೆಯೂ ಅವರ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:1
15 ತಿಳಿವುಗಳ ಹೋಲಿಕೆ  

ಪ್ರೀತಿ ಸತ್ಯತೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಪಟ್ಟಿಯಾಗಿರಲಿ, ಹೃದಯದಹಲಗೆಯಲ್ಲಿ ಲಿಖಿತವಾಗಿರಲಿ.


ಕ್ರಿಸ್ತಯೇಸುವೇ ನಮ್ಮಿಂದ ಬರೆಸಿದ ಪತ್ರ ನೀವು; ಇದು ಸ್ಪಷ್ಟ. ಬರೆದಿರುವುದು ಶಾಯಿಯಿಂದಲ್ಲ, ಜೀವಂತ ದೇವರ ಪವಿತ್ರಾತ್ಮರಿಂದ. ಕೊರೆದದ್ದೂ ಕಲ್ಲಿನ ಮೇಲೆ ಅಲ್ಲ, ಮಾನವ ಹೃದಯದ ಮೇಲೆ.


ಅವು ನಿನ್ನ ಬೆರಳಿಗೆ ಉಂಗುರವಾಗಿರಲಿ, ನಿನ್ನ ಹೃದಯದ ಹಲಗೆಯಲ್ಲಿ ಬರೆದಿರಲಿ.


ಯಾಜಕನು ಆ ಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಡಬೇಕು.


ಆದರೂ ಗಿಲ್ಯಾದಿನಲ್ಲಿ ಅಧರ್ಮ ನೆಲೆಗೊಂಡಿದೆ. ಅದಕ್ಕೆ ದುರ್ಗತಿ ಕಾದಿದೆ. ಗಿಲ್ಗಾಲಿನಲ್ಲಿ ಬಸವನಿಗೆ ಯಜ್ಞಗಳನ್ನು ಅರ್ಪಿಸಲಾಗುತ್ತಿದೆ. ಅಲ್ಲಿನ ಯಜ್ಞವೇದಿಗಳು ಪುಡಿಪುಡಿಯಾಗುವುವು; ಉಳುವ ನೇಗಿಲಿಗೆ ಸಿಕ್ಕುವ ಕಲ್ಲುಕುಪ್ಪೆಗಳಾಗುವುವು.”


ನೋಡು, ನಿನ್ನ ಚಿತ್ರ ಕೊರೆದಿದೆ ನನ್ನ ಅಂಗೈಗಳಲೆ ನಿನ್ನ ಪೌಳಿಗೋಡೆಗಳು ಇವೆ ಸದಾ ನನ್ನ ಕಣ್ಣೆದುರಿನಲೆ.


ನೀನು ಎಷ್ಟೇ ಚೌಳಿನಿಂದ ತೊಳೆದುಕೊಂಡರೂ ಎಷ್ಟೇ ಸಬ್ಬುಸೀಗೆಯಿಂದ ಉಜ್ಜಿಕೊಂಡರೂ ನಿನ್ನ ಅಕ್ರಮ ನನ್ನೆದುರಿಗೆ ಕಣ್ಣುಕಿಚ್ಚಾಗಿ ನಿಂತಿದೆ. ಇದು ಸರ್ವೇಶ್ವರ ಸ್ವಾಮಿಯಾದ ನನ್ನ ನುಡಿ.


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಆದರೆ ಅವರ ದುಷ್ಕೃತ್ಯಗಳೆಲ್ಲ ಸರ್ವೇಶ್ವರಸ್ವಾಮಿಯ ಜ್ಞಾಪಕದಲ್ಲಿ ಇರುತ್ತವೆ ಎಂಬುದನ್ನು ಅವರು ಮನದಟ್ಟುಮಾಡಿಕೊಂಡಿಲ್ಲ. ಅವರ ನೀಚಕೃತ್ಯಗಳು ಅವರನ್ನು ಆವರಿಸಿಕೊಂಡಿವೆ; ನನ್ನ ಕಣ್ಮುಂದೆಯೇ ಇವೆ.


ಧರ್ಮಶಾಸ್ತ್ರವನ್ನಾಗಲೀ ಪೂರ್ವಕಾಲದ ಪ್ರವಾದಿಗಳ ಮುಖಾಂತರ, ಸೇನಾಧಿಶ್ವರ ಸರ್ವೇಶ್ವರ ಆದ ನಾನು ತಿಳಿಸಿದ ನನ್ನಾತ್ಮಪ್ರೇರಿತ ಮಾತುಗಳನ್ನಾಗಲೀ ಕೇಳದೆಹೋದರು. ಹೀಗೆ ನನ್ನ ಕಡುಕೋಪಕ್ಕೆ ಗುರಿಯಾದರು.


ಎಲೈ ಯೆಹೂದ ಜನರೇ, ನಿಮಗೆ ಎಷ್ಟು ನಗರಗಳಿವೆಯೋ ಅಷ್ಟೂ ದೇವರುಗಳಿದ್ದಾರೆ. ಜೆರುಸಲೇಮಿನಲ್ಲಿ ಹಾದಿಬೀದಿಗಳು ಎಷ್ಟಿವೆಯೋ ಅಷ್ಟೂ ಬಲಿಪೀಠಗಳಿವೆ, ಆ ತುಚ್ಛ ದೇವತೆ ಬಾಳನಿಗೆ ಧೂಪಾರತಿಯೆತ್ತಲು.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


“ಎಫ್ರಯಿಮ್ ಪಾಪಪರಿಹಾರಕ್ಕಾಗಿ ಬಲಿಪೀಠಗಳನ್ನು ಕಟ್ಟಿದೆ. ಆ ಬಲಿಪೀಠಗಳೇ ಅದರ ಪಾಪಕ್ಕೆ ಕಾರಣವಾಗಿ ಪರಿಣಮಿಸಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು