Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:11 - ಕನ್ನಡ ಸತ್ಯವೇದವು C.L. Bible (BSI)

11 ಅನ್ಯಾಯವಾಗಿ ಆಸ್ತಿಪಾಸ್ತಿಗಳನ್ನು ಗಳಿಸಿಕೊಳ್ಳುವ ಮಾನವ ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನ. ಅವು ಅವನಿಂದ ತೊಲಗಿಹೋಗುವುವು ನಡುಪ್ರಾಯದಲ್ಲಿ ಅವನು ಮೂರ್ಖನಾಗಿ ಕಂಡುಬರುವನು ಅಂತ್ಯಕಾಲದಲ್ಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು; ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕೆಲವು ಸಲ ಪಕ್ಷಿಯು ತಾನು ಇಡದ ಮೊಟ್ಟೆಗೆ ಕಾವು ಕೊಡುತ್ತದೆ. ಹಣಕ್ಕಾಗಿ ಮೋಸಮಾಡುವ ಮನುಷ್ಯನು ಆ ಪಕ್ಷಿಯಂತಿರುವನು, ಅವನು ತನ್ನ ಮಧ್ಯಪ್ರಾಯದಲ್ಲಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು. ಅವನು ತನ್ನ ಅಂತ್ಯಕಾಲದಲ್ಲಿ ಮೂರ್ಖನಾಗಿ ಕಂಡುಬರುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಹಾಗೆ, ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಹಾಗೆಯೇ ಇದ್ದಾನೆ. ಅವನು ತನ್ನ ಮಧ್ಯಪ್ರಾಯದಲ್ಲಿ ಅದನ್ನು ಬಿಡುವನು. ತನ್ನ ಅಂತ್ಯದಲ್ಲಿ ಅವನು ಮೂರ್ಖನೆಂದು ಸಾಬೀತಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:11
39 ತಿಳಿವುಗಳ ಹೋಲಿಕೆ  

ಪ್ರಾಮಾಣಿಕನಿಗೆ ಪೂರ್ಣಾಶೀರ್ವಾದ; ಹಣವಂತನಾಗಲು ಹಾತೊರೆಯುವವನು ಶಿಕ್ಷಾರ್ಹ.


ಹಬೆಯಂತೆ ನಾಪತ್ತೆ ಸುಳ್ಳಿನಿಂದ ಸಿಕ್ಕಿದ ಸಂಪತ್ತು; ಮೃತ್ಯುಪಾಶದಂತೆ ಅದೊಂದು ವಿಪತ್ತು.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


“ನೆರೆಯವನಿಗೆ ಕೂಲಿಕೊಡದೆ ಬಿಟ್ಟಿಕೆಲಸ ಮಾಡಿಸಿಕೊಂಡು ಅರಮನೆಯನ್ನು ಕಟ್ಟಿಸಿಕೊಳ್ಳುವವನಿಗೆ ಧಿಕ್ಕಾರ ! ಅವನು ಅರಮನೆಯನ್ನು ಕಟ್ಟಿಸಿಕೊಳ್ಳುವುದು ಅನೀತಿಯಿಂದ ಮಹಡಿಗಳನ್ನು ನಿರ್ಮಿಸಿಕೊಳ್ಳುವುದು ಅನ್ಯಾಯದಿಂದ.


ಬಡ್ಡಿಬಾಕಿಗಳಿಂದ ಬೆಳೆದ ಆಸ್ತಿ, ಬಡವರಲ್ಲಿ ಕನಿಕರವುಳ್ಳವನಿಗೆ ನಿಧಿ.


ಸೂರೆಮಾಡುವವನು ಸ್ವಂತ ಮನೆಗೇ ಕೇಡುಮಾಡುತ್ತಾನೆ; ಲಂಚವನ್ನು ದ್ವೇಷಿಸುವವನು ಸುಖವಾಗಿ ಬಾಳುತ್ತಾನೆ.


ಇವರದು ಬರೀ ಕಾಮುಕ ಕಣ್ಣು; ಇವರು ಎಂದಿಗೂ ಇಂಗದ ಪಾಪಬಯಕೆಯುಳ್ಳವರು; ದುರ್ಬಲರನ್ನು ವಂಚಿಸಿ ವಶಪಡಿಸಿಕೊಳ್ಳುವುದೇ ಇವರ ಹವ್ಯಾಸ; ಲೋಭದಲ್ಲೇ ಪಳಗಿದ ಮನಸ್ಸುಳ್ಳವರು ಹಾಗೂ ಶಾಪಗ್ರಸ್ತ ಸಂತಾನದವರು ಇವರು!


ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ.


ಹೊಸ್ತಿಲನ್ನು ದಾಟಿ ಮೋಸ, ವಂಚನೆ, ಹಿಂಸಾಚಾರಗಳಿಂದ ದೋಚಿದವುಗಳನ್ನು ತಂದು ತಮ್ಮ ದೇವರ ಮಂದಿರವನ್ನು ತುಂಬಿಸುವ ಎಲ್ಲರನ್ನೂ ಆ ದಿನದಂದು ನಾನು ದಂಡಿಸುವೆನು.


ಆಸ್ತಿ ಗಳಿಸಲು ಲೋಭಿಗೆ ಆತುರ; ತನಗೆ ಕೊರತೆ ಕಾದಿದೆಯೆಂದು ಆತ ಅರಿಯ.


ಬಿಟ್ಟಿಯಾಗಿ ಸಿಕ್ಕಿದ ಸಂಪತ್ತು ಬೇಗನೆ ಕರಗುವುದು; ದುಡಿದು ಕೂಡಿಸಿದ ಹಣ ಅಭಿವೃದ್ಧಿಯಾಗುವುದು.


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಐಶ್ವರ್ಯವಂತರಾಗಬೇಕೆಂದು ಆಶಿಸುವವರು ಅನೇಕ ಪ್ರಲೋಭನೆಗಳಿಗೆ ಒಳಗಾಗುತ್ತಾರೆ. ನಿರರ್ಥಕವೂ ಹಾನಿಕರವೂ ಆದ ಆಶಾಪಾಶಗಳಲ್ಲಿ ಸಿಕ್ಕಿಬೀಳುತ್ತಾರೆ. ಇಂಥ ದುರಾಶೆಗಳು ಮನುಷ್ಯರನ್ನು ಕೇಡಿಗೂ ವಿನಾಶಕ್ಕೂ ಒಯ್ಯುತ್ತವೆ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ನಾನು ಶಾಪವನ್ನು ಕಳುಹಿಸುತ್ತೇನೆ. ಅದು ಕಳ್ಳನ ಮನೆಯನ್ನೂ ನನ್ನ ಹೆಸರೆತ್ತಿ ಸುಳ್ಳಾಣೆಯಿಡುವವನ ಮನೆಯನ್ನೂ ಹೊಕ್ಕು, ಅಲ್ಲಿ ತಂಗಿದ್ದು ಅದನ್ನು ಕಲ್ಲುಮರ ಸಹಿತ ಸಂಪೂರ್ಣವಾಗಿ ಭಸ್ಮಮಾಡುವುದು,” ಎಂದನು.


ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.


ನನ್ನ ಜನಾಂಗಕ್ಕೆ ಸೇರಿದ ಮಹಿಳೆಯರನ್ನು ಪ್ರಿಯವಾದ ಅವರ ಗೃಹಗಳಿಂದ ಹೊರದಬ್ಬುತ್ತೀರಿ. ಅವರ ಹಸುಳೆಗಳಿಗೆ ನನ್ನ ಆಶೀರ್ವಾದ ಇನ್ನೆಂದಿಗೂ ಲಭಿಸದಂತೆ ಮಾಡುತ್ತೀರಿ.


“ಹಿಂಸಾಚಾರದಿಂದ ಹಾಗು ಸುಲಿಗೆಯಿಂದ ಗಳಿಸಿದ್ದನ್ನು ಜನರು ತಮ್ಮ ಮಳಿಗೆಗಳಲ್ಲಿ ತುಂಬಿಸಿಕೊಂಡಿದ್ದಾರೆ. ಅಂಥ ಜನರಿಗೆ ನ್ಯಾಯನೀತಿ ತಿಳಿಯದು,” ಎಂದು ಸರ್ವೇಶ್ವರ ಹೇಳುತ್ತಾರೆ.


ವಿವೇಕಶೂನ್ಯನಾದ ಒಡೆಯ ಮಹಾಹಿಂಸಕ; ದುರ್ಲಾಭವನ್ನು ವಿರೋಧಿಸುವವನಿಗೆ ದೀರ್ಘಾಯುಷ್ಯ.


ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.


ಮೂಢನಂಬಿಕೆಯುಳ್ಳವರ ಗತಿ ಇದುವೇ I ಆ ಮೂಢರ ನಂಬಿ ನಡೆದವರಿಗು ಹಾಗೆಯೇ II


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ.


ಆದುದರಿಂದಲೇ ಇವರ ಹೆಂಡತಿಯರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ಏನನ್ನೂ ಬಿಡದೆ ಕಬಳಿಸಿದ ಅವನ ಸಂತಾನಕ್ಕೆ ಉಳಿಗಾಲವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು