Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:16 - ಕನ್ನಡ ಸತ್ಯವೇದವು C.L. Bible (BSI)

16 ನಾನಾದರೋ ‘ಕೇಡನ್ನು ಬರಮಾಡಿ’ ಎಂದು ನಿಮ್ಮನ್ನು ತವಕಪಡಿಸಲಿಲ್ಲ. ಅನಿವಾರ್ಯ ವಿಪತ್ತಿನ ದಿನವನ್ನು ನಾನು ಅಪೇಕ್ಷಿಸಲಿಲ್ಲ. ಇದು ನಿಮಗೆ ತಿಳಿದ ವಿಷಯ. ನನ್ನ ಮಾತುಗಳು ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯಿಂದ ಹೊರಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ. ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನಾದರೋ ಸಭಾ ಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವದನ್ನು ಬಿಡುವದಕ್ಕೆ ಆತುರಪಡಲಿಲ್ಲ; ಅನಿವಾರ್ಯ ವಿಪತ್ತಿನ ದಿನವನ್ನು ಅಪೇಕ್ಷಿಸಲಿಲ್ಲ; ನೀನೇ ಬಲ್ಲೆ; ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನೇ, ನಾನು ನಿನ್ನನ್ನು ಬಿಟ್ಟು ಓಡಿಹೋಗಲಿಲ್ಲ, ನಾನು ನಿನ್ನನ್ನು ಅನುಸರಿಸಿದೆನು. ನೀನು ಹೇಳಿದಂತೆ ನಾನು ಕುರುಬನಾದೆ. ಆ ಭಯಂಕರ ದಿನವು ಬರಲೆಂದು ನಾನು ಬಯಸಲಿಲ್ಲ. ಯೆಹೋವನೇ, ನಾನು ಹೇಳಿದ್ದೆಲ್ಲ ನಿನಗೆ ಗೊತ್ತಿದೆ. ಈಗ ನಡೆಯುತ್ತಿರುವುದನ್ನೆಲ್ಲಾ ನೀನು ನೋಡುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನಾದರೋ ಸಭಾಪಾಲನೆಯಲ್ಲಿ ನಿಮ್ಮನ್ನು ಹಿಂಬಾಲಿಸುವುದನ್ನು ಬಿಡುವುದಕ್ಕೆ ಆತುರಪಡಲಿಲ್ಲ; ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ನೀವೇ ಬಲ್ಲೆ; ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:16
21 ತಿಳಿವುಗಳ ಹೋಲಿಕೆ  

ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ನಿಮಗೆ ಹಿತಕರವಾದುದೆಲ್ಲವನ್ನು ಬಹಿರಂಗದಲ್ಲೂ ಮನೆಗಳಲ್ಲೂ ಹಿಂಜರಿಯದೆ ಬೋಧಿಸಿದ್ದೇನೆ ಹಾಗೂ ಕಲಿಸಿದ್ದೇನೆ.


ಸಹೋದರರೇ, ಎಲ್ಲರೂ ಬೋಧಕರಾಗಲು ಆತುರಪಡಬೇಡಿ. ಬೋಧಕರಾದ ನಾವು ಇತರರಿಗಿಂತಲೂ ತೀವ್ರವಾದ ನ್ಯಾಯವಿಚಾರಣೆಗೆ ಗುರಿಯಾಗುತ್ತೇವೆ.


ಸಹೋದರರೇ, ಇದನ್ನು ನೆನಪಿನಲ್ಲಿಡಿ; ನಿಮ್ಮಲ್ಲಿ ಪ್ರತಿಯೊಬ್ಬನು ಆಲಿಸುವುದರಲ್ಲಿ ಚುರುಕಾಗಿ, ಮಾತನಾಡುವುದರಲ್ಲಿ ದುಡುಕದೆ, ಸಿಟ್ಟುಗೊಳ್ಳುವುದರಲ್ಲಿ ಸಾವಧಾನವಾಗಿ ಇರಲಿ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.


ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.


ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.


ಸರ್ವೇಶ್ವರಾ, ನನ್ನ ಪರಿಚಯ ನಿಮಗಿದೆ ನಿಮ್ಮ ನೋಟ ನನ್ನ ಮೇಲಿದೆ. ನನ್ನ ಹೃದಯ ನಿಮ್ಮೊಂದಿಗಿದೆ, ಇದರ ಪರೀಕ್ಷೆ ನಿಮ್ಮಿಂದಾಗಿದೆ. ಅವರನ್ನೋ, ಕುರಿಗಳೋ ಎಂಬಂತೆ ಕೊಲೆಗೆ ಕರೆದೊಯ್ಯಿರಿ ವಧ್ಯದಿವಸದವರೆಗೂ ಅವರನ್ನು ವಿಂಗಡಿಸಿಡಿ.


ಕಂಡ ದೋಷವನ್ನು ಮಂಟಪದಲ್ಲಿ ಖಂಡಿಸುವವನನ್ನು ನೀವು ಹಗೆಮಾಡುತ್ತೀರಿ; ನ್ಯಾಯವಾದಿಗಳ ಮೇಲೆ ದ್ವೇಷ ಸಾಧಿಸುತ್ತೀರಿ.


ಅದಕ್ಕೆ ನಾನು : “ಸರ್ವೇಶ್ವರಾ, ನೀವು ಎಲ್ಲವನ್ನು ಬಲ್ಲವರು. ನನ್ನನ್ನು ನೆನಪಿಗೆ ತಂದುಕೊಂಡು ನೆರವುನೀಡಿ. ನನಗಾಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸಿರಿ. ಅವರಿಗೆ ಹೆಚ್ಚು ತಾಳ್ಮೆತೋರಿ ನನ್ನನ್ನು ನಿರ್ಮೂಲಮಾಡಬೇಡಿ. ನಿಮ್ಮ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆ ಎಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿ.


ಸರ್ವೇಶ್ವರಾ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆ. ನೀವು ನನ್ನನ್ನು ಗೆದ್ದುಬಿಟ್ಟಿರಿ, ನೀವು ನನಗಿಂತ ಬಲಿಷ್ಠರಲ್ಲವೆ? ಎಲ್ಲರು ನನ್ನನ್ನು ಅಣಕಿಸುವವರೆ, ದಿನವೆಲ್ಲ ನಾನು ಅಪಹಾಸ್ಯಕ್ಕೆ ಬಲಿಯಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು