ಯೆರೆಮೀಯ 17:18 - ಕನ್ನಡ ಸತ್ಯವೇದವು C.L. Bible (BSI)18 ನನಗಲ್ಲ, ನನ್ನ ಹಿಂಸಕರಿಗೆ ಅವಮಾನವಾಗಲಿ. ಭಯಭ್ರಾಂತಿ ನನ್ನನ್ನಲ್ಲ, ಅವರನ್ನು ಅಪಹರಿಸಲಿ. ಅವರಿಗೆ ಕೇಡುಗಾಲವನ್ನು ಬರಮಾಡಿ ಬೇರುಸಹಿತ ಅವರನ್ನು ನಾಶಪಡಿಸಿರಿ ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ. ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ. ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ; ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನು ಬೇಡ; ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತಭಂಗದಿಂದ ಅವರನ್ನು ನಾಶಪಡಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಜನರು ನನ್ನನ್ನು ಹಿಂಸಿಸುತ್ತಿದ್ದಾರೆ. ಆ ಜನರು ಲಜ್ಜೆಪಡುವಂತೆ ಮಾಡು. ನನ್ನನ್ನು ನಿರಾಶೆಗೊಳಿಸಬೇಡ. ಆ ಜನರಿಗೆ ಭೀತಿಯುಂಟಾಗಲಿ, ಆದರೆ ನನಗೆ ಭಯವಾಗುವಂತೆ ಮಾಡಬೇಡ. ನನ್ನ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಬರುವಂತೆ ಮಾಡು. ಅವರನ್ನು ಮುರಿದುಬಿಡು, ಮತ್ತೆಮತ್ತೆ ಮುರಿದುಬಿಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನನ್ನನ್ನು ಹಿಂಸಿಸುವವರು ನಾಚಿಕೆಗೆ ಗುರಿಯಾಗಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲು ಪಡಲಿ; ಆದರೆ ನಾನು ದಿಗಿಲು ಪಡದಿರಲಿ. ಆದರೆ ನಾನು ದಿಗಿಲು ಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡಿ. ಎರಡರಷ್ಟಾದ ನಾಶದಿಂದ ಅವರನ್ನು ನಾಶಪಡಿಸಿ. ಅಧ್ಯಾಯವನ್ನು ನೋಡಿ |