Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:19 - ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರ ನನಗೆ ಕೊಟ್ಟ ಆದೇಶ : “ನೀನು ಹೊರಟು ಜುದೇಯದ ಅರಸರು ಹೋಗಿಬರುವ ಜನತಾದ್ವಾರದಲ್ಲೂ ಜೆರುಸಲೇಮಿನ ಇತರ ಬಾಗಿಲುಗಳಲ್ಲೂ ನಿಂತುಕೊಂಡು ಹೀಗೆಂದು ಸಾರು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನು ನನಗೆ ಇಂತೆಂದನು, “ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯ ಜನರ ಬಾಗಿಲಿನಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನು ನನಗೆ ಇಂತೆಂದನು - ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯಜನರ ಬಾಗಲಿನಲ್ಲಿಯೂ ಯೆರೂಸಲೇವಿುನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ನೀನು ಹೋಗಿ ಯೆಹೂದದ ರಾಜರು ಸಂಚರಿಸುವ ಜೆರುಸಲೇಮಿನ ಜನರ ದ್ವಾರದಲ್ಲಿ ನಿಲ್ಲು. ಜನರಿಗೆ ನನ್ನ ಸಂದೇಶವನ್ನು ಹೇಳು. ಆಮೇಲೆ ಜೆರುಸಲೇಮಿನ ಎಲ್ಲಾ ದ್ವಾರಗಳಿಗೆ ಹೋಗಿ ಹಾಗೆಯೇ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ನನಗೆ, “ಹೋಗಿ, ಯೆಹೂದದ ಅರಸರು ಪ್ರವೇಶಿಸುವ, ಹೊರಡುವ ಜನರ ಬಾಗಿಲಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:19
11 ತಿಳಿವುಗಳ ಹೋಲಿಕೆ  

“ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ.


“ನೀನು ನನ್ನ ಆಲಯದ ಬಾಗಿಲಲ್ಲಿ ನಿಂತು ಈ ವಾಕ್ಯವನ್ನು ಸಾರು - ‘ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳಲು ಈ ದ್ವಾರಗಳನ್ನು ಪ್ರವೇಶಿಸುವ ಎಲ್ಲ ಯೆಹೂದ್ಯರೇ, ಸರ್ವೇಶ್ವರನ ನುಡಿಯನ್ನು ಕೇಳಿ;


“ಹೋಗಿರಿ, ಮಹಾದೇವಾಲಯದಲ್ಲಿ ನಿಂತು ಈ ನವಜೀವದ ಬಗ್ಗೆ ಜನರಿಗೆ ಬೋಧಿಸಿರಿ,” ಎಂದನು.


ಆಗ ಬಾರೂಕನು ಸರ್ವೇಶ್ವರನ ಆಲಯದೊಳಗೆ, ಮೇಲಣ ಪ್ರಾಕಾರದಲ್ಲಿ, ಹೊಸಬಾಗಿಲ ಹತ್ತಿರ, ಲೇಖಕ ಶಾಫಾನನ ಮಗ ಗೆಮರ್ಯನ ಕೊಠಡಿಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಜನರೆಲ್ಲರಿಗೂ ಕೇಳಿಸುವಂತೆ ಓದಿದನು.


ಆದುದರಿಂದ ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಈ ಸುರುಳಿಯಲ್ಲಿ ಬರೆದಿರುವ ಸರ್ವೇಶ್ವರನ ವಾಕ್ಯಗಳನ್ನು, ಉಪವಾಸದಿನದಂದು, ಸರ್ವೇಶ್ವರನ ಆಲಯದೊಳಗೆ ಕೂಡಿರುವ ಜನರಿಗೂ ಆಯಾಯ ಊರುಗಳಿಂದ ಬಂದಿರುವ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ಓದು.


ಬೋಕಿಯ ಬಾಗಿಲಿನ ಸಮೀಪದಲ್ಲಿರುವ ‘ಬೆನ್‍ಹಿನ್ನೋಮ್’ ಕಣಿವೆಗೆ ಹೋಗು. ನಾನು ನಿನಗೆ ತಿಳಿಸುವ ಈ ಸಂದೇಶವನ್ನು ಅಲ್ಲಿ ಸಾರು -


ನಗರದ ರಾಜಬೀದಿಗಳಿಗೆ ತನ್ನ ದಾಸಿಯರನ್ನು ಕಳುಹಿಸುತ್ತಾಳೆ.


ಕೇಳಿ, ಜ್ಞಾನವೆಂಬಾಕೆ ಕರೆಯುತ್ತಾಳೆ ವಿವೇಕವೆಂಬಾಕೆ ಕೂಗಿ ಕರೆಯುತ್ತಿದ್ದಾಳೆ!


ನನಗಲ್ಲ, ನನ್ನ ಹಿಂಸಕರಿಗೆ ಅವಮಾನವಾಗಲಿ. ಭಯಭ್ರಾಂತಿ ನನ್ನನ್ನಲ್ಲ, ಅವರನ್ನು ಅಪಹರಿಸಲಿ. ಅವರಿಗೆ ಕೇಡುಗಾಲವನ್ನು ಬರಮಾಡಿ ಬೇರುಸಹಿತ ಅವರನ್ನು ನಾಶಪಡಿಸಿರಿ !


‘ಈ ಬಾಗಿಲುಗಳಲ್ಲಿ ಸೇರುವ ಜುದೇಯದ ಅರಸರೇ, ಎಲ್ಲ ಯೆಹೂದ್ಯರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಕೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು