Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:2 - ಕನ್ನಡ ಸತ್ಯವೇದವು C.L. Bible (BSI)

2 ನಿಮ್ಮ ಮಕ್ಕಳು ಸೊಂಪಾಗಿ ಬೆಳೆದ ಮರಗಳನ್ನಾಗಲಿ ಎತ್ತರವಾದ ಗುಡ್ಡಗಳನ್ನಾಗಲಿ, ಬೈಲಿನ ಬೆಟ್ಟಗಳನ್ನಾಗಲಿ ಕಂಡಾಗಲೆಲ್ಲ ಅವರ ಬಲಿಪೀಠಗಳನ್ನು ಹಾಗು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನು ಎತ್ತರವಾದ ಗುಡ್ಡಗಳನ್ನು ಕಂಡಾಗೆಲ್ಲಾ, ಅವರ ಯಜ್ಞವೇದಿಗಳನ್ನು ಮತ್ತು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನೂ ಎತ್ತರವಾದ ಗುಡ್ಡಗಳನ್ನೂ ಕಂಡಾಗೆಲ್ಲಾ ಅವರ ಯಜ್ಞವೇದಿಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ಜ್ಞಾಪಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರ ಮಕ್ಕಳು ಸುಳ್ಳುದೇವರುಗಳಿಗೆ ಅರ್ಪಿಸಿದ ಯಜ್ಞವೇದಿಕೆಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಅಶೇರಳಿಗೆ ಅರ್ಪಿಸಿದ ಮರದ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಸೊಂಪಾಗಿ ಬೆಳೆದ ಮರದ ಕೆಳಗೆ ಮತ್ತು ಬೆಟ್ಟಗಳ ಮೇಲೆ ಆ ವಸ್ತುಗಳನ್ನು ಜ್ಞಾಪಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರ ಮಕ್ಕಳು ಅವರ ಬಲಿಪೀಠಗಳನ್ನೂ ಹಸಿರಾದ ಗಿಡಗಳಲ್ಲಿಯೂ ಎತ್ತರವಾದ ಗುಡ್ಡಗಳ ಮೇಲೆಯೂ ಇರುವ ಅವರ ಅಶೇರ ಸ್ತಂಭಗಳನ್ನೂ ಜ್ಞಾಪಕ ಮಾಡಿಕೊಳ್ಳುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:2
15 ತಿಳಿವುಗಳ ಹೋಲಿಕೆ  

ಅಂದಿನಿಂದ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸ ತೊಡಗಿದರು. ಅವರ ಈ ಅಪರಾಧದಿಂದ ಜುದೇಯದ ಮೇಲೂ ಜೆರುಸಲೇಮಿನ ಮೇಲೂ ದೈವಕೋಪ ಎರಗಿತು.


“ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದಿರುವೆ ಕಣ್ಣಿಗಳನ್ನು ಕಿತ್ತು, ‘ನಾನು ಸೇವೆಮಾಡುವುದಿಲ್ಲ’ ಎಂದಿರುವೆ. ಎತ್ತರವಾದ ಪ್ರತಿಯೊಂದು ಗುಡ್ಡೆಯ ಮೇಲೂ ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವೇಶ್ಯೆಯಂತೆ ಬೇರೆ ದೇವರುಗಳಿಗೆ ಅಡ್ಡಬಿದ್ದಿರುವೆ.


ನೀವು ಬಯಸಿದ ಎಲ್ಲಾ ಮರಗಳನ್ನು ಪೂಜಿಸಿದ್ದಕ್ಕಾಗಿ ಹೇಸುವಿರಿ: ಪವಿತ್ರ ವನಗಳನ್ನು ನಿರ್ಮಿಸಿದ್ದಕ್ಕಾಗಿ ನಾಚಿಕೆಪಡುವಿರಿ.


ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿದನು. ಬಾಳ್‍ದೇವತೆಗಳಿಗಾಗಿ ಬಲಿಪೀಠಗಳನ್ನು ಕಟ್ಟಿಸಿದನು; ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ಇಸ್ರಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಅವರ ದೃಷ್ಟಿಯಲ್ಲಿ ದ್ರೋಹಿಗಳಾದರು.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಿದ ಮೇಲೆ, ಅವರು ಎತ್ತರವಾದ ಎಲ್ಲ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲ ಮರಗಳನ್ನೂ ನೋಡಿ, ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಒಪ್ಪಿಸುತ್ತಿದ್ದರು.


‘ಗಗನದೊಡತಿ’ ಎಂದು ಇವರು ಕರೆದ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ.


ಬೇಸರಗೊಳಿಸಿದರು ತಮ್ಮ ಪೂಜಾಸ್ಥಾನಗಳಿಂದ I ರೇಗಿಸಿದರಾತನನು ಕೆತ್ತನೆಯ ವಿಗ್ರಹಗಳಿಂದ II


ಅವನು ದೇವರಿಗೆ ಮಾಡಿದ ಪ್ರಾರ್ಥನೆ, ಅದಕ್ಕೆ ದೊರೆತ ಸದುತ್ತರ ಹಾಗು ಅವನು ದೀನಮನಸ್ಕನಾಗುವುದಕ್ಕೆ ಮುಂಚೆ ಮಾಡಿದ ಅಪರಾಧ, ದ್ರೋಹಗಳು, ಹಾಗು ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಅಶೇರಸ್ತಂಭ ವಿಗ್ರಹ, ಇವುಗಳನ್ನು ನಿಲ್ಲಿಸಿದ್ದು, ಇವುಗಳು ದರ್ಶಿಗಳ ಚರಿತ್ರೆಯಲ್ಲಿ ಲಿಖಿತವಾಗಿವೆ.


ಅವರ ಬಲಿಪೀಠಗಳನ್ನು ಕೆಡವಿಬಿಡಿ; ಅವರ ಕಲ್ಲುಕಂಬದ ವಿಗ್ರಹಗಳನ್ನು ಒಡೆದುಬಿಡಿ; ‘ಅಶೇರ’ ಎಂಬ ಸ್ತಂಭಗಳನ್ನು ಕಡಿದುಬಿಡಿ.


ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.


ಜನರು : “ಇಗೋ, ನಿಮಗೆ ಅಭಿಮುಖರಾಗಿ ಬಂದಿದ್ದೇವೆ. ನೀವೇ ನಮ್ಮ ಸರ್ವೇಶ್ವರ, ನಮ್ಮ ದೇವರು. ನಿಶ್ಚಯವಾಗಿ ಬೆಟ್ಟಗುಡ್ಡಗಳಿಂದಲೂ ಜಾತ್ರೆಜಂಗುಳಿಯಿಂದಲೂ ನಮಗೆ ಮೋಸವಾಯಿತು. ಇಸ್ರಯೇಲಿನ ಉದ್ಧಾರ ಇರುವುದು ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯ ಕೈಯಲ್ಲೇ, ಇದು ಸತ್ಯಕ್ಕೂ ಸತ್ಯ.


“ನೀವು ಸ್ವಾಧೀನಮಾಡಿಕೊಳ್ಳುವ ನಾಡಿನ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೂ ದಿಣ್ಣೆಗಳ ಮೇಲೂ ಹರಡಿಕೊಂಡ ಮರಗಳ ಕೆಳಗೂ ತಮ್ಮ ದೇವರುಗಳನ್ನು ಪೂಜಿಸುತ್ತಾರೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು