Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:20 - ಕನ್ನಡ ಸತ್ಯವೇದವು C.L. Bible (BSI)

20 ‘ಈ ಬಾಗಿಲುಗಳಲ್ಲಿ ಸೇರುವ ಜುದೇಯದ ಅರಸರೇ, ಎಲ್ಲ ಯೆಹೂದ್ಯರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ‘ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನ ಸಕಲ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇವಿುನ ಸಕಲ ನಿವಾಸಿಗಳೇ, ಯೆಹೋವನ ಈ ಮಾತನ್ನು ಕೇಳಿರಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಆ ಜನರಿಗೆ ಹೇಳು, ‘ಯೆಹೋವನ ಸಂದೇಶವನ್ನು ಕೇಳಿರಿ. ಯೆಹೂದದ ರಾಜರೇ, ಕೇಳಿರಿ. ಯೆಹೂದದ ಎಲ್ಲಾ ಜನರೇ ಕೇಳಿರಿ. ಈ ದ್ವಾರಗಳಿಂದ ಜೆರುಸಲೇಮಿಗೆ ಬರುವ ಜನರೇ, ನಾನು ಹೇಳುವದನ್ನು ಕೇಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರಿಗೆ ಹೀಗೆ ಹೇಳು: ‘ಯೆಹೂದದ ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:20
13 ತಿಳಿವುಗಳ ಹೋಲಿಕೆ  

‘ಜುದೇಯದ ಅರಸರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನ ಸಂದೇಶವನ್ನು ಕೇಳಿರಿ. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ: ಈ ಸ್ಥಳದ ಮೇಲೆ ನಾನು ಕೇಡನ್ನು ಬರಮಾಡುವೆನು. ಅದರ ಸುದ್ದಿಯನ್ನು ಕೇಳುವವರ ಕಿವಿಗಳೂ ನಿಮಿರುವುವು.


ಅವರು ಕೇಳಲಿ ಅಥವಾ ಬಿಡಲಿ ನೀನು ನನ್ನ ವಾಕ್ಯವನ್ನು ಅವರಿಗೆ ನುಡಿಯಲೇಬೇಕು. ಅವರು ದ್ರೋಹಿಗಳೇ ಸರಿ.


‘ದಾವೀದನ ಸಿಂಹಾಸನಾರೂಢನಾದ ಜುದೇಯದ ಅರಸನೇ, ಸರ್ವೇಶ್ವರನ ಮಾತನ್ನು ಕೇಳು; ನಿನ್ನ ಪರಿವಾರದವರೂ ಈ ಬಾಗಿಲುಗಳಲ್ಲಿ ಪ್ರವೇಶಿಸುವ ನಿನ್ನ ಪ್ರಜೆಗಳೂ ಕೇಳಲಿ;


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”


ಆಗ ನಾನು ಇಂತೆಂದೆನು: “ಯಕೋಬ ವಂಶದ ಮುಖಂಡರೇ, ಇಸ್ರಯೇಲ್ ವಂಶದ ಅಧಿಪತಿಗಳೇ, ಕಿವಿಗೊಟ್ಟು ಕೇಳಿರಿ. ನ್ಯಾಯನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೆ?


ಸಮಾರ್ಯದ ಗುಡ್ಡಗಳ ಮೇಲೆ ಮೇದು, ಬಾಷಾನಿನ ಕೊಬ್ಬಿನ ಕಾಮಧೇನುಗಳಂತಿರುವ ಮಹಿಳೆಯರೇ, ಕೇಳಿ: ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಶೋಷಿಸಿ, ನಿಮ್ಮ ಪತಿರಾಯರಿಗೆ, “ಮದ್ಯ ತರಿಸಿರಿ, ಕುಡಿಯೋಣ” ಎಂದು ಹೇಳುವವರೇ, ಇದನ್ನು ಕೇಳಿ:


“ಯಾಜಕರೇ, ಕೇಳಿ: ಇಸ್ರಯೇಲ್ ಮನೆತನದವರೇ, ಗಮನಿಸಿ. ರಾಜವಂಶದವರೇ ಕಿವಿಗೊಡಿ.


“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ಸರ್ವೇಶ್ವರ ನನಗೆ ಹೀಗೆಂದರು : “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ.


ಸರ್ವೇಶ್ವರ ನನಗೆ ಕೊಟ್ಟ ಆದೇಶ : “ನೀನು ಹೊರಟು ಜುದೇಯದ ಅರಸರು ಹೋಗಿಬರುವ ಜನತಾದ್ವಾರದಲ್ಲೂ ಜೆರುಸಲೇಮಿನ ಇತರ ಬಾಗಿಲುಗಳಲ್ಲೂ ನಿಂತುಕೊಂಡು ಹೀಗೆಂದು ಸಾರು :


ಈ ಜನರು ನನ್ನನ್ನು ತೊರೆದು ಬಿಟ್ಟು ತಮಗಾಗಲಿ, ತಮ್ಮ ಪೂರ್ವಜರಿಗಾಗಲಿ, ಜುದೇಯದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದಾರೆ. ಈ ಸ್ಥಳವನ್ನು ಅಪವಿತ್ರಗೊಳಿಸಿದ್ದಾರೆ. ನಿರ್ದೋಷಿಗಳ ರಕ್ತದಿಂದ ತುಂಬಿಸಿದ್ದಾರೆ.


“ಜುದೇಯದ ಅರಸನ ಮನೆತನದ ವಿಷಯವಾಗಿ ಸರ್ವೇಶ್ವರ ಹೇಳಿರುವ ಈ ಮಾತನ್ನು ಗಮನಿಸಿರಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು