Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:25 - ಕನ್ನಡ ಸತ್ಯವೇದವು C.L. Bible (BSI)

25 ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ ಹಾಗು ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ನಗರದ ಬಾಗಿಲುಗಳನ್ನು ಪ್ರವೇಶಿಸುವರು. ಇವರು ಮಾತ್ರವಲ್ಲ, ಇವರ ಪ್ರಧಾನರು, ಜುದೇಯದ ಜನರು, ಜೆರುಸಲೇಮಿನ ನಿವಾಸಿಗಳು ಎಲ್ಲರೂ ಇಲ್ಲಿ ಸೇರುವರು. ಈ ನಗರದಲ್ಲಿ ಜನರು ಯಾವಾಗಲು ತುಂಬಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ, ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ಪಟ್ಟಣದ ಬಾಗಿಲುಗಳನ್ನು ಪ್ರವೇಶಿಸುವರು. ಇವರು, ಇವರ ಪ್ರಧಾನರು, ಯೆಹೂದದ ಜನರು, ಯೆರೂಸಲೇಮಿನ ನಿವಾಸಿಗಳು, ಎಲ್ಲರೂ ಇಲ್ಲಿ ಸೇರುವರು. ಈ ಪಟ್ಟಣವು ನಿತ್ಯವೂ ನೆಲೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ ಪ್ರಭುಗಳೂ ರಥಾಶ್ವಗಳನ್ನೇರಿದವರಾಗಿ ಈ ಪಟ್ಟಣದ ಬಾಗಿಲುಗಳನ್ನು ಪ್ರವೇಶಿಸುವರು; ಇವರು, ಇವರ ಪ್ರಧಾನರು, ಯೆಹೂದದ ಜನರು, ಯೆರೂಸಲೇವಿುನ ನಿವಾಸಿಗಳು, ಎಲ್ಲರೂ ಇಲ್ಲಿ ಸೇರುವರು; ಈ ಪಟ್ಟಣವು ನಿತ್ಯವೂ ನೆಲೆಯಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “‘ನೀವು ಈ ಆಜ್ಞೆಯನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಜೆರುಸಲೇಮಿನ ದ್ವಾರಗಳಿಂದ ಬರುತ್ತಾರೆ. ಆ ರಾಜರು ರಥಗಳಲ್ಲಿಯೂ ಅಶ್ವಾರೂಢರಾಗಿಯೂ ಬರುವರು. ಯೆಹೂದದ ಮತ್ತು ಜೆರುಸಲೇಮಿನ ಜನನಾಯಕರುಗಳು ಆ ರಾಜರ ಜೊತೆಯಲ್ಲಿ ಬರುವರು. ಜೆರುಸಲೇಮ್ ಪಟ್ಟಣದಲ್ಲಿ ಜನರು ಯಾವಾಗಲೂ ವಾಸವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದಾವೀದನ ಸಿಂಹಾಸನದ ಮೇಲೆ ಕೂರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ, ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು, ಯೆಹೂದದ ಮನುಷ್ಯರಾಗಿಯೂ, ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು, ಅವರೂ, ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು. ಈ ಪಟ್ಟಣದಲ್ಲಿ ಎಂದೆಂದಿಗೂ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:25
21 ತಿಳಿವುಗಳ ಹೋಲಿಕೆ  

ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡು ನಡೆದಿರಾದರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿ ತಮ್ಮ ಪರಿವಾರದೊಡನೆ ಹಾಗು ಪ್ರಜೆಗಳೊಡನೆ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;


ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೂ ನನ್ನ ಪರಿಚಾರಕರಾದ ಲೇವಿಕುಲದ ಯಾಜಕರೊಂದಿಗೂ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.


ಸರ್ವೇಶ್ವರನಾದ ನಾನು ಹೇಳುವುದೇನೆಂದರೆ: ದಾವೀದ ವಂಶವು ನಿಂತುಹೋಗದು. ಇಸ್ರಯೇಲರ ವಂಶದವರು ಆ ಸಿಂಹಾಸನದಲ್ಲಿ ಆಸೀನರಾಗುತ್ತಾ ಬರುವರು.


ಆ ಕಾಲದಲ್ಲಿ, ಆ ದಿನಗಳಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯೊಂದನ್ನು ಚಿಗುರಿಸುವೆನು. ಆತನು ನಾಡಿನಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು.”


ಹೀಗಿದೆ ಸರ್ವೇಶ್ವರನ ನುಡಿ: “ಇವನು ಮಕ್ಕಳನ್ನು ಕಳೆದುಕೊಂಡ ವ್ಯಕ್ತಿ ತನ್ನ ಜನ್ಮವನ್ನು ಸಾರ್ಥಕ ಮಾಡಿಕೊಳ್ಳದ ವ್ಯಕ್ತಿ ಇವನ ಸಂತಾನದಲ್ಲಿ ಇನ್ನು ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು, ಜುದೇಯವನ್ನು ಆಳಿ ಬಾಳನು.”


ಆಗ ನೀನು ಅವರಿಗೆ - ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಕೇಳಿ : ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಜೆರುಸಲೇಮಿನ ಎಲ್ಲ ನಿವಾಸಿಗಳನ್ನೂ, ಅಂತು ನಾಡಿನ ಜನರೆಲ್ಲರನ್ನೂ ಅಮಲಿನಿಂದ ಮತ್ತರಾಗುವಂತೆ ಮಾಡುವೆನು.


ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.


ಸರ್ವೇಶ್ವರನ ಮಾತುಗಳನ್ನೆಲ್ಲಾ ತಿಳಿಸಿದನು. “ಅರಸನ ಅಧಿಕಾರ ಎಷ್ಟೆಂದು ಕೇಳಿರಿ; ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು; ಅವರು ಅವರ ರಥಗಳ ಮುಂದೆ ಓಡಬೇಕಾಗುವುದು.


“ಅವನು ಕುದುರೆಯ ದಂಡನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಈಜಿಪ್ಟ್ ದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಸರ್ವೇಶ್ವರ ಆಜ್ಞಾಪಿಸಿದ್ದಾರೆ.


ಆ ದಿನವು ನಿಮಗೆ ಸ್ಮರಣೀಯ ದಿನವಾಗಿರುವುದು. ಅಂದು ನೀವು ಸರ್ವೇಶ್ವರನ ಗೌರವಾರ್ಥ ಹಬ್ಬವನ್ನು ಕೊಂಡಾಡಬೇಕು. ಅದನ್ನು ಶಾಶ್ವತ ನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.


‘ದಾವೀದನ ಸಿಂಹಾಸನಾರೂಢನಾದ ಜುದೇಯದ ಅರಸನೇ, ಸರ್ವೇಶ್ವರನ ಮಾತನ್ನು ಕೇಳು; ನಿನ್ನ ಪರಿವಾರದವರೂ ಈ ಬಾಗಿಲುಗಳಲ್ಲಿ ಪ್ರವೇಶಿಸುವ ನಿನ್ನ ಪ್ರಜೆಗಳೂ ಕೇಳಲಿ;


ಅವರು ತಂದ ಸಮಾಚಾರ ಇದು: ‘ನೀವೆಲ್ಲರು ನಿಮ್ಮನಿಮ್ಮ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ಹಿಂದಿರುಗಬೇಕು. ಆಗ, ಸರ್ವೇಶ್ವರ ನಿಮಗೂ ನಿಮ್ಮ ಪೂರ್ವಜರಿಗೂ ಶಾಶ್ವತ ಸೊತ್ತಾಗಿ ಅನುಗ್ರಹಿಸಿದ ನಾಡಿನಲ್ಲಿ ನೀವು ನೆಲೆಗೊಳ್ಳುವಿರಿ.


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ : “ನೀವು ನಿಮ್ಮ ನಡತೆಯನ್ನೂ ಕೃತ್ಯಗಳನ್ನೂ ತಿದ್ದುಕೊಳ್ಳಿ. ಹಾಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.


ಆಗ ನಾನು ನಿಮ್ಮನ್ನು ಈ ಸ್ಥಳದಲ್ಲೆ ನೆಲೆಗೊಳಿಸುವೆನು. ನಿಮ್ಮ ಪೂರ್ವಜರಿಗೆ ನಾನು ಶಾಶ್ವತವಾಗಿ ದಯಪಾಲಿಸಿದ ಈ ನಾಡಿನಲ್ಲೆ ನೆಲೆಗೊಳಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು