Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:4 - ಕನ್ನಡ ಸತ್ಯವೇದವು C.L. Bible (BSI)

4 ನಾನು ನಿಮಗೆ ಹಕ್ಕು ಬಾಧ್ಯತೆಯಾಗಿ ದಯಪಾಲಿಸಿದ ಸೊತ್ತನ್ನು ನೀವು ದೋಷದಿಂದಲೆ ಕಳೆದುಕೊಳ್ಳುವಿರಿ. ನೀವು ನೋಡದ ನಾಡಿನಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೇ ಊಳಿಗದವರನ್ನಾಗಿ ಮಾಡುವೆನು. ನೀವು ನನ್ನ ಕೋಪಾಗ್ನಿಯನ್ನು ಹೊತ್ತಿಸಿದ್ದೀರಿ. ಅದು ನಿರಂತರವಾಗಿ ಉರಿಯುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ. ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ನಿಮಗೆ ದಯಪಾಲಿಸಿದ ಸ್ವಾಸ್ತ್ಯವನ್ನು ಸ್ವದೋಷದಿಂದಲೇ ಕಳೆದುಕೊಳ್ಳುವಿರಿ; ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು; ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ನಿಮಗೆ ಕೊಟ್ಟ ಭೂಮಿಯನ್ನು ನೀವು ಕಳೆದುಕೊಳ್ಳುವಿರಿ. ನಿಮ್ಮನ್ನು ನಿಮಗೆ ತಿಳಿಯದ ನಾಡಿನಲ್ಲಿ ನಿಮ್ಮ ಶತ್ರುಗಳ ದಾಸರನ್ನಾಗಿ ಮಾಡುವೆನು. ಏಕೆಂದರೆ ನನಗೆ ತುಂಬಾ ಕೋಪ ಬಂದಿದೆ. ನನ್ನ ಕೋಪವು ಉರಿಯುವ ಜ್ವಾಲೆಯಂತಿದೆ; ನೀವು ಅದರಲ್ಲಿ ಭಸ್ಮವಾಗಿ ಹೋಗುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ನಿನ್ನ ದೋಷದಿಂದಲೇ ನೀನು ನಾನು ನಿನಗೆ ಕೊಟ್ಟ ಸೊತ್ತನ್ನು ಬಿಟ್ಟು ಬಿಡುವೆ. ನಿನಗೆ ತಿಳಿಯದ ದೇಶದಲ್ಲಿ ನಿನ್ನನ್ನು ನಿನ್ನ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ಏಕೆಂದರೆ ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ. ಅದು ನಿತ್ಯವೂ ಪ್ರಜ್ವಲಿಸುತ್ತಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:4
34 ತಿಳಿವುಗಳ ಹೋಲಿಕೆ  

ಅಪರಿಚಿತ ನಾಡಿಗೆ ಅವರನ್ನು ಸಾಗಿಸುವೆನು. ಅಲ್ಲಿ ಶತ್ರುಗಳಿಗೇ ಊಳಿಗದವರನ್ನಾಗಿಸುವೆನು. ಏಕೆಂದರೆ ನನ್ನ ಕೋಪಾಗ್ನಿ ಉರಿಯುತ್ತಿದೆ. ಅದು ನಿಮ್ಮನ್ನು ಸುಟ್ಟುಹಾಕುವುದು.”


ನಮ್ಮ ಆಸ್ತಿಪಾಸ್ತಿ ಪರರಪಾಲಾಗಿದೆ ನಮ್ಮ ಮನೆಮಾರುಗಳು ಹೆರವರ ವಶದಲ್ಲಿವೆ.


“ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!”


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಈ ಕಾರಣಗಳ ನಿಮಿತ್ತ ನೀವಾಗಲಿ ನಿಮ್ಮ ಪೂರ್ವಜರಾಗಲಿ ನೋಡದ ನಾಡಿಗೆ ನಿಮ್ಮನ್ನು ಇಲ್ಲಿಂದ ಎಸೆದುಬಿಡುವೆನು. ಅಲ್ಲಿ ಹಗಲಿರುಳೂ ಅನ್ಯದೇವತೆಗಳಿಗೆ ಸೇವೆಮಾಡುವಿರಿ, ನನ್ನ ದಯೆ ದಾಕ್ಷಿಣ್ಯ ಮಾತ್ರ ನಿಮಗೆ ದೊರಕದು".


ಸಂಕಟದಿಂದಲೂ ನೋವುನಷ್ಟದಿಂದಲೂ ಕ್ರೂರವಾದ ಬಿಟ್ಟಿಜೀತದಿಂದಲೂ ಸರ್ವೇಶ್ವರ ನಿಮ್ಮನ್ನು ಬಿಡುಗಡೆಮಾಡುವರು. ಆ ದಿನದಂದು ಬಾಬಿಲೋನಿನ ಅರಸನನ್ನು ಮೂದಲಿಸಿ ಈ ಪದ್ಯವನ್ನು ನೀವು ಹಾಡಬೇಕು :


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಕಾರಿ, ಕ್ರೂರಿಗಳನ್ನು ಹಾಳುಮಾಡುವುದರಲ್ಲಿ ಗಟ್ಟಿಗರಾದವರ ಕೈಗೆ ಸಿಕ್ಕಿಸುವೆನು.


ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”


“ನಾನು ನನ್ನ ಮನೆಯನ್ನೇ ತೊರೆದಿದ್ದೇನೆ ನನ್ನ ಸ್ವಂತ ಸೊತ್ತನ್ನೇ ನಿರಾಕರಿಸಿದ್ದೇನೆ ನನಗೆ ಪ್ರಾಣಪ್ರಿಯರಾದ ಜನರನ್ನು ಅವರ ಶತ್ರುಗಳ ಕೈಗೊಪ್ಪಿಸಿದ್ದೇನೆ.


“ನಾನು ಇವುಗಳಿಗಾಗಿ ಇವರನ್ನು ದುಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪ ತೀರಿಸದೆ ಇರುವೆನೋ? ಇದು ಸರ್ವೇಶ್ವರನಾದ ನನ್ನ ನುಡಿ.


ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಶಾಂತಿ ಸವಿದದ್ದೇ ದ್ರೋಹಿಗಳಾಗಿ ನಡೆದರು ಮತ್ತೆ ನೀವಿತ್ತಿರವರನು ದೊರೆತನ ನಡೆಸುವ ವೈರಿಗಳ ಕೈಗೆ. ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು, ಆಲಿಸಿದಿರಿ ಪರದಿಂದ ರಕ್ಷಿಸಿದಿರಿ ಪದೇ ಪದೇ ಅಪರಿಮಿತ ಕರುಣೆಯಿಂದ.


ಅವನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೇ ಬಿಟ್ಟು ಹೋಗಬೇಕಾಯಿತು.


ನಾನು ಕೊಟ್ಟ ನಾಡಿನಿಂದ ಇಸ್ರಯೇಲರನ್ನು ತೆಗೆದುಹಾಕುವೆನು; ನನ್ನ ಹೆಸರಿಗಾಗಿ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಯೇಲರು ಎಲ್ಲಾ ಜನಾಂಗಗಳವರ ಲಾವಣಿಗೂ ನಿಂದೆಪರಿಹಾಸ್ಯಕ್ಕೂ ಗುರಿಯಾಗುವರು.


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


“ಇಸ್ರಯೇಲ್ ಒಬ್ಬ ಮನೆ ಆಳೊ? ಮನೆಯಲ್ಲೆ ಗುಲಾಮನಾಗಿ ಹುಟ್ಟಿದವನೋ? ಇಲ್ಲವಾದರೆ ಬೇರೆಯವರಿಂದ ಏಕೆ ಸೂರೆಯಾದ?


ಸರ್ವೇಶ್ವರಾ, ನನ್ನನ್ನು ಕೊಲ್ಲಲು ಅವರು ಮಾಡಿಕೊಂಡಿರುವ ಸಂಚು ನಿಮಗೆ ತಿಳಿದಿದೆ. ಅವರ ಅಪರಾಧವನ್ನು ಕ್ಷಮಿಸಬೇಡಿ, ಅವರ ಪಾಪವನ್ನು ಅಳಿಸಬೇಡಿ, ಅದು ನಿಮ್ಮ ಕಣ್ಣೆದುರಿಗೇ ಇರಲಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪ ವ್ಯಕ್ತವಾಗುವಾಗ ಅವರಿಗೆ ತಕ್ಕುದನ್ನು ಮಾಡಿ.”


‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.


ಕೊನ್ಯನು ಬಿಸಾಡಲ್ಪಟ್ಟ ಒಡಕು ಕುಡಿಕೆಯೆ? ಯಾರಿಗೂ ಬೇಡವಾದ ಮಣ್ಣಿನ ಮಡಿಕೆಯೆ? ಅವನೂ ಅವನ ಮಡದಿಮಕ್ಕಳೇಕೆ ಬೀದಿಪಾಲಾಗಿದ್ದಾರೆ?


ಬೆಂಕಿಯಿಕ್ಕಿ ಸುತ್ತಲು ಕೊಳ್ಳಿಗಳನು ಹತ್ತಿಸಿಕೊಂಡಿರುವ ಎಲೈ ಜನರೇ, ನಡೆಯಿರಿ ನಿಮ್ಮಾ ಬೆಂಕಿಯ ಬೆಳಕಿನಲಿ ನೀವು ಹತ್ತಿಸಿದ ಆ ಕೊಳ್ಳಿಗಳ ನಡುವೆಯೆ ನಡೆಯಿರಿ : ಇಗೋ, ಒದಗುವುದು ದುರ್ಗತಿ ನನ್ನ ಹಸ್ತದಿಂದ, ಸಾಯುವಿರಿ ನೀವು ಬಾಧೆಯಿಂದ.


‘ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯೇ ಇವುಗಳನ್ನೆಲ್ಲ ನಮಗೇಕೆ ಮಾಡಿದ್ದಾರೆ?’ ಎಂದು ಕೇಳುವಾಗ ನೀನು ಅವರಿಗೆ, ‘ನೀವು ಸರ್ವೇಶ್ವರನನ್ನೇ ತೊರೆದು, ಸ್ವಂತನಾಡಿನಲ್ಲೆ ಅನ್ಯದೇವತೆಗಳಿಗೆ ಸೇವೆಸಲ್ಲಿಸಿದ್ದೀರಿ. ಅಂತೆಯೇ ಹೊರನಾಡಿನಲ್ಲಿ ಅನ್ಯರಿಗೆ ಸೇವೆಮಾಡುವಿರಿ’ ಎಂದು ಹೇಳು.”


ಹೀಗಿರಲು ನಾನು ಅತಿ ದುಷ್ಟಜನಾಂಗಗಳನ್ನು ಬರಮಾಡುವೆನು; ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವುವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು