Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:15 - ಕನ್ನಡ ಸತ್ಯವೇದವು C.L. Bible (BSI)

15 ನನ್ನ ಜನರಾದರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಾರತಿ ಎತ್ತಿದ್ದುಂಟು. ಸನಾತನ ಸನ್ಮಾರ್ಗಗಳಲ್ಲಿ ಮುಗ್ಗರಿಸಿ ಸರಿಯಲ್ಲದ ಸೀಳುದಾರಿಯಲ್ಲಿ ಅಲೆದದ್ದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಜನರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ ಸರಿಯಲ್ಲದ ಸೀಳುದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ನನ್ನ ಜನರು ನನ್ನನ್ನು ಮರೆತಿದ್ದಾರೆ. ಅವರು ನಿಷ್ಪ್ರಯೋಜಕವಾದ ವಿಗ್ರಹಗಳಿಗೆ ನೈವೇದ್ಯ ಮಾಡುತ್ತಾರೆ. ನನ್ನ ಜನರು ತಾವು ಮಾಡುವ ಕೆಲಸಗಳಲ್ಲಿ ಮುಗ್ಗರಿಸುತ್ತಾರೆ. ಅವರು ತಮ್ಮ ಪೂರ್ವಿಕರ ಹಳೆಯ ಹಾದಿಯಲ್ಲಿಯೇ ಮುಗ್ಗರಿಸುತ್ತಾರೆ. ನನ್ನ ಜನರು ಒಳ್ಳೆಯ ರಾಜಬೀದಿಯ ಮೇಲೆ ನನ್ನನ್ನು ಹಿಂಬಾಲಿಸುವದನ್ನು ತೊರೆದು ಹಾಳಾದ ಹಾದಿಯನ್ನು ಹಿಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನ ಜನರಾದರೋ ನನ್ನನ್ನು ಮರೆತುಬಿಟ್ಟಿದ್ದಾರೆ. ವ್ಯರ್ಥವಾದ ವಿಗ್ರಹಗಳಿಗೆ ಧೂಪವನ್ನರ್ಪಿಸಿದ್ದಾರೆ. ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವುವಂತೆ ಮಾಡಿ, ಮಾರ್ಗವಲ್ಲದ ಕಾಲು ದಾರಿಗಳಲ್ಲಿ ಅವರನ್ನು ನಡೆಯುವಂತೆ ಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:15
35 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


ದೂರ ಸರಿದರು ಆ ಇಸ್ರಯೇಲರು ನಾ ಕರೆದರೂ ನನ್ನ ಬಳಿಗೆ ಅರ್ಪಿಸುತ್ತಾ ಬಂದರು ಯಜ್ಞವನ್ನು ಬಾಳ್ ದೇವತೆಗಳಿಗೆ ಧೂಪಾರತಿ ಬೆಳಗುತ್ತಾ ಬಂದರು ಆ ವಿಗ್ರಹಗಳಿಗೆ.


ಒಬ್ಬ ಯುವತಿ ತನ್ನ ಆಭರಣಗಳನ್ನು, ಒಬ್ಬ ವಧು ತನ್ನ ಡಾಬನ್ನು ಮರೆಯುವುದುಂಟೆ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


“ಸರಿಮಾಡಿ ಮಾರ್ಗವನು ಮಣ್ಣುಹಾಕಿ, ಹಾಕಿ; ನನ್ನ ಜನರ ದಾರಿಯಿಂದ ತೊಡರುಗಳನ್ನು ಎತ್ತಿಹಾಕಿ,” ಎನ್ನುತ್ತದೆ ವಾಣಿಯೊಂದು.


“ಈಗಲಾದರೋ ಯಾಜಕರೇ, ನೀವು ದಾರಿ ತಪ್ಪಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರು ಮುಗ್ಗರಿಸಿಬೀಳುವಂತೆ ಮಾಡಿದ್ದೀರಿ. ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ.” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.


“ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”


ಸ್ವಾಮಿ ಸರ್ವೇಶ್ವರಾ, ನೀವು ಇಸ್ರಯೇಲರ ಆಶ್ರಯ ! ನಿಮ್ಮನ್ನು ಬಿಟ್ಟುಹೋಗುವವರು ಆಶಾಭಂಗಪಡುವರು ಅವರು ಜೀವಜಲದ ಬುಗ್ಗೆಯನ್ನೆ ತೊರೆದವರು ತಮ್ಮ ಹೆಸರನ್ನು ಧೂಳಿನಲ್ಲಿ ಬರೆಸಿಕೊಂಡವರು.


ಅವು ವ್ಯರ್ಥವಾದುವುಗಳು, ಹಾಸ್ಯಾಸ್ಪದವಾದುವುಗಳು ದಂಡನೆಯ ಕಾಲದಲ್ಲಿ ಅಳಿದುಹೋಗುವಂಥವುಗಳು.


ನಿಶ್ಚಯವಾಗಿ ಆ ದೇವತೆಗಳೆಲ್ಲ ಕ್ಷುದ್ರರೇ‍ ಅವರ ಕಾರ್ಯಗಳೆಲ್ಲ ಶೂನ್ಯವೇ ಆ ಎರಕದ ಬೊಂಬೆಗಳೆಲ್ಲಾ ಬರಿ ಗಾಳಿಯೆ !


ಇನ್ನು ಅವನು ತನ್ನ ತಂದೆ ತಾಯಿಗಳನ್ನು ಗೌರವಿಸಬೇಕಾಗಿಲ್ಲ, ಎಂದು ಬೋಧಿಸುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನೇ ನಿರರ್ಥಕಮಾಡಿಬಿಟ್ಟಿದ್ದೀರಿ.


ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ನೀನು ನನ್ನನ್ನು ಮರೆತುಬಿಟ್ಟು ಸುಳ್ಳನ್ನು ನಂಬಿದ್ದರಿಂದ ಇದೇ ನಿನಗೆ ಒದಗಲಿರುವ ಗತಿ. ಇದೇ ನಾನು ನಿನಗೆ ಅಳೆದುಕೊಡುವ ಪ್ರತೀಕಾರ.


ಇಗೋ ಕೇಳಿ, ಬೋಳು ಗುಡ್ಡಗಳ ಮೇಲಿಂದ ಒಂದು ಶಬ್ದ : ‘ನಾವು ಡೊಂಕುದಾರಿಯನ್ನು ಹಿಡಿದಿದ್ದೇವೆ. ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯನ್ನು ಮರೆತುಬಿಟ್ಟಿದ್ದೇವೆ’ ಎಂದು ಇಸ್ರಯೇಲರು ಕಣ್ಣೀರು ಸುರಿಸುತ್ತಾ ದೇವರ ಕೃಪೆಯನ್ನು ಬೇಡುತ್ತಿದ್ದಾರೆ.


ಮಾಂಸವನ್ನು ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ, ಅಥವಾ ಇನ್ನಾವುದೇ ಆಗಲಿ, ನಿನ್ನ ಸಹೋದರನಿಗೆ ಪಾಪಕ್ಕೆ ಕಾರಣವಾಗುವುದಾದರೆ ಅದನ್ನು ಬಿಟ್ಟುಬಿಡುವುದೇ ಲೇಸು.


ತಮ್ಮ ಮಕ್ಕಳನ್ನು ಬಾಳ್‍ದೇವತೆಗೆ ಆಹುತಿಕೊಡಲು ಆ ದೇವತೆಗೆ ಬಲಿಪೀಠಗಳನ್ನು ಕೂಡ ಏರ್ಪಡಿಸಿದ್ದಾರೆ. ನಾನು ಇಂಥ ಆಚಾರಗಳನ್ನು ವಿಧಿಸಲಿಲ್ಲ. ಅದರ ಮಾತನ್ನೇ ಎತ್ತಲಿಲ್ಲ. ಅಂಥದ್ದು ನನ್ನ ಮನಸ್ಸಿಗೂ ತೋಚಿದ್ದಿಲ್ಲ.


ಹೊರಟುಬನ್ನಿ, ಹಾದುಬನ್ನಿ, ಪುರದ್ವಾರವನು ಬರಲಿರುವ ಜನರಿಗೆ ಸರಿಮಾಡಿರಿ ಹಾದಿಯನು ಎತ್ತರಿಸಿ ಹೆದ್ದಾರಿಯನು, ತೆಗೆದುಹಾಕಿ ಕಲ್ಲುಗಳನು ಹಾರಿಸಿ ಧ್ವಜವನು, ನೀಡಿ ರಾಷ್ಟ್ರಗಳಿಗೆ ಸೂಚನೆಯನು.


ಈ ಜನರನ್ನು ನಡೆಸುವವರು ತಪ್ಪುದಾರಿಗೆ ಎಳೆಯುವಂಥವರು. ಅವರನ್ನು ಹಿಂಬಾಲಿಸುವವರೆಲ್ಲ ನಾಶವಾಗುವರು.


ನನ್ನ ಜನರನ್ನೋ ಬಾಧಿಸುತ್ತಿರುವವರು ಹುಡುಗರು; ಆಳುತ್ತಿರುವವರೋ ಹೆಂಗಳೆಯರು. ಎಲೈ ನನ್ನ ಜನರೇ, ನಿಮ್ಮ ನಾಯಕರು ನಿಮ್ಮನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ನಿಮ್ಮ ಮಾರ್ಗವನ್ನು ವಕ್ರಗೊಳಿಸುತ್ತಿದ್ದಾರೆ.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳ ಮೇಲೆ ಧೂಪಾರತಿ ಎತ್ತಿ ನನ್ನನ್ನು ಅವಮಾನಗೊಳಿಸಿದ್ದಾರೆ. ತಕ್ಕ ಪ್ರತೀಕಾರವನ್ನು ಎಸಗುವೆನು ಈ ಅಪರಾಧಗಳಿಗೆ. ಹೌದು, ಮೊಟ್ಟಮೊದಲು ಪ್ರತೀಕಾರ ಇವರ ಕಾರ್ಯಕ್ಕೆ; ಅದನ್ನು ಸರಿಯಾಗಿ ಅಳೆದು ಸುರಿಸುವೆನು ಇವರ ಮಡಿಲಿಗೆ.”


ಕಳವು, ಕೊಲೆ, ವ್ಯಭಿಚಾರಗಳನ್ನು ಮಾಡುತ್ತೀರಿ. ಸುಳ್ಳುಸಾಕ್ಷಿ ಹೇಳುತ್ತೀರಿ. ಬಾಳನಿಗೆ ಧೂಪಾರತಿ ಎತ್ತುತ್ತೀರಿ. ಕಂಡು ಕೇಳದ ಅನ್ಯದೇವತೆಗಳನ್ನು ಆರಾಧಿಸುತ್ತೀರಿ.


ಲೆಬನೋನಿನ ಹಿಮವು ಅರಣ್ಯದಾ ಶಿಖರದಿಂದ ತಪ್ಪುವುದುಂಟೆ? ಅಲ್ಲಿಂದ ಇಳಿದು ಹರಿಯುವ ತೊರೆಯ ನೀರು ಬತ್ತುವುದುಂಟೆ?


ಅವು ವ್ಯರ್ಥವಾದವುಗಳು, ಹಾಸ್ಯಾಸ್ಪದ ಕೃತಿಗಳು, ದಂಡನೆಯ ಕಾಲದಲ್ಲಿ ಅಳಿದುಹೋಗುವಂಥವುಗಳು.


ನೀರಾಗುವುದು ಜನರ ಹೃದಯ, ಎಡವಿ ಬೀಳುವರು ಬಹುಜನ. ಪುರದ್ವಾರಗಳಿಗೇ ತಂದಿರುವೆನು ಹತಿಸುವಾ ಖಡ್ಗವ. ಮಿನುಗುತಿಹುದದು ಮಿಂಚಿನಂತೆ ಹರಿತವಿದೆ ವಧೆಗಾಗುವ ಕತ್ತಿಯಂತೆ.


ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವೆ; ನಿನ್ನ ಪ್ರಜೆ ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಸರ್ವೇಶ್ವರನಾದ ದೇವರ ನುಡಿ.


ಆದುದರಿಂದ ನಾನು ಅವಳ ದಾರಿಗೆ ಮುಳ್ಳುಬೇಲಿಹಾಕುವೆನು. ಇಷ್ಟಬಂದ ದಾರಿಯನ್ನು ಹಿಡಿಯದಂತೆ ಅವಳ ಮುಂದೆ ಅಡ್ಡಗೋಡೆಯನ್ನು ಎಬ್ಬಿಸುವೆನು.


‘ರೇಗಿಸಿದರೆನ್ನನು ದೇವರಲ್ಲದವುಗಳ ಮೂಲಕ, ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ. ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ, ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದಾ ಜನರ ಮುಖಾಂತರ.


ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.


ನನ್ನ ಸ್ವಜನರು ನನ್ನನ್ನೆ ತೊರೆದುಬಿಟ್ಟು, ಅನ್ಯದೇವತೆಗಳಿಗೆ ಬಲಿಯರ್ಪಿಸಿ, ತಮ್ಮ ಕೈಯಿಂದ ನಿರ್ಮಿಸಿದ ಮೂರ್ತಿಗಳಿಗೆ ಆರಾಧನೆ ಮಾಡುತ್ತಿದ್ದಾರೆ; ಇಂಥ ಅಧರ್ಮಕ್ಕೆಲ್ಲ ನಾನು ಅವರಿಗೆ ವಿಧಿಸುವ ದಂಡನೆಗಳನ್ನು ತಿಳಿಸುವೆನು, ಕೇಳು :


ಆಗ ಜುದೇಯದ ನಗರದವರೂ ಜೆರುಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಧೂಪಾರತಿಯೆತ್ತಿದರೋ ಅವುಗಳನ್ನು ಮರೆಹೊಕ್ಕು ಕೂಗಿಕೊಳ್ಳುವರು. ಆದರೆ ಅಂಥ ಕೇಡಿನ ಕಾಲದಲ್ಲಿ ಆ ದೇವತೆಗಳಿಂದ ಅವರಿಗೆ ಯಾವ ರಕ್ಷಣೆಯೂ ದೊರಕದು.


ಎಲೈ ಯೆಹೂದ ಜನರೇ, ನಿಮಗೆ ಎಷ್ಟು ನಗರಗಳಿವೆಯೋ ಅಷ್ಟೂ ದೇವರುಗಳಿದ್ದಾರೆ. ಜೆರುಸಲೇಮಿನಲ್ಲಿ ಹಾದಿಬೀದಿಗಳು ಎಷ್ಟಿವೆಯೋ ಅಷ್ಟೂ ಬಲಿಪೀಠಗಳಿವೆ, ಆ ತುಚ್ಛ ದೇವತೆ ಬಾಳನಿಗೆ ಧೂಪಾರತಿಯೆತ್ತಲು.


“ಸರ್ವಶಕ್ತ ಸರ್ವೇಶ್ವರನಾದ ನಾನೇ ಈ ಇಸ್ರಯೇಲನ್ನೂ ಜುದೇಯವನ್ನೂ ನೆಟ್ಟಿ ಬೆಳೆಸಿದೆ. ಆದರೆ ಈಗ ‘ನಿನಗೆ ಕೇಡು,’ ಎಂದು ಶಪಿಸುತ್ತಿದ್ದೇನೆ. ಏಕೆಂದರೆ ಬಾಳನಿಗೆ ಧೂಪಾರತಿಯೆತ್ತಿ, ನನ್ನನ್ನು ಕೆಣಕಿ, ತಮಗೇ ಕೆಡುಕನ್ನು ಮಾಡಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು