Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:16 - ಕನ್ನಡ ಸತ್ಯವೇದವು C.L. Bible (BSI)

16 ಆದ್ದರಿಂದ ನಾಡನ್ನು ಭಯಾನಕವಾಗಿಸುವರು ಹಾದು ಹೋಗುವವರೆಲ್ಲ ಬೆಬ್ಬೆರಗಾಗಿ ತಲೆದೂಗುವರು, ಸಿಳ್ಳು ಹಾಕಿ ಅದನ್ನು ಪರಿಹಾಸ್ಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯವಾಗಿ ಗುರಿಯಾಗುವದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ಯೆಹೂದ್ಯರ ದೇಶವು ಬರಿದಾದ ಮರುಭೂಮಿಯಾಗುವುದು. ಜನರು ಇಲ್ಲಿಂದ ಹಾದುಹೋಗುವಾಗಲೆಲ್ಲಾ ಸಿಳ್ಳುಹಾಕಿ ತಲೆಯಾಡಿಸುವರು. ದೇಶವು ಹಾಳಾದುದನ್ನು ನೋಡಿ ಬೆರಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೀಗೆ ತಮ್ಮ ದೇಶವನ್ನು ಹಾಳಾಗಿಯೂ, ನಿತ್ಯವಾದ ಹಾಸ್ಯಾಸ್ಪದವಾಗಿಯೂ ಮಾಡಿದ್ದಾರೆ. ಅದನ್ನು ಹಾದುಹೋಗುವವರೆಲ್ಲರೂ ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:16
35 ತಿಳಿವುಗಳ ಹೋಲಿಕೆ  

ನೋಡುವವರೆಲ್ಲಾ ಎನ್ನನಣಕಿಸುತಿಹರು I ತುಟಿಯೋರೆ ಮಾಡಿ ತಲೆಯಾಡಿಸುತಿಹರು II


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಈ ನಗರವನ್ನು ಭಯಾನಕ ಹಾಗೂ ಹಾಸ್ಯಾಸ್ಪದ ಸ್ಥಳವನ್ನಾಗಿಸುವೆನು. ಹಾದುಹೋಗುವವರೆಲ್ಲರು ಅದಕ್ಕೆ ಒದಗಿದ ವಿಪತ್ತನ್ನು ಕಂಡು ನಿಬ್ಬೆರಗಾಗಿ ಹೀಗಳೆಯುವರು.


ಪಕ್ಕದಲ್ಲಿ ಹಾದುಹೋಗುತ್ತಿದ್ದ ಜನರು ತಲೆಯಾಡಿಸುತ್ತಾ


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ಸರ್ವೇಶ್ವರನ ಕೋಪದ ನಿಮಿತ್ತ ಅದು ನಿರ್ಜನವಾಗುವುದು. ಪೂರ್ತಿಯಾಗಿ ಅದು ಪಾಳುಬೀಳುವುದು. ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದಕ್ಕೆ ಬಂದೊದಗಿದ ವಿಪತ್ತುಗಳನ್ನು ಕಂಡು ನಿಬ್ಬೆರಗಾಗುವರು, ಸಿಳ್ಳುಹಾಕಿ ಮೂದಲಿಸುವರು.


ಬೊಚ್ರ ನಗರವು ಪಾಳುಬೀಳುವುದು. ಜನರು ಅದನ್ನು ನೋಡಿ ಬೆಚ್ಚಿಬೀಳುವರು. ಅದು ಶಾಪಕ್ಕೂ ನಿಂದೆ ಪರಿಹಾಸ್ಯಕ್ಕೂ ಗುರಿಯಾಗುವುದು. ಅದಕ್ಕೆ ಸೇರಿದ ಊರುಗಳೆಲ್ಲ ನಿತ್ಯನಾಶ ಹೊಂದುವುವು. ಇದನ್ನು ಆಣೆಯಿಟ್ಟು ಹೇಳಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ಈ ಮಹಾಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ಚಕಿತರಾಗಿ, ‘ಅಬ್ಬಬ್ಬಾ, ಇದೇನು! ಸರ್ವೇಶ್ವರ ನಾಡಿಗೂ ಈ ಗುಡಿಗೂ ಹೀಗೇಕೆ ಮಾಡಿದರು?’ ಎಂದು ಕೇಳುವರು.


ಪಕ್ಕದಲ್ಲಿ ಹಾದುಹೋಗುತ್ತಿದ್ದ ಜನರು ತಲೆಯಾಡಿಸುತ್ತಾ, “ಆಹಾ, ಮಹಾದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟಬಲ್ಲವನೇ,


“ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು, ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.


ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿನ ಜೆರುಸಲೇಮ್ ನಿವಾಸಿಗಳನ್ನೂ ಕುರಿತು ಇಂತೆನ್ನುತ್ತಾರೆ: ‘ಅವರು ಅನ್ನವನ್ನು ಅಂಜಿಕೆಯಿಂದ ತಿಂದು ನೀರನ್ನು ನಡುಕದಿಂದ ಕುಡಿಯುವರು: ಏಕೆಂದರೆ ಆ ನಾಡಿನಲ್ಲಿರುವವರು ಹಿಂಸಾಚಾರಿಗಳು; ಈ ಕಾರಣ, ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ನಾಡು ಬರಿದಾಗುವುದು.


ನಾನು ಅವರ ವಿರುದ್ಧ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಬದವರೆಗೂ ಹಾಳುಪಾಳು ಮಾಡುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”


ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ :


ಅನ್ಯಜನ ನಮ್ಮನಣಕಿಸಿ ತಲೆಯಾಡಿಸುವಂತೆ ಮಾಡಿರುವೆ I ಅನ್ಯಾಯಕ್ಕೆ ಅಡ್ಡಹೆಸರಾಗುವಂತೆ ನಮ್ಮನು ಬಿಟ್ಟಿರುವೆ II


ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.


ಅವರು ನಿಮಗೂ ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವರು. ದೀರ್ಘಕಾಲ ವಾಸಿಯಾಗದ ಘೋರವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವರು.


ಆದರೆ ಅವರು ಬಿಟ್ಟುಹೋದ ಸ್ವಂತ ನಾಡು ಮೊಟ್ಟಮೊದಲು ನಿರ್ಜನವಾಗಬೇಕು; ಅದು ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು; ಅವರು ಸರ್ವೇಶ್ವರನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣ ತಮ್ಮ ಪಾಪದ ಫಲವನ್ನು ಸವಿಯಬೇಕು.


ನಾನು ನಿಮ್ಮ ನಾಡನ್ನು ಸಂಪೂರ್ಣವಾಗಿ ಹಾಳುಮಾಡಿದಾಗ ಅದರಲ್ಲಿ ನೆಲಸುವ ಶತ್ರುಗಳು ಅದನ್ನು ನೋಡಿ ಚಕಿತರಾಗುವರು.


ಗುರಿಯಾಗಿರುವೆನು ನಾ ಜನರ ಅಪಹಾಸ್ಯಕ್ಕೆ I ನೋಡುವವರು ತಲೆಯಾಡಿಸಿ ಮಾಡುವ ನಿಂದೆಗೆ II


“ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಜೆರುಸಲೇಮಿನ ಮೇಲೆ ಹೇಗೆ ಸುರಿಯಿತೋ ಹಾಗೆಯೆ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೆ ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ನಾಡನ್ನು ನೀವು ಮತ್ತೆ ನೋಡಲಾರಿರಿ.’


ಈಜಿಪ್ಟಿಗೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಆ ಜುದೇಯದ ಅಳಿದುಳಿದ ಜನರನ್ನು ನಾಶಮಾಡುವೆನು. ಈಜಿಪ್ಟಿನಲ್ಲೆ ಅವರು ಮಣ್ಣುಪಾಲಾಗುವರು. ಖಡ್ಗ-ಕ್ಷಾಮಗಳಿಂದ ಅಳಿದುಹೋಗುವರು. ಚಿಕ್ಕವರು-ದೊಡ್ಡವರು ಎನ್ನದೆ ಖಡ್ಗ-ಕ್ಷಾಮಗಳಿಗೆ ತುತ್ತಾಗಿ, ಅಪವಾದ, ಅಪಹಾಸ್ಯಗಳಿಗೂ ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವರು.


ಮೋವಾಬೇ, ನೀನು ಇಸ್ರಯೇಲನ್ನು ಕುರಿತು ಗೇಲಿಮಾಡುತ್ತಿದ್ದೆಯಲ್ಲವೆ? ಕಳ್ಳರ ಗುಂಪಿಗೆ ಸೇರಿ ಅದು ಸಿಕ್ಕಿಕೊಂಡಂತೆ ನಿನಗೆ ಕಾಣುತ್ತಿತ್ತೇ? ಇಸ್ರಯೇಲಿನ ಪ್ರಸ್ತಾಪ ಎತ್ತಿದಾಗಲೆಲ್ಲ ನೀನು ತಲೆಯಾಡಿಸಿ ಹಿಯ್ಯಾಳಿಸುತ್ತಿಯಲ್ಲವೆ?


“ಎದೋಮಿಗೆ ವಿಪತ್ತುಗಳು ಬಂದೊದಗುವುವು. ಅದನ್ನು ನೋಡುವವರು ಬೆರಗುಗೊಳ್ಳುವರು. ಹಾದುಹೋಗುವವರೆಲ್ಲರು ಸಿಳ್ಳುಹಾಕಿ ಪರಿಹಾಸ್ಯ ಮಾಡುವರು.


ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”


ನಿನ್ನ ನೋಡಿ ಸಿಳ್ಳುಹಾಕುವರು ರಾಷ್ಟ್ರಗಳ ವರ್ತಕರು. ನಾಶವಾದೆ ನೀನು ಪೂರ್ತಿಯಾಗಿ, ಇಲ್ಲವಾದೆ ಇನ್ನೆಂದಿಗು.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ : “ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು, ಹಾಳಾದ ನೀವು, ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಕೊಚ್ಚುವವರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.


ಆದುದರಿಂದ ಸರ್ವೇಶ್ವರ, ಜುದೇಯ ನಾಡಿನ ಮೇಲೂ ಜೆರುಸಲೇಮಿನ ಮೇಲೂ ಕೋಪಗೊಂಡು ಅವುಗಳನ್ನು ಭಯಭೀತಿಗೂ ಹಾಸ್ಯಪರಿಹಾಸ್ಯಗಳಿಗೂ ಆಸ್ಪದವಾಗಿಸಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು.


ಖಡ್ಗ-ಕ್ಷಾಮ-ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗಿರುವ ಎಲ್ಲ ರಾಷ್ಟ್ರಗಳಲ್ಲಿ ಅವರು ಶಾಪ, ಪರಿಹಾಸ್ಯ, ದೂಷಣೆಗಳಿಗೆ ಗುರಿಯಾಗುವಂತೆ ಮಾಡುವೆನು.


ಆಗ ಬಾಬಿಲೋನ್ ಹಾಳುದಿಬ್ಬ ಆಗುವುದು. ಗುಳ್ಳೆನರಿಗಳ ಬೀಡಾಗುವುದು. ಅದು ಭಯಭೀತಿಗೂ ಸೀಳು ಪರಿಹಾಸ್ಯಕ್ಕೂ ಆಸ್ಪದವಾಗುವುದು.


ಕಾಡು, ಕಗ್ಗಾಡು, ಬೆಂಗಾಡು ಆಗಿವೆ ಅದರ ನಗರಗಳು. ಆ ದೇಶದೊಳು ಯಾರೂ ವಾಸಿಸರು, ಯಾವ ನರಪ್ರಾಣಿಯೂ ಹಾದುಹೋಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು