Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:18 - ಕನ್ನಡ ಸತ್ಯವೇದವು C.L. Bible (BSI)

18 ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:18
37 ತಿಳಿವುಗಳ ಹೋಲಿಕೆ  

ಕ್ಷೌರಗತ್ತಿಗೂ ಹರಿತ ನಿನ್ನ ನಾಲಿಗೆ, ವಂಚಕನೆ I ಕಲ್ಪಿಸುವೆಯಾ ದಿನವೆಲ್ಲಾ ನಾಶವಿನಾಶವನೆ? II


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ.


ಈಗ ನೀನು ಜುದೇಯದ ಹಾಗು ಜೆರುಸಲೇಮಿನ ಜನರಿಗೆ ಈ ಸಂದೇಶವನ್ನು ತಿಳಿಸು - ‘ಸರ್ವೇಶ್ವರ ಹೀಗೆನ್ನುತ್ತಾರೆ : ನಾನು ನಿಮಗೆ ವಿರುದ್ಧ ವಿಪತ್ತನ್ನು ಕಲ್ಪಿಸುತ್ತಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ದುರ್ಮಾರ್ಗವನ್ನು ಬಿಟ್ಟು ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


ತಂತ್ರೋಪಾಯಗಳ ಕಲ್ಪಿಸಿದರೂ ನಡೆಯದು I ಕೇಡನು ನಿನಗೆ ಬಗೆದರೂ ಅದು ಕೈಗೂಡದು II


ಅದಾದ ಮೇಲೆ ಹೋಷಾಯನ ಮಗ ಅಜರ್ಯನು, ಕಾರೇಹನ ಮಗ ಯೋಹಾನಾನನು, ಹಾಗು ಅಹಂಕಾರಿಗಳಾದ ಜನರೆಲ್ಲರು ಅವನಿಗೆ, “ನಿನ್ನ ಮಾತು ಸುಳ್ಳು, ಈಜಿಪ್ಟಿಗೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ.


ಜನನ ಮರಣಗಳ ಶಕ್ತಿ ನಾಲಿಗೆಗಿದೆ; ವಚನ ಪ್ರಿಯರು ಅದರ ಫಲವನ್ನು ರುಚಿಸುವರು.


ನಾಲಗೆಯೆಂಬ ಅಲಗನವರು ಮಸೆದಿಹರು I ನಂಜುಮಾತೆಂಬ ಅಂಬನು ಹೂಡಿಹರು II


ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’


ಕಳ್ಳನ ಸಾಧನಗಳು ಕೆಟ್ಟವುಗಳೇ. ಅವನ ಯೋಜನೆಗಳು ಅಬದ್ಧವಾದುವೇ. ದೀನದಲಿತರ ಕೋರಿಕೆಗಳು ನ್ಯಾಯಬದ್ಧವಾಗಿದ್ದರೂ ಸುಳ್ಳುಮಾತುಗಳಿಂದ ಅವರನ್ನು ಹಾಳುಮಾಡುತ್ತಾನೆ.


ನಿರರ್ಥಕಗೊಳಿಸುತ್ತಾನೆ ವಕ್ರಿಗಳ ತಂತ್ರೋಪಾಯಗಳನು ಸಿಕ್ಕಿಸಿಬಿಡುತ್ತಾನೆ ಅವರವರ ಯೋಜನೆಗಳಲ್ಲೆ ಜ್ಞಾನಿಗಳನು.


ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲ ಇಸ್ರಯೇಲರೂ, “ಅರ್ಕಿಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೆಯದಾಗಿದೆ,” ಎಂದರು. ಹೀಗೆ ಸರ್ವೇಶ್ವರ ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು, ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದರು.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು, “ಸರ್ವೇಶ್ವರಾ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು,” ಎಂದು ಪ್ರಾರ್ಥಿಸಿದನು.


ಸರ್ವೇಶ್ವರನಾದ ನಾನು ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಎಲ್ಲ ಆಜ್ಞೆಗಳನ್ನು ಜನರಿಗೆ ಬೋಧಿಸಬೇಕು. ಇದು ನಿಮ್ಮ ಕರ್ತವ್ಯ,” ಎಂದು ಹೇಳಿದರು.


ಅಲ್ಲಿ ನಿಂತಿದ್ದ ಫರಿಸಾಯರು ಈ ಮಾತನ್ನು ಕೇಳಿ, “ಹಾಗಾದರೆ ನಾವು ಕೂಡ ಕುರುಡರೋ?’ ಎಂದು ಪ್ರಶ್ನಿಸಿದರು.


ಯಾಜಕರೂ ಪ್ರವಾದಿಗಳೂ, “ಇವನು ಮರಣದಂಡನೆಗೆ ಪಾತ್ರನು; ನಗರಕ್ಕೆ ಅಹಿತವಾದುದನ್ನು ನುಡಿದಿದ್ದಾನೆ. ಇದನ್ನು ನೀವೇ ಕೇಳಿದ್ದೀರಿ,” ಎಂದು ನಾಯಕರಿಗೂ ಜನರೆಲ್ಲರಿಗೂ ದೂರು ಇತ್ತರು.


ಇದನ್ನು ಕೇಳಿದ ಒಬ್ಬ ಧರ್ಮಶಾಸ್ತ್ರಜ್ಞನು, “ಬೋಧಕರೇ, ನೀವು ಹೀಗೆ ಮಾತನಾಡುವುದರಿಂದ ನಮ್ಮನ್ನೂ ಖಂಡಿಸಿದಂತಾಯಿತು,” ಎಂದನು.


ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು.


‘ನಾವು ಜ್ಞಾನಿಗಳು. ಸರ್ವೇಶ್ವರನ ಧರ್ಮಶಾಸ್ತ್ರ ನಮ್ಮಲ್ಲಿದೆ’ ಎಂದು ನೀವು ಹೇಗೆ ತಾನೇ ಹೇಳಬಲ್ಲಿರಿ? ಧರ್ಮಶಾಸ್ತ್ರಿಗಳ ಸುಳ್ಳು ಲೇಖನಿ ಅದನ್ನು ಸುಳ್ಳನ್ನಾಗಿ ಮಾಡಿದೆ.


ಯೆರೆಮೀಯ : “ಸರ್ವೇಶ್ವರಾ, ನನ್ನ ಕಡೆಗೆ ಕಿವಿಗೊಡಿ. ನನ್ನೊಡನೆ ವಾದಿಸುವವರ ಮಾತನ್ನು ಗಮನಿಸಿ ನೋಡಿ.


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ಬೆನ್ಯಾಮೀನನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆ ಕುಳಿತಿದ್ದನು. ಅವನು ಪ್ರವಾದಿ ಯೆರೆಮೀಯನನ್ನು, “ನೀನು ಬಾಬಿಲೋನಿಯರನ್ನು ಮರೆಹೋಗಲು ಹೋಗುತ್ತಿರುವೆ,” ಎಂದು ಹೇಳಿ ಅವನನ್ನು ಬಂಧಿಸಿದನು.


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು.


ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ,ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.


ನಿನಗೆ ವಿರುದ್ಧವಾಗಿ ಅವರು ಯುದ್ಧಮಾಡುವರು; ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ನುಡಿ".


“ಸರ್ವೇಶ್ವರನ ಹೆಸರಿನಲ್ಲಿ ನೀನು ನಮಗೆ ನುಡಿದ ಮಾತನ್ನು ನಾವು ಕೇಳಲೊಲ್ಲೆವು.


ನನ್ನ ಹಾನಿಗಾಗಿ ನಿತ್ಯವೂ ಮಾಡುತ್ತಿರುವ ನಿಂದೆ ಅವಮಾನ, ತಂತ್ರೋಪಾಯ.


ಅಂಥ ಪ್ರವಾದಿಗಳಿಗೆ ಸರ್ವೇಶ್ವರ: “ಅಂಧಕಾರ ನಿಮ್ಮನ್ನು ಆವರಿಸುವುದು. ದಿವ್ಯದರ್ಶನ ನಿಮಗೆ ದೊರಕದು. ನಿಮಗೆ ಕತ್ತಲು ಕವಿದಂತಾಗಿ ಕಣಿಹೇಳಲು ಸಾಧ್ಯವಾಗದು. ಸೂರ್ಯ ನಿಮ್ಮ ಪಾಲಿಗೆ ಮುಳುಗಿದಂತೆಯೇ, ಹಗಲು ನಿಮಗೆ ಕಾರ್ಗತ್ತಲೆಯಂತೆಯೆ.”


ಹೀಗಾಗಿ ದಿವ್ಯದರ್ಶಿಗಳಿಗೆ ಅವಮಾನವಾಗುವುದು. ಕಣಿ ಹೇಳುವವರಿಗೆ ನಾಚಿಕೆಯಾಗುವುದು. ಅವರೆಲ್ಲರೂ ಬಟ್ಟೆಯಿಂದ ಬಾಯಿ ಮುಚ್ಚಿಕೊಳ್ಳಬೇಕಾಗುವುದು. ಕಾರಣ, ಅವರಿಗೆ ದೇವರಿಂದ ಯಾವ ಪ್ರತ್ಯುತ್ತರವೂ ಬರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು