Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:19 - ಕನ್ನಡ ಸತ್ಯವೇದವು C.L. Bible (BSI)

19 ಯೆರೆಮೀಯ : “ಸರ್ವೇಶ್ವರಾ, ನನ್ನ ಕಡೆಗೆ ಕಿವಿಗೊಡಿ. ನನ್ನೊಡನೆ ವಾದಿಸುವವರ ಮಾತನ್ನು ಗಮನಿಸಿ ನೋಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನೇ, ನನ್ನ ಕಡೆಗೆ ಕಿವಿಗೊಡು, ನನ್ನೊಡನೆ ವ್ಯಾಜ್ಯವಾಡುವವರ ಮಾತನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನೇ, ನನ್ನ ಕಡೆಗೆ ಕಿವಿಗೊಡು, ನನ್ನೊಡನೆ ವ್ಯಾಜ್ಯವಾಡುವವರ ಮಾತನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನೇ, ನನ್ನ ಮಾತನ್ನು ಆಲಿಸು, ನನ್ನ ವಾದವನ್ನು ಆಲಿಸಿ ಯಾರು ಹೇಳುವುದು ಸರಿ ಎನ್ನುವುದನ್ನು ನಿರ್ಣಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಓ ಯೆಹೋವ ದೇವರೇ, ನನಗೆ ಕಿವಿಗೊಡು. ನನ್ನ ಸಂಗಡ ವ್ಯಾಜ್ಯವಾಡುವವರ ಮಾತನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:19
14 ತಿಳಿವುಗಳ ಹೋಲಿಕೆ  

ಹೀಗೆ ಎಲ್ಲರೂ, ನಮ್ಮ ಕೈಗಳು ಜೋಲುಬಿದ್ದು ಕೆಲಸ ಮುಗಿಯದೆ ನಿಂತುಹೋಗಲಿ ಎಂದುಕೊಂಡು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ನಾನೋ, “ನನ್ನ ದೇವರೇ, ನನ್ನ ಕೈಗಳನ್ನು ಬಲಪಡಿಸಿ,” ಎಂದು ಪ್ರಾರ್ಥಿಸಿದೆ.


ನನ್ನ ಶತ್ರುಗಳೇ, ನನ್ನನ್ನು ನೋಡಿ ಹಿಗ್ಗಬೇಡಿ. ನಾನು ಬಿದ್ದುಹೋದರೂ, ಎದ್ದೇಳುವೆನು; ಕತ್ತಲೆಯಲ್ಲಿ ಕುಳಿತಿದ್ದರೂ ಸರ್ವೇಶ್ವರ ನನಗೆ ಬೆಳಕಾಗುವರು.


ಸರ್ವಶಕ್ತರಾದ ಸರ್ವೇಶ್ವರಾ, ನೀವು ಸತ್ಪುರುಷರನ್ನು ಪರಿಶೋಧಿಸುವವರು ಅಂತರಿಂದ್ರಿಯಗಳನ್ನೂ ಅಂತರಾಳವನ್ನೂ ವೀಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ.


ಅವರೆನ್ನನು ಶಪಿಸಿದರೂ ನೀನೆನ್ನನು ಹರಸು I ನನ್ನೆದುರಾಳಿಗೆ ಅಪಮಾನವನು ಹೊರಿಸು I ನಿನ್ನ ದಾಸನೆನಗೆ ಆನಂದವನು ಪಾಲಿಸು II


ಪ್ರೀತಿಗೆ ಪ್ರತಿಯಾಗಿ ಮಾಡುತಿಹರು ಆಪಾದನೆ I ಆದರೂ ಮಾಡುತ್ತಿರುವೆ ಅವರಿಗಾಗಿ ಪ್ರಾರ್ಥನೆ II


ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ: ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕಾಗಿ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ಸರ್ವೇಶ್ವರಾ, ನಿನಗೆ ತಿಳಿದಿದೆ ನನಗಾದ ಅನ್ಯಾಯ ದೊರಕುವಂತೆ ಮಾಡು ನನಗೆ ನ್ಯಾಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು