ಯೆರೆಮೀಯ 18:20 - ಕನ್ನಡ ಸತ್ಯವೇದವು C.L. Bible (BSI)20 ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮೇಲಿಗೆ ಮುಯ್ಯಾಗಿ ಕೇಡು ಆಗ ತಕ್ಕದ್ದೋ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ಚಿತ್ತವಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಾನು ಯೆಹೂದದ ಜನರಿಗೆ ಒಳ್ಳೆಯದನ್ನು ಮಾಡಿದೆನು. ಆದರೆ ಅವರೀಗ ನನಗೆ ಕೆಟ್ಟದ್ದನ್ನು ಮಾಡುತ್ತಿದ್ದಾರೆ. ಈಗ ಅವರು ನನ್ನನ್ನು ಕೊಲ್ಲುವುದಕ್ಕಾಗಿ ಒಂದು ಗುಂಡಿಯನ್ನು ತೋಡಿದ್ದಾರೆ. ಯೆಹೋವನೇ, ನಾನು ಮಾಡಿದ್ದು ನಿನ್ನ ಜ್ಞಾಪಕದಲ್ಲಿದೆಯೇ? ನಾನು ನಿನ್ನ ಎದುರಿಗೆ ನಿಂತುಕೊಂಡು ಈ ಜನರಿಗೆ ಒಳ್ಳೆಯದನ್ನು ಮಾಡೆಂದೂ ಅವರ ಮೇಲೆ ಕೋಪಗೊಳ್ಳಬಾರದೆಂದೂ ನಿನ್ನಲ್ಲಿ ಕೇಳಿಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಏಕೆಂದರೆ, ಅವರು ನನ್ನ ಪ್ರಾಣಕ್ಕೆ ಕುಳಿಯನ್ನು ಅಗೆದಿದ್ದಾರೆ. ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವುದಕ್ಕೂ, ನಿನ್ನ ಉಗ್ರವನ್ನು ಅವರಿಂದ ತಿರುಗಿಸುವುದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ. ಅಧ್ಯಾಯವನ್ನು ನೋಡಿ |