ಯೆರೆಮೀಯ 18:6 - ಕನ್ನಡ ಸತ್ಯವೇದವು C.L. Bible (BSI)6 “ಇಸ್ರಯೇಲಿನ ವಂಶಜರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೇ? ಇಸ್ರಯೇಲಿನ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ ಹಾಗೆಯೇ ನೀವು ನನ್ನ ಕೈಯಲ್ಲಿ ಇದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಯೆಹೋವನು ಹೀಗೆನ್ನುತ್ತಾನೆ, ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಬಾರದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ, ನೀವು ನನ್ನ ಕೈಯಲ್ಲಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ ನೀವು ನನ್ನ ಕೈಯಲ್ಲಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಇಸ್ರೇಲ್ ಮನೆತನದವರೇ, ನಾನು ನಿಮಗೆ ಹೀಗೆಯೇ ಮಾಡಲು ಸಾಧ್ಯವೆಂಬುದನ್ನು ನೀವು ಬಲ್ಲಿರಿ. ನೀವು ಕುಂಬಾರನ ಕೈಯಲ್ಲಿದ್ದ ಜೇಡಿಮಣ್ಣಿನಂತಿದ್ದೀರಿ. ನಾನು ಆ ಕುಂಬಾರನಂತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಈ ಇಸ್ರಾಯೇಲಿನ ಮನೆತನದವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡಲಾರೆನೇ, ಎಂದು ಯೆಹೋವ ದೇವರು ಅನ್ನುತ್ತಾರೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ, ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ. ಅಧ್ಯಾಯವನ್ನು ನೋಡಿ |