Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:7 - ಕನ್ನಡ ಸತ್ಯವೇದವು C.L. Bible (BSI)

7 ಒಂದು ಜನಾಂಗವನ್ನು ಅಥವಾ ಒಂದು ರಾಜ್ಯವನ್ನು ಕಿತ್ತು, ಕೆಡವಿ, ನಾಶಪಡಿಸಿ ಎಂದು ನಾನು ಎಂದಾದರೂ ಅಪ್ಪಣೆ ಕೊಡಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕಿತ್ತು, ಕೆಡವಿ ನಾಶಪಡಿಸಬೇಕೆಂದು ಅಪ್ಪಣೆಕೊಟ್ಟಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ರಾಜ್ಯವನ್ನಾಗಲಿ ಕಿತ್ತು ಕೆಡವಿ ನಾಶಪಡಿಸಬೇಕೆಂದು ಅಪ್ಪಣೆಕೊಟ್ಟಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಒಮ್ಮೆ ನಾನು ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕುರಿತು ಮಾತನಾಡುವಾಗ ಆ ಜನಾಂಗವನ್ನು ನಾನು ಖಂಡಿಸುವೆನೆಂದು ಮತ್ತು ಆ ಜನಾಂಗವನ್ನು ನಾನು ನಾಶಪಡಿಸುವೆನೆಂದು ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವುದಕ್ಕೂ ಕೆಡವುದಕ್ಕೂ ನಾಶಮಾಡುವುದಕ್ಕೂ ಮಾತಾಡುತ್ತೇನೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:7
13 ತಿಳಿವುಗಳ ಹೋಲಿಕೆ  

ರಾಷ್ಟ್ರಗಳ ಮೇಲೂ ರಾಜ್ಯಗಳ ಮೇಲೂ ಅಧಿಕಾರವುಳ್ಳವನನ್ನಾಗಿ ನಾನು ನಿನ್ನನ್ನು ಈ ದಿನ ನೇಮಿಸಿದ್ದೇನೆ. ಇದರಿಂದಾಗಿ ಕಿತ್ತುಹಾಕುವ ಹಾಗು ಕೆಡುವುವ, ನಾಶಪಡಿಸುವ ಹಾಗು ನೆಲಸಮಮಾಡುವ, ಕಟ್ಟುವ ಹಾಗು ನೆಡುವ ಕಾರ್ಯ ನಿನ್ನದು,” ಎಂದರು


“ಸರ್ವೇಶ್ವರನ ಈ ವಾಣಿಯನ್ನು ಕೇಳು: ‘ನೋಡು, ನಾನು ಕಟ್ಟಿದ್ದನ್ನು ನಾನೇ ಕೆಡವುತ್ತೇನೆ. ನಾನು ನೆಟ್ಟಿದ್ದನ್ನು ನಾನೇ ಕಿತ್ತುಹಾಕುತ್ತೇನೆ. ಹೌದು ಜಗದಲ್ಲೆಲ್ಲ ಹಾಗೆ ಮಾಡುತ್ತೇನೆ.


ನಗರವನ್ನು ಪ್ರವೇಶಿಸಿ ಒಂದು ದಿನದ ಪ್ರಯಾಣಮಾಡಿದ ನಂತರ ಯೋನನು ಸ್ವಾಮಿಯ ಸಂದೇಶವನ್ನು ಸಾರುತ್ತಾ, “ಜನರೇ, ಕೇಳಿ: ನಿಮ್ಮ ನಗರ ನಲವತ್ತು ದಿನಗಳಲ್ಲಿ ನಾಶವಾಗುವುದು,” ಎಂದನು.


ಒಡೆಯ ಸರ್ವೇಶ್ವರನಾದ ನಾನು ಈ ಪಾಪಮಯ ರಾಜ್ಯದ ಮೇಲೆ ಕಣ್ಣಿಟ್ಟಿದ್ದೇನೆ ಎಂಬುದನ್ನು ಗಮನಿಸಿರಿ. ಇದನ್ನು ಭೂಮಂಡಲದಿಂದ ನಾಶಮಾಡುವೆನು. ಆದರೆ ಯಕೋಬ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.


ಇದನ್ನು ಕಂಡ ಸರ್ವೇಶ್ವರ ಮನುಜನನ್ನು ಇಲ್ಲಿ ಸೃಷ್ಟಿಮಾಡಿದ್ದಕ್ಕಾಗಿ ವ್ಯಥೆಪಟ್ಟು,


ಅವರನ್ನು ಕೀಳಲು ಕೆಡವಲು, ಅಳಿಸಲು ಹಾಳುಮಾಡಲು, ಈ ಮೊದಲು ಎಚ್ಚರವಹಿಸಿದ ಹಾಗೆಯೆ ಇನ್ನು ಮುಂದೆ ಅವರನ್ನು ಕಟ್ಟಲು ಹಾಗು ನೆಡಲು ಎಚ್ಚರವಹಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


‘ನೀವು ಈ ನಾಡಿನಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡುವುದಿಲ್ಲ, ನೆಡುವೆನು, ಕೀಳುವುದಿಲ್ಲ, ನಾನು ನಿಮಗೆ ಮಾಡಿದ ಕೇಡಿಗಾಗಿ ವಿಷಾದಿಸುತ್ತೇನೆ.


ನಾನು ದುಷ್ಟನಿಗೆ, ‘ನೀನು ಸತ್ತೇ ಸಾಯುವೆ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನ್ಯಾಯನೀತಿಗಳನ್ನು ನಡೆಸಲು


ಆದರೆ ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯ ಒಡೆದು ನಾಲ್ಕು ದಿಕ್ಕುಗಳಿಗೂ ಸೀಳಿಹೋಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ಪ್ರಬಲವಾಗಿ ಇದ್ದಂತೆ ಅದು ಇನ್ನು ಪ್ರಬಲವಾಗದು.


ಬಹುಶಃ ಅವರು ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಹಾಗೆ ಮಾಡಿದ್ದೇ ಆದರೆ, ಅವರ ದುಷ್ಕೃತ್ಯಗಳಿಗೆ ದಂಡನೆಯನ್ನು ವಿಧಿಸಬೇಕೆಂದಿದ್ದ ನನ್ನ ಮನಸ್ಸನ್ನು ಬದಲಾಯಿಸಿಕೊಳ್ಳುವೆನು.


ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು