ಯೆರೆಮೀಯ 18:8 - ಕನ್ನಡ ಸತ್ಯವೇದವು C.L. Bible (BSI)8 ದಂಡನೆಗೆ ನಿರ್ಣಯಿಸಲಾದ ಆ ಜನಾಂಗದವರು ತಮ್ಮ ಕೆಟ್ಟತನವನ್ನು ಬಿಟ್ಟು ಹಿಂತಿರುಗಿದ್ದೇ ಆದರೆ ನಾನು ಬರಮಾಡಬೇಕೆಂದಿದ್ದ ಆ ವಿಪತ್ತನ್ನು ನಾನು ಮನಮರುಗಿ ಬರಮಾಡದಿರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ದಂಡನೆ ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಆ ಜನಾಂಗದ ಜನರು ತಮ್ಮ ಮನಸ್ಸನ್ನು ಮತ್ತು ಜೀವನವನ್ನು ಪರಿವರ್ತಿಸಿಕೊಳ್ಳಬಹುದು. ಆ ಜನಾಂಗದ ಜನರು ಮಾಡುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಆಗ ನಾನು ನನ್ನ ವಿಚಾರವನ್ನು ಬದಲಾಯಿಸಿ, ಆ ಜನಾಂಗವನ್ನು ನಾಶಪಡಿಸಬೇಕೆಂದು ಮಾಡಿದ ನನ್ನ ಮುಂಚಿನ ಯೋಜನೆಗಳನ್ನು ಕಾರ್ಯರೂಪಕ್ಕೆ ತರದಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾನು ಆ ಜನಾಂಗಕ್ಕೆ ವಿರೋಧವಾಗಿ ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ, ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು. ಅಧ್ಯಾಯವನ್ನು ನೋಡಿ |
ಈಜಿಪ್ಟಿನವರು ತಮ್ಮ ವಿಷಯದಲ್ಲಿ, ‘ಸರ್ವೇಶ್ವರನು ಕೇಡುಮಾಡಬೇಕೆಂಬ ಉದ್ದೇಶದಿಂದಲೇ ಇಸ್ರಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದದ್ದು; ಅವರನ್ನು ಬೆಟ್ಟಗುಡ್ಡಗಳಲ್ಲಿ ಸಾಯಿಸಿ ಇಳೆಯಲ್ಲಿ ಉಳಿಯದಂತೆ ನಿರ್ಮೂಲ ಮಾಡಬೇಕೆಂದೇ ಅವರನ್ನು ಕರೆದುಕೊಂಡು ಹೋದದ್ದು ಎಂದು ಆಡಿಕೊಳ್ಳುವುದಕ್ಕೆ ಎಡೆಮಾಡಿಕೊಳ್ಳಬೇಕೆ? ತಾವು ಕೋಪಾಗ್ನಿಯನ್ನು ಬಿಟ್ಟು ತಮ್ಮ ಪ್ರಜೆಗೆ ಕೇಡುಮಾಡಬೇಕೆಂಬ ಮನಸ್ಸನ್ನು ಮಾರ್ಪಡಿಸಿಕೊಳ್ಳಿ.
ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.