Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:9 - ಕನ್ನಡ ಸತ್ಯವೇದವು C.L. Bible (BSI)

9 ಹಾಗೆಯೇ ಒಂದು ಜನಾಂಗವನ್ನು ಅಥವಾ ಒಂದು ರಾಜ್ಯವನ್ನು ನೆಟ್ಟು ಕಟ್ಟಬೇಕೆಂದು ನಾನು ಎಂದಾದರೂ ಅಪ್ಪಣೆಕೊಡಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ನೆಟ್ಟು ಕಟ್ಟಬೇಕೆಂದು ಅಪ್ಪಣೆಕೊಟ್ಟಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ರಾಜ್ಯವನ್ನಾಗಲಿ ನೆಟ್ಟು ಕಟ್ಟಬೇಕೆಂದು ಅಪ್ಪಣೆಕೊಟ್ಟಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇನ್ನೊಮ್ಮೆ ಒಂದು ಜನಾಂಗದ ಬಗ್ಗೆ ಹೇಳುವಾಗ ಆ ಜನಾಂಗವನ್ನು ನಾನು ಅಭಿವೃದ್ಧಿಗೆ ತರುತ್ತೇನೆ, ಅದನ್ನು ನೆಟ್ಟು ಕಟ್ಟುತ್ತೇನೆ ಎಂದು ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಮಾತನಾಡುತ್ತೇನೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:9
9 ತಿಳಿವುಗಳ ಹೋಲಿಕೆ  

ಅವರನ್ನು ಕೀಳಲು ಕೆಡವಲು, ಅಳಿಸಲು ಹಾಳುಮಾಡಲು, ಈ ಮೊದಲು ಎಚ್ಚರವಹಿಸಿದ ಹಾಗೆಯೆ ಇನ್ನು ಮುಂದೆ ಅವರನ್ನು ಕಟ್ಟಲು ಹಾಗು ನೆಡಲು ಎಚ್ಚರವಹಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


“ಸರ್ವಶಕ್ತ ಸರ್ವೇಶ್ವರನಾದ ನಾನೇ ಈ ಇಸ್ರಯೇಲನ್ನೂ ಜುದೇಯವನ್ನೂ ನೆಟ್ಟಿ ಬೆಳೆಸಿದೆ. ಆದರೆ ಈಗ ‘ನಿನಗೆ ಕೇಡು,’ ಎಂದು ಶಪಿಸುತ್ತಿದ್ದೇನೆ. ಏಕೆಂದರೆ ಬಾಳನಿಗೆ ಧೂಪಾರತಿಯೆತ್ತಿ, ನನ್ನನ್ನು ಕೆಣಕಿ, ತಮಗೇ ಕೆಡುಕನ್ನು ಮಾಡಿಕೊಂಡಿದ್ದಾರೆ.


ರಾಷ್ಟ್ರಗಳ ಮೇಲೂ ರಾಜ್ಯಗಳ ಮೇಲೂ ಅಧಿಕಾರವುಳ್ಳವನನ್ನಾಗಿ ನಾನು ನಿನ್ನನ್ನು ಈ ದಿನ ನೇಮಿಸಿದ್ದೇನೆ. ಇದರಿಂದಾಗಿ ಕಿತ್ತುಹಾಕುವ ಹಾಗು ಕೆಡುವುವ, ನಾಶಪಡಿಸುವ ಹಾಗು ನೆಲಸಮಮಾಡುವ, ಕಟ್ಟುವ ಹಾಗು ನೆಡುವ ಕಾರ್ಯ ನಿನ್ನದು,” ಎಂದರು


ಹುಟ್ಟುವ ಸಮಯ, ಸಾಯುವ ಸಮಯ ನೆಡುವ ಸಮಯ, ನೆಟ್ಟದ್ದನ್ನು ಕೀಳುವ ಸಮಯ.


ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.


ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ಕಾಲ ಬರಲಿದೆ. ಆಗ ಸರ್ವೇಶ್ವರನಾದ ನನ್ನ ಮಹಿಮೆಗಾಗಿ ಈ ನಗರವನ್ನು ಹನನೇಲನ ಗೋಪುರದಿಂದ ಮೂಲೆ ಬಾಗಿಲವರೆಗೆ ವಿಸ್ತರಿಸಲಾಗುವುದು.


ಇಸ್ರಯೇಲೆಂಬ ಯುವತಿಯೇ, ನಿನ್ನ ಪಾಳುಬಿದ್ದ ಪ್ರದೇಶಗಳನ್ನು ನಾನು ಪುನಃ ಕಟ್ಟುವೆನು, ಅವು ಕಟ್ಟಡಗಳಿಂದ ಕೂಡಿರುವುವು. ನೀನು, ಮತ್ತೆ ತಾಳಮೇಳಗಳನ್ನು ತೆಗೆದುಕೊಂಡು ನಲಿದಾಡುವವರ ನಾಟ್ಯಗಳಲ್ಲಿ ಭಾಗವಹಿಸುವೆ.


ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು