Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 19:11 - ಕನ್ನಡ ಸತ್ಯವೇದವು C.L. Bible (BSI)

11 ಸರ್ವಶಕ್ತ ಸರ್ವೇಶ್ವರನ ಸಂದೇಶವಿದು - ಕುಂಬಾರ ಮಾಡಿದ ಮಣ್ಣಿನ ಮಡಕೆಯನ್ನು ಒಡೆದುಹಾಕಿದ ಮೇಲೆ ಸರಿಪಡಿಸಲಾಗದು. ಅಂತೆಯೇ ನಾನು ಈ ಜನರನ್ನು ಹಾಗು ನಗರವನ್ನು ಒಡೆದುಹಾಕುವೆನು. ಹೂಣಲು ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಹೆಣಗಳನ್ನು ಈ ತೋಫೆತಿನಲ್ಲೇ ಹೂಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಕುಂಬಾರನು ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನು ಮತ್ತು ಪಟ್ಟಣವನ್ನು ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನೂ ಪಟ್ಟಣವನ್ನೂ ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹೀಗೆ ಹೇಳು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ಈ ಮಣ್ಣಿನ ಕೊಡವನ್ನು ಒಡೆದುಹಾಕಿದಂತೆ ನಾನು ಯೆಹೂದ ಜನಾಂಗವನ್ನು ಮತ್ತು ಜೆರುಸಲೇಮ್ ನಗರವನ್ನು ಒಡೆದುಹಾಕುವೆನು. ಈ ಕೊಡವನ್ನು ಪುನಃ ಜೋಡಿಸಲು ಸಾಧ್ಯವಿಲ್ಲ. ಯೆಹೂದ ಜನಾಂಗದ ಸ್ಥಿತಿಯೂ ಹೀಗೆಯೇ ಆಗುವುದು. ತೋಫೆತಿನಲ್ಲಿ ಸ್ಥಳವಿಲ್ಲದಂತಾಗುವವರೆಗೂ ಸತ್ತವರನ್ನು ಅಲ್ಲಿ ಹೂಳಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ಯಾವ ಪ್ರಕಾರ ಒಬ್ಬನು ಕುಂಬಾರನ ಮಡಕೆಯನ್ನು ಅದು ತಿರುಗಿ ಒಂದುಗೂಡದ ಹಾಗೆ ಒಡೆಯುತ್ತಾನೋ, ಅದೇ ಪ್ರಕಾರ ನಾನು ಈ ಜನರನ್ನೂ, ಈ ಪಟ್ಟಣವನ್ನೂ ಒಡೆದುಬಿಡುವೆನು. ಆಗ ಹೂಳಿಡುವುದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಳಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 19:11
13 ತಿಳಿವುಗಳ ಹೋಲಿಕೆ  

ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು"II


ಆ ಗೋಡೆಯೆಂಬ ಕುಂಬಾರನ ಮಡಕೆಯ ಚೂರಿನಿಂದ, ಬೆಂಕಿಯ ಒಲೆಯಿಂದ ಕೆಂಡವನ್ನು ತೆಗೆಯುವುದಕ್ಕಾಗಲೀ ತೊಟ್ಟಿಯ ನೀರನ್ನು ತೋಡಿಕೊಳ್ಳುವುದಕ್ಕಾಗಲೀ ಸಾಧ್ಯವಾಗದು.”


ಅಯ್ಯೋ, ಅಪರಂಜಿಯಂತೆ ಅಮೂಲ್ಯವಾಗಿದ್ದ ಸಿಯೋನ್ ಪ್ರಜೆ ಇಂದು ಬೇಡವೆಂದು ಬಿಸಾಡಿದ ಕುಂಬಾರನ ಮಣ್ಣುಮಡಕೆ! ಅಮೂಲ್ಯವಾಗಿದ್ದರು ಸಿಯೋನಿನ ಪ್ರಜೆಗಳು ಅಪರಂಜಿಯಂತೆ ಅಯ್ಯೋ ಈಗ ಅವರಾಗಿಹರು ಕುಂಬಾರನೆ ಬಿಸಾಡಿದ ಮಡಕೆಯಂತೆ.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ಹಾಗು ನಾಶಮಾಡದೆ ಬಿಡೆನು,’ ಇದು ಸರ್ವೇಶ್ವರನಾದ ನನ್ನ ನುಡಿ.”


ಆದಕಾರಣ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್‍ಹಿನ್ನೋಮಿನ ಕಣಿವೆ ಎಂಬ ಹೆಸರುಗಳು ಹೋಗಿ, ‘ಕೊಲೆಯ ಕಣಿವೆ’ ಎಂದು ಹೆಸರಿಸಲಾಗುವ ಕಾಲ ಬರುವುದು.


ಅವನು ಪೌಲನ ಸೊಂಟಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳನ್ನು ಬಿಗಿದುಕೊಂಡು, “ಪವಿತ್ರಾತ್ಮ ಹೀಗೆನ್ನುತ್ತಾರೆ: ‘ಈ ಸೊಂಟಪಟ್ಟಿಯು ಯಾರದೋ ಅವನನ್ನು ಜೆರುಸಲೇಮಿನಲ್ಲಿ ಯೆಹೂದ್ಯರು ಹೀಗೆಯೇ ಕಟ್ಟಿ, ಅನ್ಯಧರ್ಮೀಯರ ವಶಕ್ಕೆ ಒಪ್ಪಿಸುವರು,’ “ ಎಂದನು.


ಆದ್ದರಿಂದ ತಟ್ಟನೆ ಒದಗುವುದು ವಿಪತ್ತು ಮತ್ತೆ ಏಳಲಾಗದಂತಹ ಕಠಿಣ ಆಪತ್ತು.


ನಾನು ಈ ಸ್ಥಳವನ್ನೂ ಇದರ ನಿವಾಸಿಗಳನ್ನೂ ಅಷ್ಟರಮಟ್ಟಿಗೆ ನಾಶಪಡಿಸಿ ಈ ನಗರವನ್ನು ತೋಫೆತಿನ ಪರಿಸ್ಥಿತಿಗೆ ಇಳಿಸುವೆನು.


ಮೋವಾಬಿನ ಎಲ್ಲ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ಒಂದೇ ರೋದನ. ಏಕೆಂದರೆ ಯಾರಿಗೂ ಬೇಡದ ಮಡಕೆಯಂತೆ ಮೋವಾಬನ್ನು ಒಡೆದುಹಾಕಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ಈ ಸುರುಳಿಯನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ ಯೂಫ್ರೆಟಿಸ್ ನದಿಯ ಮಧ್ಯೆ ಎಸೆದುಬಿಡು.


‘ಕುರಿಗಾಹಿಗಳೇ, ಅರಚಿಗೋಳಾಡಿ ಮೇಷಪಾಲರೇ, ಬೂದಿಯಲ್ಲಿ ಬಿದ್ದು ಹೊರಳಾಡಿ. ನಿಮ್ಮನ್ನು ವಧಿಸುವ ಕಾಲ ಬಂದಿದೆ ನಾನು ನಿಮ್ಮನ್ನು ಭಂಗಪಡಿಸುವೆ. ನೀವು ಚೂರುಚೂರಾಗುವಿರಿ ಒಡೆದುಹೋದ ಅಂದವಾದ ಪಾತ್ರೆಯಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು