Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 19:15 - ಕನ್ನಡ ಸತ್ಯವೇದವು C.L. Bible (BSI)

15 “ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ಈ ನಗರದವರೂ ಇದರ ಸುತ್ತಮುತ್ತಿನ ಊರಿನವರೂ ನನ್ನ ಮಾತನ್ನು ಕೇಳದೆಹೋದರು. ತಮ್ಮ ಮನಸ್ಸನ್ನು ಕಲ್ಲಾಗಿಸಿಕೊಂಡರು. ಆದುದರಿಂದ ನಾನು ಈ ನಗರಕ್ಕೆ ಶಾಪ ಹಾಕಿದ ಕೇಡನ್ನೆಲ್ಲಾ ಅವರಿಗೆ ಬರಮಾಡುವೆನು,” ಎಂದು ಎಲ್ಲ ಜನರಿಗೆ ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಈ ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು” ಎಂದು ಸಮಸ್ತ ಜನರಿಗೆ ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ಈ ಪಟ್ಟಣದವರೂ ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು ಎಂದು ಸಮಸ್ತ ಜನರಿಗೆ ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ‘ನಾನು ಜೆರುಸಲೇಮಿಗೂ ಅದರ ಸುತ್ತಲಿನ ಹಳ್ಳಿಗಳಿಗೂ ಅನೇಕ ವಿಪತ್ತುಗಳನ್ನು ಬರಮಾಡುವುದಾಗಿ ಹೇಳಿದೆನು. ಅವುಗಳನ್ನು ಬೇಗನೆ ಬರಮಾಡುತ್ತೇನೆ. ಏಕೆಂದರೆ ಜನರು ಬಹಳ ಮೊಂಡರಾಗಿದ್ದಾರೆ. ನಾನು ಹೇಳಿದ್ದನ್ನು ಅವರು ಕೇಳುವುದೂ ಇಲ್ಲ, ಅನುಸರಿಸುವುದೂ ಇಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ಇಗೋ, ನಾನು ಈ ಪಟ್ಟಣದ ಮೇಲೆಯೂ, ಅದರ ಎಲ್ಲಾ ಊರುಗಳ ಮೇಲೆಯೂ, ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ತರಿಸುತ್ತೇನೆ. ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಹೃದಯಗಳನ್ನು ಕಠಿಣ ಮಾಡಿಕೊಂಡಿದ್ದಾರೆ, ಎಂಬುದೇ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 19:15
23 ತಿಳಿವುಗಳ ಹೋಲಿಕೆ  

ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”


ಅವರಾದರೋ ನನಗೆ ಕಿವಿಗೊಡಲಿಲ್ಲ. ಕೇಳಲಿಕ್ಕೂ ಕಲಿತುಕೊಳ್ಳಲಿಕ್ಕೂ ಅವರು ಒಪ್ಪಲಿಲ್ಲ.


‘ಧರ್ಮೋಪದೇಶಕೆ ಮರಳಿ ಮನವೊಲಿದು ಬನ್ನಿ’ ಎಂದು ನೀವೆಷ್ಟೋ ಸಾರಿ ಅವರನ್ನೆಚ್ಚರಿಸಿದಿರಿ ಖಚಿತವಾಗಿ ಆದರೂ ಆಲಿಸಲಿಲ್ಲಾ ಗರ್ವಿಗಳು, ಅವಿಧೇಯರು, ಪಾಪಿಗಳು. ಜೀವಾಧಾರವಾದ ನಿಮ್ಮಾ ವಿಧಿನಿಯಮಗಳನು ಮೀರಿದರು ಮೊಂಡುಬಿದ್ದು ನಿಮ್ಮ ನೊಗಕೆ ಕೊರಳೊಡ್ಡದೆ ಹೋದರು.


ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ಜಗವೇ ಕೇಳು. ಇದೋ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ಕೇಡನ್ನು ಬರಮಾಡುವೆನು. ಅವರ ಯೋಜನೆಗಳಿಗೆ ಅದೇ ತಕ್ಕ ಪ್ರತಿಫಲ.


“ಸರ್ವಶಕ್ತ ಸರ್ವೇಶ್ವರನಾದ ನಾನೇ ಈ ಇಸ್ರಯೇಲನ್ನೂ ಜುದೇಯವನ್ನೂ ನೆಟ್ಟಿ ಬೆಳೆಸಿದೆ. ಆದರೆ ಈಗ ‘ನಿನಗೆ ಕೇಡು,’ ಎಂದು ಶಪಿಸುತ್ತಿದ್ದೇನೆ. ಏಕೆಂದರೆ ಬಾಳನಿಗೆ ಧೂಪಾರತಿಯೆತ್ತಿ, ನನ್ನನ್ನು ಕೆಣಕಿ, ತಮಗೇ ಕೆಡುಕನ್ನು ಮಾಡಿಕೊಂಡಿದ್ದಾರೆ.


‘ಜುದೇಯದ ಅರಸರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನ ಸಂದೇಶವನ್ನು ಕೇಳಿರಿ. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ: ಈ ಸ್ಥಳದ ಮೇಲೆ ನಾನು ಕೇಡನ್ನು ಬರಮಾಡುವೆನು. ಅದರ ಸುದ್ದಿಯನ್ನು ಕೇಳುವವರ ಕಿವಿಗಳೂ ನಿಮಿರುವುವು.


ನೀನು ನೆಮ್ಮದಿಯಾಗಿದ್ದ ಕಾಲದಲ್ಲಿ ನಿನ್ನೊಡನೆ ಮಾತಾಡಿದೆ ಆದರೆ ನೀನು, “ಕೇಳಲೊಲ್ಲೆ” ಎಂದು ಹೇಳಿಬಿಟ್ಟೆ. ನನ್ನ ಮಾತಿಗೆ ಕಿವಿಗೊಡದಿರುವುದು ನಿನಗೆ ಬಾಲ್ಯದಿಂದಲೆ ವಾಡಿಕೆ !


ಅರಸನನ್ನೂ ಅವನ ಸಂತತಿ ಹಾಗೂ ಸೇವಕರನ್ನೂ ಅವರು ಮಾಡಿದ ಅಧರ್ಮಕ್ಕಾಗಿ ದಂಡಿಸುವೆನು. ನಾನು ಇವರನ್ನು, ಜೆರುಸಲೇಮಿನವರನ್ನು ಹಾಗೂ ಯೆಹೂದ್ಯರನ್ನು ‘ನಿಮಗೆ ದೊಡ್ಡ ಕೇಡಾಗಲಿದೆ’ ಎಂದು ಎಚ್ಚರಿಸಿದರೂ ಅವರು ಕೇಳಲಿಲ್ಲ. ಆದ್ದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’.”


ಆದಕಾರಣ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ : ಇಗೋ, ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ಬರಮಾಡುವೆನು. ಇವರು ನನಗೆ ಮೊರೆಯಿಟ್ಟರೂ ನಾನೂ ಕಿವಿಗೊಡೆನು.


ಇಸ್ರಯೇಲ್ ವಂಶವೆಲ್ಲವು ಹಾಗು ಜುದೇಯ ವಂಶವೆಲ್ಲವು ನನಗೆ ಪ್ರಜೆಯಾಗಿರಲಿ; ನನಗೆ ಕೀರ್ತಿ, ಗೌರವ ತರಲಿ, ನನಗೆ ಆಭರಣವಾಗಿರಲಿ ಎಂದುಕೊಂಡೆ. ನಡುಕ್ಟಟನ್ನು ಸೊಂಟಕ್ಕೆ ಬಿಗಿದುಕೊಳ್ಳುವಂತೆ ಇವರನ್ನು ಬಿಗಿದುಕೊಂಡಿದ್ದೆ. ಆದರೂ ಇವರು ನನಗೆ ಕಿವಿಗೊಡದೆಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.”


ಈಗ ನೀನು ಜುದೇಯದ ಹಾಗು ಜೆರುಸಲೇಮಿನ ಜನರಿಗೆ ಈ ಸಂದೇಶವನ್ನು ತಿಳಿಸು - ‘ಸರ್ವೇಶ್ವರ ಹೀಗೆನ್ನುತ್ತಾರೆ : ನಾನು ನಿಮಗೆ ವಿರುದ್ಧ ವಿಪತ್ತನ್ನು ಕಲ್ಪಿಸುತ್ತಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ದುರ್ಮಾರ್ಗವನ್ನು ಬಿಟ್ಟು ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


“ಆಮೋನನ ಮಗನೂ ಜುದೇಯದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೇ ವರ್ಷದಿಂದ ಈ ದಿನದವರೆಗೆ, ಅಂದರೆ ಕಳೆದ ಇಪ್ಪತ್ತು ಮೂರು ವರ್ಷಗಳಿಂದ ಸರ್ವೇಶ್ವರ ಸ್ವಾಮಿ ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ಸರ್ವೇಶ್ವರ ತಮ್ಮ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಿದ್ದರು. ಆದರೂ ನೀವು ಗಮನಿಸಲಿಲ್ಲ; ಕಿವಿಗೊಡಲೂ ಇಲ್ಲ.


ಆದರೆ ಸರ್ವೇಶ್ವರ ಸ್ವಾಮಿಯೇ ಹೇಳುವಂತೆ ನೀವು ಅವರಿಗೆ ಕಿವಿಗೊಡದೆ ನಿಮ್ಮ ಕೈಕೃತಿಗಳಾದ ವಿಗ್ರಹಗಳಿಂದ ಅವರನ್ನು ಕೆಣಕಿ ನಿಮಗೇ ಕೇಡನ್ನು ತಂದುಕೊಂಡಿದ್ದೀರಿ.


“ಆದುದರಿಂದ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಈ ನುಡಿಯನ್ನು ಕೇಳಿರಿ:


ಸ್ವಾಮಿ ಯಕೋಬಿನ ನಿವಾಸಿಗಳನ್ನು ನಾಶಪಡಿಸಿಹನು, ರೌದ್ರದಿಂದ ಯೆಹೂದ ಕೋಟೆಗಳನ್ನು ನೆಲಸಮವಾಗಿಸಿಹನು, ರಾಜ್ಯವನ್ನೂ ಅದರ ಪಾಲಕರನ್ನೂ ನೀಚಸ್ಥಿತಿಗೆ ಇಳಿಸಿಹನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು