Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:10 - ಕನ್ನಡ ಸತ್ಯವೇದವು C.L. Bible (BSI)

10 “ಸೈಪ್ರಸ್ ದ್ವೀಪಗಳಿಗೆ ಹೋಗಿ ನೋಡಿ; ಕೇದಾರ್ ನಾಡಿಗೆ ಕಳಿಸಿ ವಿಚಾರಮಾಡಿ, ಇಂಥ ಕಾರ್ಯ ಎಲ್ಲಿಯಾದರು ನಡೆಯಿತೆ ಎಂದು ಚೆನ್ನಾಗಿ ಆಲೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ; ಇಂಥಾ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸಮುದ್ರದ ಆಚೆಗಿದ್ದ ಕಿತ್ತೀಮ್ ದಿಬಪಗಳಿಗೆ ಹೋಗಿ ನೋಡಿರಿ. ಸೂಕ್ಷ್ಮವಾಗಿ ಪರಿಶೀಲಿಸಲು ಯಾರನ್ನಾದರೂ ಕೇದಾರಿಗೆ ಕಳುಹಿಸಿರಿ. ಯಾರಾದರೂ ಎಂದಾದರೂ ಇಂಥ ಕೆಲಸ ಮಾಡಿರುವರೇ, ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ. ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳಿದುಕೊಳ್ಳಿರಿ. ಅಂಥದ್ದು ಉಂಟೋ ಎಂದು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:10
21 ತಿಳಿವುಗಳ ಹೋಲಿಕೆ  

ಅಯ್ಯೋ ತಂಗಬೇಕಲ್ಲಾ ಮೇಷೆಕಿನವರ ಮಧ್ಯದಲಿ II ಅಕಟಾ ಇರಬೇಕಲ್ಲಾ ಕೇದಾರಿನ ಪಾಳೆಯಗಳಲಿ II


ಅನ್ಯಜನರಲ್ಲಿ ಕೂಡ ಇಲ್ಲದಂಥ ದುರ್ನಡತೆ ನಿಮ್ಮಲ್ಲಿದೆಯೆಂಬುದಾಗಿ ವರದಿ ಬಂದಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನಂತೆ.


ಅವನಿಗೆ ವಿರುದ್ಧವಾಗಿ ರೋಮಿನ ಹಡಗುಗಳು ಬರಲು ಅವನು ಎದೆಗುಂದಿ ಹಿಂದಿರುಗುವನು. ಪವಿತ್ರ ಒಡಂಬಡಿಕೆಯ ವಿರುದ್ಧ ಮತ್ಸರಗೊಂಡು ಸಾಧ್ಯವಾದಷ್ಟೂ ಹಾನಿಮಾಡುವನು. ಸ್ವದೇಶಕ್ಕೆ ಹಿಂದಿರುಗಿ ಪವಿತ್ರ ಒಡಂಬಡಿಕೆಯನ್ನು ತೊರೆದವರಿಗೆ ಆದರ ತೋರುವನು.


ನಿನ್ನ ಹುಟ್ಟುಗಳು ರೂಪಿಸಲಾಗಿವೆ ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಮೇಲ್ಮಾಳಿಗೆ ಕಟ್ಟಲಾಗಿದೆ ಕಿತ್ತೀಮ್ ದ್ವೀಪದ ತಿಲಕ ಹಲಗೆಯಿಂದ, ಕೆತ್ತಲಾಗಿದೆ ದಂತದಿಂದ.


ಸರ್ವೇಶ್ವರ ನನಗೆ ಹೀಗೆಂದರು : “ಗುಲಾಮಗಿರಿಯ ವಾಯಿದೆಯ ಪ್ರಕಾರ, ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವ ಗತಿಸಿಹೋಗುವುದು.


ಕೆಹಾತನಿಗೆ ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಎಂಬ ನಾಲ್ಕು ಮಂದಿ ಮಕ್ಕಳಿದ್ದರು.


ದಾವೀದನು ಹಣ್ಣುಹಣ್ಣು ಮುದುಕನಾದಾಗ ತನ್ನ ಮಗ ಸೊಲೊಮೋನನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದನು.


ಎಲೀಷ, ಸ್ಪೇನ್, ಸೈಪ್ರಸ್, ದೋದಾನೀಮ್ ಎಂಬ ಸ್ಥಳಗಳವರು ಯಾವಾನನ ಮಕ್ಕಳು.


ಅವುಗಳನ್ನು ಕಂಡವರೆಲ್ಲರು, “ಇಸ್ರಯೇಲರು ಈಜಿಪ್ಟನ್ನು ಬಿಟ್ಟು ಬಂದ ದಿವಸ ಮೊದಲ್ಗೊಂಡು ಈ ದಿವಸದವರೆಗೆ ಇಂಥ ಕೃತ್ಯ ನಡೆಯಲೂ ಇಲ್ಲ, ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಗಂಭೀರವಾಗಿ ವಿಚಾರಿಸತಕ್ಕದ್ದು,” ಎಂದುಕೊಂಡರು.


‘ಸೈಪ್ರಸ್’ ಎಂಬ ಸ್ಥಳದಿಂದ ಹಡಗುಗಳಲ್ಲಿ ಬರುವರು ಜನರು ಸೋಲಿಸುವರವರು ಅಶ್ಯೂರ್ಯರನ್ನೂ ಏಬೆರ್ ಜರನ್ನೂ; ಅವರಿಗೂ ನಾಶವುಂಟಾಗುವುದು.”


ಇಷ್ಮಾಯೇಲನ ಮಕ್ಕಳಿಗೂ ಅವರಿಂದ ಹುಟ್ಟಿದ ಕುಲಗಳಿಗೂ ಇಡಲಾಗಿದ್ದ ಹೆಸರುಗಳು ಇವು - ಮೊದಲು ಹುಟ್ಟಿದವನು ನೆಬಾಯೋತ್, ಆಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್,


ಆಗ ಅವರಿಗೆ, ‘ಈ ನಾಡಿನವರು ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಬರಮಾಡಿದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಸರ್ವೇಶ್ವರ ಈ ಎಲ್ಲಾ ಆಪತ್ತು-ವಿಪತ್ತುಗಳನ್ನು ಬರಮಾಡಿದ್ದಾರೆ’ ಎಂಬ ಉತ್ತರಸಿಕ್ಕುವುದು,” ಎಂದರು.


“ಹಿಂಸೆಗೆ ಈಡಾದ ಕನ್ಯೆಯಂತೆ ಇರುವ ಸಿದೋನ್ ನಗರವೇ, ಇನ್ನು ಮೇಲೆ ನಿನಗಿರದು ಸಂತೃಪ್ತಿ: ಸಮುದ್ರ ದಾಟಿ ಸೈಪ್ರಸ್ಸಿಗೆ ಹಾದುಹೋಗು, ಅಲ್ಲಿಯೂ ನಿನಗೆ ದೊರಕದು ವಿಶ್ರಾಂತಿ,” ಎಂದು ಹೇಳಿದ್ದಾರೆ.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಸೋಲಿಸಿದ ಕೇದಾರನ್ನು ಮತ್ತು ಹಾಜೋರಿನ ರಾಷ್ಟ್ರಗಳನ್ನು ಕುರಿತ ಹೇಳಿಕೆ: “ಏಳಿ, ಕೇದಾರಿಗೆ ಹೋಗಿ, ಪೂರ್ವ ದೇಶದವರನ್ನು ಹಾಳುಮಾಡಿ,” ಎಂದು ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಆಜ್ಞೆಮಾಡಿದ್ದಾರೆ.


ಹೀಗಿರಲು ಸರ್ವೇಶ್ವರ ಸ್ವಾಮಿಯಾದ ನಾನು ಹೇಳುವುದಿದು: ‘ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಗೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.


ಆಮೇಲೆ ಅವನು ಕರಾವಳಿಯ ನಾಡುಗಳ ಕಡೆಗೆ ಕಣ್ಣಿಟ್ಟು ಅಲ್ಲಿಯ ಅನೇಕ ನಾಡುಗಳನ್ನು ಆಕ್ರಮಿಸುವನು. ಆದರೆ ದಳವಾಯಿ ಒಬ್ಬನು ಅವನ ಅಟ್ಟಹಾಸವನ್ನು ತಡೆಗಟ್ಟುವನು. ಅವನು ಮಾಡುವ ಹಾನಿ ಅವನಿಗೇ ತಗಲುವಂತೆ ಮಾಡುವನು.


ಟೈರ್ ನಗರವನ್ನು ಕುರಿತ ದೈವೋಕ್ತಿ : “ಗೋಳಾಡಿರಿ ತಾರ್ಷಿಷಿನ ನಾವಿಕರೆಲ್ಲ, ಹಾಳಾಗಿವೆ ನಿಮ್ಮ ಬಂದರುಗಳೆಲ್ಲ; ಹಡಗುಗಳಿಗೆ ರೇವಿಲ್ಲ, ನೆಲೆಯಿಲ್ಲ, ಸೈಪ್ರಸ್ಸಿನಿಂದ ಬಂದ ನಾವಿಕರಿಂದ ಈ ಸುದ್ದಿ ನಿಮಗೆ ತಿಳಿಯುವುದು.”


ನೀನು ಪುಣ್ಯಕ್ಷೇತ್ರಗಳನ್ನು ನಿರ್ಮಿಸಿ, ನಿನ್ನ ನಾನಾ ಶೈಲಿಯ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ, ಹಿಂದೆಂದೂ ನಡೆಯದಂತಹ, ಮುಂದೆ ಎಂದೂ ನಡೆಯಬಾರದಂತಹ ವ್ಯಭಿಚಾರವನ್ನು ನಡೆಸಿದೆ.


“ಅರಾಬ್ಯರೂ, ಕೇದಾರಿನ ಪ್ರಮುಖರೂ ನಿನ್ನ ಕೈಕೆಳಗಣ ವರ್ತಕರು: ಕುರಿ, ಟಗರು, ಹೋತಗಳನ್ನು ನಿನಗಾಗಿ ಸಾಗಿಸಿಕೊಂಡು ಬರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು