Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:11 - ಕನ್ನಡ ಸತ್ಯವೇದವು C.L. Bible (BSI)

11 ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರು ಬದಲಾಯಿಸಿಕೊಂಡಿತೋ? ಆದರೆ ನನ್ನ ಜನ, ತಮ್ಮ ಮಹಿಮೆಯಾದ ನನ್ನನ್ನು ತೊರೆದು ನಿರರ್ಥಕವಾದುವುಗಳನ್ನು ಆರಿಸಿಕೊಂಡಿದ್ದಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನಗೆ ಬದಲಾಗಿ ಕೆಲಸಕ್ಕೆ ಬಾರದ್ದನ್ನು ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾವ ಜನಾಂಗವಾದರೂ ಎಂದಾದರೂ ತಮ್ಮ ಹಳೆಯ ದೇವರುಗಳನ್ನು ಬದಲಾಯಿಸಿ ಹೊಸ ದೇವರುಗಳನ್ನು ಪಡೆಯಿತೇ? ಇಲ್ಲ. (ಅವರ ದೇವರುಗಳು ನಿಜವಾದ ದೇವರುಗಳೇ ಅಲ್ಲ.) ಆದರೆ ನನ್ನ ಜನರು ತಮ್ಮ ಮಹಿಮಾಶಾಲಿಯಾದ ದೇವರನ್ನು ಅಪ್ರಯೋಜಕವಾದ ವಿಗ್ರಹಗಳೊಂದಿಗೆ ಬದಲಾಯಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಜನಾಂಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದರೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವಾದ ದೇವರನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:11
23 ತಿಳಿವುಗಳ ಹೋಲಿಕೆ  

ಅಮರದೇವರನ್ನು ಆರಾಧಿಸುವುದನ್ನು ಬಿಟ್ಟು ಅಳಿದುಹೋಗುವಂಥ ನರಮಾನವರ, ಪ್ರಾಣಿಪಕ್ಷಿಗಳ, ಸರ್ಪಾದಿಗಳ ವಿಗ್ರಹಗಳನ್ನು ಮಾಡಿ ಆರಾಧಿಸತೊಡಗಿದರು.


ಅವರ ದೇವರುಗಳನ್ನೂ ಬೆಂಕಿಗೆ ಹಾಕಿದ್ದು ನಿಜ. ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳ ಬೊಂಬೆಗಳಷ್ಟೆ, ಆದುದರಿಂದಲೇ ಅವು ಅವರಿಂದ ಹಾಳಾದವು.


ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೆ? ಕಲ್ಪಿಸಿಕೊಂಡರೆ ಅವು ದೇವರುಗಳೇ ಅಲ್ಲ,’ ಎಂದು ನಿವೇದಿಸುವುವು.”


ಈಪರಿ ತೊರೆದುಬಿಟ್ಟರು ತಮ್ಮ ಮಹಿಮಾ ದೇವರನು I ಆರಿಸಕೊಂಡರು ಹುಲ್ಲು ತಿನ್ನುವ ಬಸವನ ವಿಗ್ರಹವನು II


ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ನಾಮಸ್ಮರಣೆಮಾಡಿ, ಅದರಂತೆ ನಡೆದುಕೊಳ್ಳುತ್ತಾರೆ. ನಾವಾದರೋ ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಸ್ಮರಿಸಿ ಅದಕ್ಕನುಗುಣವಾಗಿ ಸದಾಕಾಲವೂ ನಡೆದುಕೊಳ್ಳುವೆವು.


ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.


ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’


“ನಿಮ್ಮ ಪಿತೃಗಳು ನನ್ನಲ್ಲಿ ಯಾವ ಕೊರತೆಯನ್ನು ಕಂಡು ನನ್ನಿಂದ ದೂರವಾದರು? ಅವರು ವ್ಯರ್ಥಾಚಾರಗಳನ್ನು ಅನುಸರಿಸುತ್ತಾ ತಾವೇ ವ್ಯರ್ಥವಾಗಿಬಿಟ್ಟರು !


ಅವರ ವಿಗ್ರಹ ಬರೀ ಬೆಳ್ಳಿ ಬಂಗಾರ I ಅವು ಮಾನವನ ಕೈ ಕೆಲಸಗಳು ಮಾತ್ರ II


ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II


ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.


ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ.


ಹಿಂದೆ ನೀವು ದೇವರನ್ನು ಅರಿಯದೆ ಇದ್ದಿರಿ. ದೇವರಲ್ಲದವುಗಳಿಗೆ ಅಧೀನರಾಗಿದ್ದೀರಿ.


ದೇವರ ಮಂಜೂಷ ಶತ್ರುವಶವಾದುದರಿಂದಲು ಹಾಗೂ ಮಾವನೂ ಗಂಡನೂ ಮೃತರಾಗಿದ್ದರಿಂದಲು, “ದೈವಮಹಿಮೆಯು ಇಸ್ರಯೇಲರನ್ನು ಬಿಟ್ಟುಹೋಯಿತು,” ಎಂದು ಹೇಳಿ ಆ ಕೂಸಿಗೆ ‘ಈಕಾಬೋದ್’ ಎಂದು ಹೆಸರು ಇಟ್ಟಳು.


ನೀವು ಸರ್ವೇಶ್ವರನ ಯಾಜಕರಾದ ಆರೋನನ ಸಂತಾನದವರನ್ನೂ ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗಾಗಿ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ!


ಸರ್ವೇಶ್ವರ ಸ್ವಾಮಿ ಹೀಗೆಂದು ಪ್ರಶ್ನಿಸುತ್ತಾರೆ; “ಎಲೈ ಜೆರುಸಲೇಮ್, ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ತೊರೆದುಬಿಟ್ಟಿದ್ದಾರೆ; ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆತುಂಬ ಊಟಕೊಟ್ಟೆ; ಅವರೋ ವ್ಯಭಿಚಾರ ಮಾಡಿದ್ದಾರೆ, ವೇಶ್ಯೆಯರ ಮನೆಗಳಲ್ಲಿ ಗುಂಪು ಸೇರಿದ್ದಾರೆ !


ಸರ್ವೇಶ್ವರ ಇಂತೆಂದರು : “ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆಂದು ಅನ್ಯಜನಾಂಗಗಳಲ್ಲೆ ವಿಚಾರಿಸಿರಿ. ಇಸ್ರಯೇಲೆಂಬ ಯುವತಿ ಕೇವಲ ಅಸಹ್ಯಕಾರ್ಯವನ್ನೆ ಎಸಗಿದ್ದಾಳೆ.


ಹೀಗಿರಲು ಸರ್ವೇಶ್ವರ ಸ್ವಾಮಿಯಾದ ನಾನು ಹೇಳುವುದಿದು: ‘ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಗೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.


ಇಸ್ರಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದ್ದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.


ರೇಗಿಸಿದರಾತನನು ಅನ್ಯದೇವರುಗಳನು ಪೂಜಿಸುತ ಸಿಟ್ಟಿಗೇರಿಸಿದರು ನಿಷಿದ್ಧಾಚಾರಗಳನು ನಡೆಸುತ.


‘ರೇಗಿಸಿದರೆನ್ನನು ದೇವರಲ್ಲದವುಗಳ ಮೂಲಕ, ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ. ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ, ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದಾ ಜನರ ಮುಖಾಂತರ.


ಇದಲ್ಲದೆ, ಅವರು ನಿನಗೆ, ‘ಸೊಲೊಮೋನನೂ ಅವನ ಮನೆಯವರೂ ನನ್ನನ್ನು ಬಿಟ್ಟು ಸಿದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ಕೆಮೋಷ್, ಅಮ್ಮೋನಿಯರ ದೇವತೆಯಾದ ಮಿಲ್ಕೋಮ್ ಇವುಗಳನ್ನು ಆರಾಧಿಸುತ್ತಿದ್ದಾರೆ. ಅವರ ತಂದೆ ದಾವೀದನು ನನ್ನ ನಿಯಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆಹೋದದ್ದೂ ಇದಕ್ಕೆ ಕಾರಣ.


ಆದರೆ ಸರ್ವೇಶ್ವರ ಸ್ವಾಮಿಯ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರಿಯದ ಅರಸನ ಆ ಸೇವಕರನ್ನು ಭೇಟಿಯಾಗು. ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು