Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:15 - ಕನ್ನಡ ಸತ್ಯವೇದವು C.L. Bible (BSI)

15 ಶತ್ರುಗಳು ಯುವ ಸಿಂಹಗಳಂತೆ ಅವನಿಗೆ ವಿರುದ್ಧ ಗರ್ಜಿಸಿ ಆರ್ಭಟಿಸುತ್ತಿವೆ; ಅವನ ನಾಡನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಏಕೆ ಸೂರೆಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳು ಮಾಡಿವೆ, ಅವನ ಊರುಗಳು ಸುಟ್ಟು ನಿರ್ನಿವಾಸಿಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪ್ರಾಯದಸಿಂಹಗಳು (ವೈರಿಗಳು) ಇಸ್ರೇಲ್ ಜನಾಂಗದ ಮೇಲೆ ಗರ್ಜಿಸುತ್ತಿವೆ. ಆ ಸಿಂಹಗಳು ಆರ್ಭಟಿಸುತ್ತಿವೆ; ಇಸ್ರೇಲರ ನಾಡನ್ನು ನಾಶಮಾಡಿವೆ. ಇಸ್ರೇಲ್‌ನ ನಗರಗಳು ಸುಡಲ್ಪಟ್ಟಿವೆ; ಅವುಗಳು ನಿರ್ಜನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಗರ್ಜಿಸಿ, ಅಬ್ಬರಿಸುತ್ತವೆ. ಅವನ ದೇಶವನ್ನು ಹಾಳು ಮಾಡುತ್ತವೆ. ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:15
35 ತಿಳಿವುಗಳ ಹೋಲಿಕೆ  

ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.


“ಇಸ್ರಯೇಲ್ ಚದರಿಹೋದ ಮಂದೆ. ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ. ಮೊಟ್ಟಮೊದಲು ಅಸ್ಸೀರಿಯಾದ ಅರಸನು ಅದನ್ನು ಕಬಳಿಸಿದನು. ಕಟ್ಟಕಡೆಗೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”


ಗರ್ಜಿಸುತಿಹರು ಸೈನಿಕರು ಸಿಂಹದಂತೆ, ಆರ್ಭಟಿಸುತಿಹರವರು ಪ್ರಾಯದ ಸಿಂಹಗಳಂತೆ, ಗುರುಗುಟ್ಟುತಿಹರು ಬೇಟೆ ಹಿಡಿದ ಕೇಸರಿಯಂತೆ. ಅದನ್ನೆತ್ತಿಕೊಂಡು ಓಡುತಿಹರು, ಬಿಡಿಸುವರಾರೂ ಇಲ್ಲದಂತೆ.


ನಿಮ್ಮ ನಾಡು ಹಾಳುಬಿದ್ದಿದೆ: ನಿಮ್ಮ ಪಟ್ಟಣಗಳು ಸುಟ್ಟು ಭಸ್ಮವಾಗಿವೆ. ನಿಮ್ಮ ಕಣ್ಮುಂದೆಯೆ ನಿಮ್ಮ ಭೂಮಿಯನ್ನು ಅನ್ಯಜನರು ಕಬಳಿಸುತ್ತಿದ್ದಾರೆ. ಅನ್ಯದೇಶಗಳು ನಾಶವಾದಂತೆಯೇ ನಿಮ್ಮ ನಾಡು ಹಾಳಾಗಿದೆ.


ಸರ್ವೇಶ್ವರ ಇಂತೆನ್ನುತ್ತಾರೆ: “ನಾನು ರಾಷ್ಟ್ರಗಳನ್ನು ಧ್ವಂಸಮಾಡಿದ್ದೇನೆ. ಅವುಗಳ ಕೋಟೆಕೊತ್ತಲಗಳು ಪಾಳುಬಿದ್ದಿವೆ. ಅವುಗಳ ಹಾದಿಬೀದಿಗಳನ್ನು ನಿರ್ಜನವಾಗಿಸಿದ್ದೇನೆ. ಯಾರೂ ಅವುಗಳಲ್ಲಿ ಹಾದುಹೋಗುವಂತಿಲ್ಲ. ಅವರ ಪಟ್ಟಣಗಳು ನಾಶವಾಗಿವೆ; ನಿರ್ನಿವಾಸವಾಗಿ ಶೂನ್ಯವಾಗಿವೆ.


ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನರೇ, ನಿಮಗೆ ಧಿಕ್ಕಾರ! ಫಿಲಿಷ್ಟಿಯರ ನಾಡಾದ ಕಾನಾನೇ, ನಿನಗೆ ಧಿಕ್ಕಾರ! ಸರ್ವೇಶ್ವರನ ನ್ಯಾಯತೀರ್ಪು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ಯಾರೂ ಉಳಿಯದಂತೆ ಅಳಿಸಿಬಿಡುವರು.


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ಮೃಗರಾಜನ ಗವಿಯೆಲ್ಲಿ? ಯುವಸಿಂಹಗಳ ಹಕ್ಕೆಯೆಲ್ಲಿ? ಸಿಂಹ ಸಿಂಹಿಣಿಗಳು, ಅವುಗಳ ಮರಿಗಳು ಹೆದರದೆ ತಿರುಗಾಡುತ್ತಿದ್ದ ಎಡೆಯೆಲ್ಲಿ?


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಸಿಂಹದ ಬಾಯಿಗೆ ಸಿಕ್ಕಿದ ಕುರಿಯ ಅಂಗಗಳಲ್ಲಿ ಕಿವಿಕಾಲು ಮಾತ್ರ ಕುರುಬನಿಗೆ ದಕ್ಕೀತು. ಅಂತೆಯೇ ಸಮಾರ್ಯದ ಸುಖಾಸನಗಳಲ್ಲೂ ಸುಪ್ಪತ್ತಿಗೆ ಮೇಲೂ ಹಾಯಾಗಿ ಒರಗಿಕೊಂಡಿರುವ ಇಸ್ರಯೇಲರಲ್ಲಿ ಕೆಲವೇ ಕೆಲವರು ಮಾತ್ರ ಉಳಿಯುವರು.


ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?”


ಬೇಟೆ ಕಂಡಾಗಲ್ಲದೆ ಸಿಂಹವು ಕಾಡಿನಲ್ಲಿ ಗರ್ಜಿಸುವುದುಂಟೆ? ಏನನ್ನೂ ಹಿಡಿಯದೆ ಯುವಸಿಂಹವು ಗುಹೆಯಲ್ಲೆ ಗುರುಗುಟ್ಟುವುದುಂಟೆ?


“ಶತ್ರುಗಳ ಕಡೆಗೆ ಸಿಂಹದಂತೆ ಗರ್ಜಿಸುವ ಸ್ವಾಮಿಯನ್ನು ಆ ಜನರು ಹಿಂಬಾಲಿಸುತ್ತಾರೆ. ಆತ ಆರ್ಭಟಿಸಲು ಅವರ ಮಕ್ಕಳು ನಡುನಡುಗುತ್ತಾ ಬರುತ್ತಾರೆ.


ಎಫ್ರಯಿಮಿಗೆ ನಾನು ಸಿಂಹ; ಯೆಹೂದ್ಯಕುಲಕ್ಕೆ ಪ್ರಾಯದ ಸಿಂಹ; ಅದನ್ನು ಸೀಳಿಬಿಡುವೆನು; ಎಳೆದುಕೊಂಡು ಹೋಗುವೆನು; ಯಾರೂ ಅದನ್ನು ನನ್ನಿಂದ ಬಿಡಿಸಿಕೊಳ್ಳಲಾರರು.


ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ ಸುತ್ತಲಿನ ಜನಾಂಗಗಳ ನಿಂದೆಗೆ ಗುರಿಮಾಡುವೆನು.


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


ಸರ್ವೇಶ್ವರನಾದ ನನ್ನ ಗುರಿಯನ್ನು ಗಮನಿಸಿರಿ - ನಾನು ಅಪ್ಪಣೆಕೊಟ್ಟು, ಶತ್ರುಗಳು ಈ ನಗರಕ್ಕೆ ಮತ್ತೆ ಬರುವಂತೆ ಮಾಡುವೆನು. ಅವರು ಇದರ ವಿರುದ್ಧ ಯುದ್ಧಮಾಡಿ, ಇದನ್ನು ಆಕ್ರಮಿಸಿಕೊಂಡು, ಬೆಂಕಿಯಿಂದ ಸುಟ್ಟುಹಾಕುವರು. ನಾನು ಜುದೇಯದ ನಗರಗಳನ್ನು ನಿರ್ಜನವಾದ ಪಾಳುಭೂಮಿಯನ್ನಾಗಿಸುವೆನು.


ಸರ್ವೇಶ್ವರ ಹೀಗೆನ್ನುತ್ತಾರೆ: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಪಾಳುಬಿದ್ದ ಸ್ಥಳವೆಂದು ನೀವು ಕರೆಯುವ ಈ ಸ್ಥಳದಲ್ಲೇ, ಅಂದರೆ ಜನಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಜುದೇಯದ ಊರುಗಳಲ್ಲೇ, ಜೆರುಸಲೇಮಿನ ಬೀದಿಗಳಲ್ಲೇ


“ನಿನಗೆ ಖಂಡಿತವಾಗಿ ಮರಣದಂಡನೆಯಾಗಬೇಕು. ನೀನು ‘ಈ ದೇವಾಲಯಕ್ಕೆ ಶಿಲೋವಿನ ಗತಿ ಬರುವುದು, ಈ ನಗರ ಪಾಳುಬಿದ್ದು ನಿರ್ಜನ ಪ್ರದೇಶವಾಗುವುದು,’ ಎಂದು ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಿದ್ದೇಕೆ?” ಎಂದು ಕೂಗಾಡಿದರು. ಆಲಯದಲ್ಲಿದ್ದ ಯೆರೆಮೀಯನನ್ನು ಜನರ ಗುಂಪು ಮುತ್ತಿಕೊಂಡಿತು.


“(ಯೆರೆಮೀಯನೇ), ನೀನು ಪ್ರವಾದಿಸುತ್ತಾ ಅವರಿಗೆ ಈ ಮಾತುಗಳನ್ನು ಹೇಳು: ‘ಸರ್ವೇಶ್ವರ ಗರ್ಜಿಸುವನು ಮೇಲಣಲೋಕದಿಂದ ದನಿಗೈವನು ತನ್ನ ಘನ ನಿವಾಸದಿಂದ ಗಟ್ಟಿಯಾಗಿ ಕೂಗುವನು ತನ್ನ ಹುಲ್ಲುಗಾವಲಿನ ಮಂದೆಯ ವಿರುದ್ಧ ಕೂಗಾಡುವನು ದ್ರಾಕ್ಷೆಯ ಹಣ್ಣನ್ನು ತುಳಿಯುವವರಂತೆ ಭೂನಿವಾಸಿಗಳೆಲ್ಲರು ಭಯಭ್ರಾಂತರಾಗುವಂತೆ.


ಆದಕಾರಣ ಅಡವಿಯ ಸಿಂಹ ಅವರನ್ನು ಕೊಲ್ಲುವುದು ಕಾಡಿನ ತೋಳ ಕೊಳ್ಳೆಹೊಡೆಯುವುದು ಚಿರತೆ ಅವರ ಪಟ್ಟಣಗಳಿಗೆ ಹೊಂಚುಹಾಕುವುದು ಅಲ್ಲಿಂದ ಹೊರಬರುವ ಪ್ರತಿಯೊಬ್ಬನನ್ನು ಸೀಳುವುದು. ಅವರ ಅಪರಾಧಗಳೋ ಬಹಳ, ಅವರ ದ್ರೋಹಗಳೋ ಅಪಾರ !


ಇಗೋ, ಸರ್ವೇಶ್ವರ ಬರಿದುಮಾಡುವರು ಧರೆಯನು, ನಿರ್ಜನ ಪ್ರದೇಶವಾಗಿಸುವರು ವಿರೂಪಗೊಳಿಸಿ ಅದನು, ಚದರಿಸುವರು ಅದರ ನಿವಾಸಿಗಳನು.


ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ :


ಸೇನಾಧೀಶ್ವರಸ್ವಾಮಿಯಿಂದ ನಾನು ಕಿವಿಯಾರೆ ಕೇಳಿದಂತೆ ಹಲವಾರು ಮಂದಿರಗಳು ಬರಿದಾಗುವುವು. ಸುಂದರ ಹಾಗೂ ಸವಿಸ್ತಾರವಾದ ಭವನಗಳು ನಿವಾಸಿಗಳಿಲ್ಲದೆ ಪಾಳುಬೀಳುವುವು.


ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ಸಿಂಹಗರ್ಜನೆ, ಭೀಕರ ಸಿಂಹದಾರ್ಭಟಗಳು ಅಡಗುವವು ಯುವಸಿಂಹದ ಕೋರೆಗಳು ಮುರಿದುಹೋಗುವವು.


ಸಂಸೋನನು ತನ್ನ ತಂದೆತಾಯಿಗಳ ಸಮೇತ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷಿತೋಟಗಳ ಬಳಿಗೆ ಬಂದನು. ಅಲ್ಲಿ ಒಂದು ಪ್ರಾಯದ ಸಿಂಹ ಗರ್ಜಿಸುತ್ತಾ ಅವನೆದುರಿಗೆ ಬಂದಿತು.


ಬಾಬಿಲೋನಿನವರು ಯುವಸಿಂಹಗಳಂತೆ ಒಟ್ಟಿಗೆ ಗರ್ಜಿಸುವರು, ಸಿಂಹದ ಮರಿಗಳಂತೆ ಗುರುಗುಟ್ಟುವರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ : “ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು, ಹಾಳಾದ ನೀವು, ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಕೊಚ್ಚುವವರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.


ಆಹಾ! ಕೇಳಿಬರುತ್ತಿದೆ ಕುರುಬರ ಗೋಳಾಟ ಬರಡಾಗಿದೆ ಅವರ ಹುಲ್ಲುಗಾವಲ ನೋಟ ಕೇಳಿರಿ, ಇಗೋ, ಯುವಸಿಂಹಗಳ ಆಕ್ರಂದನ ಏಕೆನೆ ಪಾಳುಬಿದ್ದಿದೆ ಜೋರ್ಡನಿನ ದಟ್ಟವನ!


ಜೆರುಸಲೇಮ್, ಎಚ್ಚರಿಕೆಯಿಂದ ನಡೆದುಕೊ. ಇಲ್ಲವಾದರೆ ನಾನು ನಿನ್ನನ್ನು ಅಗಲಿಬಿಡುವೆನು. ನಿನ್ನನ್ನು ಪಾಳುಬಿದ್ದ ನಿರ್ಜನ ಪ್ರದೇಶವಾಗಿಸುವೆನು.”


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


ಇದೋ ಸುದ್ದಿ, ಕೇಳಿಬರುತ್ತಿದೆ ಸುದ್ದಿ ! ದೊಡ್ಡ ಕೋಲಾಹಲವೆದ್ದಿದೆ ಉತ್ತರ ನಾಡಿನಲ್ಲಿ : ‘ಅದನ್ನು ನರಿಗಳ ಬೀಡಾಗಿಸಿರಿ ಜುದೇಯದ ನಗರಗಳನ್ನು ನಾಶಮಾಡಿ.’


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು