Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:2 - ಕನ್ನಡ ಸತ್ಯವೇದವು C.L. Bible (BSI)

2 “ನೀನು ಹೋಗಿ ಜೆರುಸಲೇಮ್ ನಗರಕ್ಕೇ ಕೇಳಿಸುವಂತೆ ಈ ಸಂದೇಶವನ್ನು ಸಾರು : ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವ ವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆಯಿಲ್ಲದ ಅರಣ್ಯಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ; ಇದು ನಿನ್ನ ಹಿತಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಹೋಗಿ ಯೆರೂಸಲೇವಿುನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ನೀನು ಯೌವನದಲ್ಲಿ [ನನ್ನ ಮೇಲೆ] ಇಟ್ಟಿದ್ದ ಪ್ರೀತಿಯನ್ನೂ ವಿವಾಹ ಕಾಲದ ನಿನ್ನ ಪ್ರೇಮವನ್ನೂ ಬೀಜಬಿತ್ತಿಯೇ ಇಲ್ಲದ ಅರಣ್ಯದಲ್ಲಿ ನೀನು ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆರೆಮೀಯನೇ, ಹೋಗಿ ಜೆರುಸಲೇಮಿನ ಜನರೊಂದಿಗೆ ಮಾತನಾಡು, ಅವರಿಗೆ ಹೀಗೆ ಹೇಳು: “ಯೆಹೋವನು ಹೀಗೆನ್ನುತ್ತಾನೆ: ‘ನೀವು ಯುವ ರಾಷ್ಟ್ರವಾಗಿದ್ದಾಗ ನನಗೆ ನಂಬಿಗಸ್ತರಾಗಿದ್ದಿರಿ; ಯುವತಿಯಾದ ಮದುಮಗಳಂತೆ ನನ್ನನ್ನು ಹಿಂಬಾಲಿಸಿದಿರಿ. ಎಂದೂ ಬೇಸಾಯಕ್ಕೆ ಬಳಸದ ಭೂಮಿಯಲ್ಲಿಯೂ ಮರಳುಗಾಡಿನಲ್ಲಿಯೂ ನನ್ನನ್ನು ಹಿಂಬಾಲಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:2
39 ತಿಳಿವುಗಳ ಹೋಲಿಕೆ  

ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನಿನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.


“ನಾನು ಪುನಃ ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದೆ; ಆಗ ನಾನು ನನ್ನ ಹೊದಿಕೆಯ ಸೆರಗನ್ನು ನಿನಗೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡೆ. ಆದ್ದರಿಂದ ನೀನು ನನ್ನವಳಾದೆ; ಇದು ಸರ್ವೇಶ್ವರನಾದ ದೇವರ ನುಡಿ.


ಸರ್ವೇಶ್ವರ ನನಗೆ : “ಜುದೇಯದ ನಗರಗಳಲ್ಲೂ ಜೆರುಸಲೇಮಿನ ಹಾದಿಬೀದಿಗಳಲ್ಲೂ ಈ ಸಮಾಚಾರವನ್ನು ಹರಡು - ಈ ಒಡಂಬಡಿಕೆಯ ವಚನಗಳನ್ನು ಕೇಳಿ ಅದರಂತೆ ನಡೆದುಕೊಳ್ಳಿರಿ.


“ನೀನು ನನ್ನ ಆಲಯದ ಬಾಗಿಲಲ್ಲಿ ನಿಂತು ಈ ವಾಕ್ಯವನ್ನು ಸಾರು - ‘ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳಲು ಈ ದ್ವಾರಗಳನ್ನು ಪ್ರವೇಶಿಸುವ ಎಲ್ಲ ಯೆಹೂದ್ಯರೇ, ಸರ್ವೇಶ್ವರನ ನುಡಿಯನ್ನು ಕೇಳಿ;


“ನೀವು ಕೈಹಾಕಿದ ಎಲ್ಲ ಕೆಲಸಗಳನ್ನೂ ನಿಮ್ಮ ದೇವರಾದ ಸರ್ವೇಶ್ವರ ಸಫಲಪಡಿಸಿದ್ದಾರೆ. ಈ ದೊಡ್ಡ ಮರುಭೂಮಿಯಲ್ಲಿ ನೀವು ಸಂಚರಿಸುತ್ತಿರುವಾಗಲೆಲ್ಲ ಅವರು ನಿಮ್ಮನ್ನು ಪರಾಂಬರಿಸುತ್ತಾ ಬಂದರು. ಈ ನಲವತ್ತು ವರ್ಷ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದುದರಿಂದಲೆ ನಿಮಗೆ ಏನೂ ಕಡಿಮೆಯಾಗಲಿಲ್ಲ,” ಎಂದು ಹೇಳಿದನು.


ಅವಳ ದ್ರಾಕ್ಷಾತೋಟಗಳನ್ನು ಅಲ್ಲಿಯೇ ಅವಳಿಗೆ ಹಿಂದಿರುಗಿಕೊಡುವೆನು. ಆಕೋರಿನ ಕಣಿವೆಯನ್ನು ಅವಳ ಆಶಾದ್ವಾರವನ್ನಾಗಿ ಮಾಡುವೆನು. ಅವಳು ತನ್ನ ಯೌವನದ ದಿನಗಳಲ್ಲಿಯೂ ಈಜಿಪ್ಟಿನಿಂದ ಬಿಡುಗಡೆಯಾಗಿ ಬಂದ ಸಮಯದಲ್ಲಿಯೂ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.


ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ಸರ್ವೇಶ್ವರ ಈಜಿಪ್ಟಿನವರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಯೇಲರು ನೋಡಿ ಸರ್ವೇಶ್ವರನಿಗೆ ಭಯಪಟ್ಟು ಅವರಲ್ಲೂ ಅವರ ದಾಸ ಮೋಶೆಯಲ್ಲೂ ನಂಬಿಕೆಯಿಟ್ಟರು.


ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.


ಜನಸಮೂಹದಿಂದ ಒಬ್ಬನು, “ಬೋಧಕರೇ, ನಮ್ಮ ಪಿತ್ರಾರ್ಜಿತ ಸೊತ್ತನ್ನು ನನಗೆ ಭಾಗಮಾಡಿಕೊಡುವಂತೆ ನನ್ನ ಸೋದರನಿಗೆ ಹೇಳಿ,” ಎಂದು ಕೇಳಿಕೊಂಡನು.


“ನಿನೆವೆ ಮಹಾನಗರದ ನಿವಾಸಿಗಳು ಎಷ್ಟು ದುಷ್ಟರೆಂಬುದು ನನಗೆ ತಿಳಿದುಬಂದಿದೆ. ನೀನು ಅಲ್ಲಿಗೆ ಹೋಗು ಅವರನ್ನು ಕಟುವಾಗಿ ಖಂಡಿಸು.”


“ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ.


ಆದರೂ ಇವಳು ತಾನು ಈಜಿಪ್ಟ್ ದೇಶದಲ್ಲಿ ಸೂಳೆಯಾಗಿದ್ದ ತನ್ನ ತಾರುಣ್ಯವನ್ನು ನೆನಪುಮಾಡಿಕೊಂಡು ತನ್ನ ಸೂಳೆತನವನ್ನು ಇನ್ನೂ ಹೆಚ್ಚಿಸಿದಳು.


ಅವಳು ಈಜಿಪ್ಟಿನಲ್ಲಿ ಇದ್ದಂದಿನಿಂದಲೂ ತನ್ನ ಸೂಳೆತನವನ್ನು ಬಿಡಲಿಲ್ಲ; ಬಾಲ್ಯದಲ್ಲಿಯೇ ಅಲ್ಲಿಯವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ನಸುಕಿ, ಅವಳ ಸಂಗಡ ಸೂಳೆಗಾರಿಕೆಯನ್ನು ಹೆಚ್ಚೆಚ್ಚಾಗಿ ಮಾಡಿದರು.


ಅವರು ಈಜಿಪ್ಟಿನಲ್ಲಿ ಸೂಳೆತನ ಮಾಡುತ್ತಿದ್ದರು. ಬಾಲ್ಯದಲ್ಲಿ ವೇಶ್ಯೆಯರಾಗಿ ನಡೆಯುತ್ತಿದ್ದರು. ಅಲ್ಲಿನ ಪುರುಷರು ಅವರ ಸ್ತನಗಳನ್ನು ಹಿಸುಕಿದರು, ಎಳೆಯ ತೊಟ್ಟುಗಳನ್ನು ಸವರಿಸಿದರು.


ಈ ನಿನ್ನ ಅಸಹ್ಯಕಾರ್ಯಗಳನ್ನೂ ಸೂಳೆತನವನ್ನೂ ನೀನು ಪದೇ ಪದೇ ನಡಿಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.


ಬೋಕಿಯ ಬಾಗಿಲಿನ ಸಮೀಪದಲ್ಲಿರುವ ‘ಬೆನ್‍ಹಿನ್ನೋಮ್’ ಕಣಿವೆಗೆ ಹೋಗು. ನಾನು ನಿನಗೆ ತಿಳಿಸುವ ಈ ಸಂದೇಶವನ್ನು ಅಲ್ಲಿ ಸಾರು -


ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;


ಸಿಯೋನಿನ ಮಹಿಳೆಯರೇ, ಹೊರಟುಬನ್ನಿ ಅರಸ ಸೊಲೊಮೋನನನ್ನು ನೋಡಬನ್ನಿ ಆತನ ವಿವಾಹಮಹೋತ್ಸವ ದಿನದಂದು ಆತನ ತಾಯಿ ತೊಡಿಸಿದ ಮುಕುಟವನ್ನು ಆತ ಧರಿಸಿರುವುದನ್ನು ನೋಡಬನ್ನಿ.


ಜ್ಞಾನವೆಂಬಾಕೆ ಹಾದಿಗಳಲ್ಲಿ ಕೂಗುತ್ತಾ ಇದ್ದಾಳೆ; ಬೀದಿಚೌಕಗಳಲ್ಲಿ ದನಿಗೈಯುತ್ತಾ ಇದ್ದಾಳೆ;


ಮೋಶೆ, “ಸಂಜೆ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನು ಕೊಡುವವರು ಸರ್ವೇಶ್ವರ. ನಾವು ಎಷ್ಟು ಮಾತ್ರದವರು? ಗೊಣಗುಟ್ಟುವ ನಿಮ್ಮ ಮಾತುಗಳು ಸರ್ವೇಶ್ವರನಿಗೆ ಕೇಳಿಸಿವೆ. ಆ ಗೊಣಗುಟ್ಟುವಿಕೆ ಸರ್ವೇಶ್ವರನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ,” ಎಂದನು.


ವಿಶ್ವಾಸದಲ್ಲಿ ವ್ಯಭಿಚಾರಿಗಳಂತೆ ಬಾಳುವವರೇ, ಲೋಕದೊಡನೆ ಗೆಳೆತನವೆಂದರೆ ದೇವರೊಡನೆ ಹಗೆತನವೆಂಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ.


ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ: ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ.


ಯೌವನಾರಭ್ಯ ಶತ್ರುಕಾಡಿದ್ದು ಎಂತೆಂದು I ಇಸ್ರಯೇಲ್ ಜನಾಂಗ ವರದಿ ಮಾಡಲಿ ನಮಗಿಂದು II


ಸರ್ವೇಶ್ವರ ಸ್ವಾಮಿ ನನಗೆ ನೀಡಿದ ಆದೇಶ ಇದು :


“ಈಗತಾನೆ. ‘ನೀವೆ ನನ್ನ ತಂದೆ, ನನ್ನ ಯೌವನದ ಆಪ್ತರು’ ಎಂದು ಕರೆಯುತ್ತಿರುವೆ.


ಅವಳು ತನ್ನ ನಲ್ಲರನ್ನು ಹಿಂದಟ್ಟಿ ಹೋದರೂ ಅವರನ್ನು ಸಂಧಿಸಲಾರಳು; ಅವರನ್ನು ಹುಡುಕಿದರೂ ಕಂಡುಹಿಡಿಯಲಾರಳು. ಆಗ ಅವಳು: ‘ನನ್ನನ್ನು ಮದುವೆಯಾದ ಪತಿಯ ಬಳಿಗೆ ಹಿಂತಿರುಗುವೆನು. ಈಗಿನ ಸ್ಥಿತಿಗಿಂತ ಆಗಿನ ಸ್ಥಿತಿಯೇ ಉತ್ತಮವಾಗಿತ್ತು’ ಎಂದುಕೊಳ್ಳುವಳು.


ಹೌದು, ಆತ ಪ್ರೀತಿಸುತ್ತಾನೆ ತನ್ನ ಪ್ರಜೆಯನ್ನು, ಆಶ್ರಯ ನೀಡುತ್ತಾನೆ ತನ್ನ ಭಕ್ತರೆಲ್ಲರಿಗು. ಎಂದೇ ಆತನ ಆಜ್ಞೆಗಳಿಗೆ ತಲೆಬಾಗುವೆವು, ಆತನ ಪಾದಚರಣದಲೆ ಕುಳಿತಿರುವೆವು.


ವರ್ತಕರು ಮಾರುವ ಸಕಲ ಸುಗಂಧ ತೈಲಗಳಿಂದ ರಸಗಂಧ ಸಾಂಬ್ರಾಣಿ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿ ಹೊರಹೊಮ್ಮುತ್ತಿರುವ ಅರಣ್ಯದ ಮಾರ್ಗವಾಗಿ ಬರುತ್ತಿರುವ ಆ ಮೆರವಣಿಗೆ ಯಾರದು?


ಬಾಳ್‍ದೇವತೆಗಳ ಹೆಸರುಗಳನ್ನು ನಿನ್ನ ಬಾಯಿಂದ ತೊಲಗಿಸುವೆನು; ಇನ್ನೆಂದಿಗೂ ಅವುಗಳನ್ನು ನೀನು ಉಚ್ಛರಿಸದಂತೆ ಮಾಡುವೆನು.


ಬೆಂಗಾಡಿನಲ್ಲಿ ದ್ರಾಕ್ಷೆ ಸಿಕ್ಕಿದಂತೆ ಇಸ್ರಯೇಲ್ ನನಗೆ ಸಿಕ್ಕಿತು. ಅಂಜೂರದ ಮರದ ಮೊತ್ತಮೊದಲ ಹಣ್ಣು ಕಣ್ಣಿಗೆ ಬೀಳುವಂತೆ ನಿಮ್ಮ ಪಿತೃಗಳು ನನಗೆ ಕಾಣಿಸಿಕೊಂಡರು. ಆದರೆ ಅವರು ಬಾಳ್‍ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾದರು. ಅವರು ನೆಚ್ಚಿಕೊಂಡ ದೇವತೆಯಂತೆ ನೀಚರಾದರು.


ಸರ್ವೇಶ್ವರ ಇಂತೆನ್ನುತ್ತಾರೆ: “ಪ್ರೀತಿಸಿದೆನು ಇಸ್ರಯೇಲನ್ನು ಅದರ ಬಾಲ್ಯಾವಸ್ಥೆಯಿಂದ; ಕರೆದೆನು ನನ್ನ ಆ ಪುತ್ರನನು ಈಜಿಪ್ಟಿನಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು