Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:21 - ಕನ್ನಡ ಸತ್ಯವೇದವು C.L. Bible (BSI)

21 ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೇಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷೇಬಳ್ಳಿಯ ಕೆಟ್ಟ ರೆಂಬೆಗಳಾದದ್ದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೂದವೇ, ನಾನು ನಿನ್ನನ್ನು ಅತ್ಯುತ್ತಮ ದ್ರಾಕ್ಷಾಲತೆಯಂತೆ ನೆಟ್ಟೆ. ನೀನು ಒಳ್ಳೆಯ ಬೀಜದಂತಿದ್ದಿ. ನೀನು ಕೆಟ್ಟ ಫಲಗಳನ್ನು ಫಲಿಸುವ ಬೇರೆ ದ್ರಾಕ್ಷಿಯ ಬಳ್ಳಿಯಾದದ್ದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅತ್ಯುತ್ತಮ ಬೀಜದಿಂದ ಬೆಳೆದ ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:21
27 ತಿಳಿವುಗಳ ಹೋಲಿಕೆ  

ನನ್ನ ತೋಟಕ್ಕಾಗಿ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು ಸಿಹಿದ್ರಾಕ್ಷಿಯನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತೇಕೆ? ನನ್ನ ಈ ತೋಟಕ್ಕೆ ಏನು ಮಾಡುವೆನೆಂದು ಹೇಳುತ್ತೇನೆ, ಕೇಳಿ:


ನಿನ್ನ ಸ್ವಂತ ನಾಡಾದ ಆ ಬೆಟ್ಟದ ಸೀಮೆಗೆ ನೀನವರನ್ನು ತಂದು ನೆಲೆಗೊಳಿಸುವೆ. ನಿನ್ನ ನಿವಾಸಕ್ಕಾಗಿ ನೀನಾರಿಸಿಕೊಂಡಾ ಸ್ಥಳಕ್ಕೆ ನೀ ಸಿದ್ಧಪಡಿಸಿಕೊಂಡಿರುವಾ ಪವಿತ್ರಾಲಯಕ್ಕೆ ಹೇ ಸರ್ವೇಶ್ವರಾ, ನೀನವರನ್ನು ಬರಮಾಡುವೆ.


“ನಾನೇ ನಿಜವಾದ ದ್ರಾಕ್ಷಾಬಳ್ಳಿ. ನನ್ನ ಪಿತನೇ ತೋಟಗಾರ.


ಹೊರಗಟ್ಟಿದೆ ಪರಕೀಯರನು, ನಮ್ಮ ಪೂರ್ವಜರ ನೆಲೆಗೊಳಿಸಲು I ವಿನಾಶಗೊಳಿಸಿದೆ ಅನ್ಯರನು, ನಮ್ಮವರನು ವಿಕಾಸಗೊಳಿಸಲು II


ಈಜಿಪ್ಟಿನಿಂದ ದ್ರಾಕ್ಷಾಲತೆಯೊಂದನು ನೀ ತಂದೆ I ಅನ್ಯಜನತೆಯನು ಹೊರದೂಡಿ ಅದನು ನಾಟಿಮಾಡಿದೆ II


ನಿಮ್ಮ ಪಿತೃಗಳನ್ನು ಪ್ರೀತಿಸಿ, ತರುವಾಯ ಅವರ ಸಂತತಿಯಾದ ನಿಮ್ಮನ್ನೂ ಆರಿಸಿಕೊಂಡರು.


ಬಳಿಕ ಯೇಸುಸ್ವಾಮಿ ಜನರಿಗೆ ಈ ಸಾಮತಿಯನ್ನು ಹೇಳತೊಡಗಿದರು: “ಒಬ್ಬಾತ ಒಂದು ದ್ರಾಕ್ಷಿತೋಟ ಮಾಡಿಸಿದ. ಕಾರಣಾಂತರ ಅದನ್ನು ಗೇಣಿದಾರರಿಗೆ ವಹಿಸಿ, ದೀರ್ಘಕಾಲ ಹೊರನಾಡಿಗೆ ಪ್ರವಾಸ ಹೋದ.


ಅನಂತರ ಯೇಸುಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: “ಒಬ್ಬನು ದ್ರಾಕ್ಷಿಯತೋಟ ಒಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ; ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ.


ಅವರೋ ಸೊದೋಮ್ಯರೆಂಬ ದ್ರಾಕ್ಷಾಲತೆ ಅವರೋ ಗೊಮೋರ್ಯರೆಂಬ ತೋಟದಬೆಳೆ.


“ಇನ್ನೊಂದು ಸಾಮತಿಗೆ ಕಿವಿಗೊಡಿ: ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ. ಅದರ ಸುತ್ತ ಬೇಲಿಯನ್ನು ಹಾಕಿಸಿದ. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಇಂತಿರಲು ನನ್ನ ದಾಸನಾದ ಇಸ್ರಯೇಲೇ, ನಾನು ಆಯ್ದುಕೊಂಡ ಯಕೋಬೇ, ನನ್ನ ಗೆಳೆಯ ಅಬ್ರಹಾಮನ ಸಂತತಿಯೇ,


ಅಯ್ಯೋ, ಸುವ್ರತೆಯಂತಿದ್ದ ನಗರಿ ಈಗ ಸೂಳೆಯಂತಿದ್ದಾಳಲ್ಲ! ನ್ಯಾಯನೀತಿವಂತರಿಗೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ಬೀಡಾಗಿದ್ದಾಳಲ್ಲಾ!


ನೆನೆಯಿರಿ ಆತನದ್ಭುತಗಳನು, ಮಹತ್ಕಾರ್ಯಗಳನು I ಆತನ ವದನ ವಿಧಿಸಿದಾ ನ್ಯಾಯನಿರ್ಣಯಗಳನು II


ಯೆಹೋಶುವನ ದಿನಗಳಲ್ಲೂ ಅವನ ಕಾಲದಿಂದ ಇನ್ನೂ ಜೀವಿಸುತ್ತಿದ್ದ ಹಿರಿಯರ ದಿನಗಳಲ್ಲೂ ಇಸ್ರಯೇಲರು, ಸರ್ವೇಶ್ವರ ಇಸ್ರಯೇಲರ ಹಿತಕ್ಕಾಗಿ ನಡೆಸಿದ ಅದ್ಭುತಕಾರ್ಯಗಳಿಗೆ ಸಾಕ್ಷಿಗಳಾಗಿದ್ದರು.


ಅಕಟಕಟಾ! ಎಷ್ಟು ಮಸುಕಾಗಿದೆ ಬಂಗಾರ ಎಷ್ಟು ಕಾಂತಿಹೀನವಾಗಿಬಿಟ್ಟಿವೆ ಅಪ್ಪಟ ಚಿನ್ನ! ಪವಿತ್ರಾಲಯದ ಕಲ್ಲುಗಳೂ ಬಿದ್ದಿವೆ ಚೆಲ್ಲಾಪಿಲ್ಲಿಯಾಗಿ ಬೀದಿಬೀದಿಗಳ ಬದಿಯಲ್ಲಿ ರಾಶಿರಾಶಿಯಾಗಿ!


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ಆ ದಿನದಲ್ಲಿ ಪೇಳ್ವರು ಸರ್ವೇಶ್ವರ : “ಇಗೋ, ನನ್ನ ವಿಹಾರದ ದ್ರಾಕ್ಷಾವನ, ಇದ ಕುರಿತು ಹಾಡಿರಿ ಒಂದು ಗಾನ.


“ಸರ್ವಶಕ್ತ ಸರ್ವೇಶ್ವರನಾದ ನಾನೇ ಈ ಇಸ್ರಯೇಲನ್ನೂ ಜುದೇಯವನ್ನೂ ನೆಟ್ಟಿ ಬೆಳೆಸಿದೆ. ಆದರೆ ಈಗ ‘ನಿನಗೆ ಕೇಡು,’ ಎಂದು ಶಪಿಸುತ್ತಿದ್ದೇನೆ. ಏಕೆಂದರೆ ಬಾಳನಿಗೆ ಧೂಪಾರತಿಯೆತ್ತಿ, ನನ್ನನ್ನು ಕೆಣಕಿ, ತಮಗೇ ಕೆಡುಕನ್ನು ಮಾಡಿಕೊಂಡಿದ್ದಾರೆ.


ಹದಮಾಡಿದೆ ಅದಕೆ ಬೇಕಾದ ನೆಲವನ್ನೆಲ್ಲಾ I ಬೇರೂರಿ ಹಬ್ಬಿಕೊಂಡಿತದು ನಾಡಿನಲ್ಲೆಲ್ಲಾ II


ಆಕ್ರಮಣಕಾರರಿಗೆ ಕರೆ; ಸಿಯೋನೆಂಬ ದ್ರಾಕ್ಷಾತೋಟದ ಸಾಲುಗಿಡಗಳನ್ನು ಹಾಳುಮಾಡಿ. ಆದರೆ ಅದನ್ನು ನಿರ್ಮೂಲಮಾಡಬೇಡಿ. ಅದರ ರೆಂಬೆಗಳನ್ನು ಕಿತ್ತುಹಾಕಿ. ಅವು ಸರ್ವೇಶ್ವರನಾದ ನನಗೆ ಸೇರಿದವುಗಳಲ್ಲ.


ಸರ್ವೇಶ್ವರನಾದ ನಾನು ಅದಕ್ಕೆ ‘ಸುಂದರ ಫಲದಿಂದ ಕೂಡಿದ ಚೆಲುವಾದ ಹಚ್ಚನೆಯ ಓಲಿವ್ ಮರ’ ಎಂದು ಹೆಸರಿಟ್ಟೆ. ಆದರೆ ಅದೇ ಮರಕ್ಕೆ ಬೆಂಕಿಯಿಟ್ಟು ಧಗಧಗನೆ ಉರಿಯುವಂತೆ ಮಾಡುವೆನು. ಅದರ ರೆಂಬೆಗಳು ಸುಟ್ಟುಹೋಗುವುವು.


“ನರಪುತ್ರನೇ, ವನವೃಕ್ಷಗಳಲ್ಲಿ ದ್ರಾಕ್ಷಾವೃಕ್ಷದ ವಿಶಿಷ್ಟತೆಯೇನು? ಕಾಡುಗಿಡಗಳ ಕಟ್ಟಿಗೆಗಿಂತ ದ್ರಾಕ್ಷಿಯ ಕಟ್ಟಿಗೆಯಲಿ ಹೆಚ್ಚಾದುದೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು