ಯೆರೆಮೀಯ 2:23 - ಕನ್ನಡ ಸತ್ಯವೇದವು C.L. Bible (BSI)23 ‘ನಾನು ಅಶುದ್ಧಳಾಗಲಿಲ್ಲ, ಬಾಳ್‍ದೇವತೆಗಳನ್ನು ಹಿಂಬಾಲಿಸಲೇ ಇಲ್ಲ’ ಎಂದು ಹೇಗೆ ತಾನೆ ಹೇಳಬಲ್ಲೆ? ಆ ಕಣಿವೆಯಲ್ಲಿ ನಿನ್ನ ಹೆಜ್ಜೆಗುರುತುಗಳನ್ನು ನೋಡು ಅಲ್ಲಿ ನೀನು ಎಸಗಿದ ದುಷ್ಕೃತ್ಯಗಳನ್ನು ಮನಸ್ಸಿಗೆ ತಂದುಕೊ. ಅತ್ತ ಇತ್ತ ನೆಗೆದಾಡುವ, ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ ನೀನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ನಾನು ಅಶುದ್ಧವಾಗಲಿಲ್ಲ, ಬಾಳ್ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ” ಎಂದು ಹೇಗೆ ಹೇಳುತ್ತಿ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನನಗೆ ಮುಡಚಟ್ಟಾಗಲಿಲ್ಲ, ಅನ್ಯದೇವತೆಗಳನ್ನು ನಾನು ಹಿಂಬಾಲಿಸಲಿಲ್ಲವೆಂದು ಹೇಗೆ ಹೇಳುತ್ತೀ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ಕೆಲಸವನ್ನು ಮನಸ್ಸಿಗೆ ತಂದುಕೋ, ತನ್ನ ಜಾಡೆಗಳನ್ನು ತಾರುಮಾರು ಮಾಡುವ ವೇಗವಾದ ಹೆಣ್ಣು ಒಂಟೆಯಂತಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಯೆಹೂದವೇ, ‘ನಾನು ತಪ್ಪಿತಸ್ಥಳಲ್ಲವೆಂದೂ ನಾನು ಬಾಳನ ವಿಗ್ರಹಗಳನ್ನು ಪೂಜಿಸಲಿಲ್ಲವೆಂದೂ’ ನೀನು ನನಗೆ ಹೇಗೆ ಹೇಳುವೆ? ನೀನು ಕಣಿವೆಯಲ್ಲಿ ಮಾಡಿದ ಕಾರ್ಯಗಳ ಬಗ್ಗೆ ಯೋಚಿಸು. ನೀನು ಮಾಡಿದ ಕೆಲಸಗಳ ಬಗ್ಗೆ ಯೋಚಿಸು. ನೀನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಿಹೋಗುವ ತೀವ್ರಗತಿಯ ಹೆಣ್ಣು ಒಂಟೆಯಂತೆ ಇರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ಇದಲ್ಲದೆ ನೀನು, ‘ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ,’ ಎಂದು ಹೇಳುವುದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು. ನೀನು ಮಾಡಿದ್ದನ್ನು ತಿಳಿದುಕೋ. ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ. ಅಧ್ಯಾಯವನ್ನು ನೋಡಿ |