Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:32 - ಕನ್ನಡ ಸತ್ಯವೇದವು C.L. Bible (BSI)

32 ಒಬ್ಬ ಯುವತಿ ತನ್ನ ಆಭರಣಗಳನ್ನು, ಒಬ್ಬ ವಧು ತನ್ನ ಡಾಬನ್ನು ಮರೆಯುವುದುಂಟೆ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯುವತಿಯು ತನ್ನ ಆಭರಣಗಳನ್ನು ಮರೆಯುವಳೇ? ಇಲ್ಲ. ವಧುವು ಮದುವೆಯ ಉಡುಪನ್ನು ಧರಿಸಿಕೊಳ್ಳಲು ಮರೆಯುವಳೇ? ಇಲ್ಲ. ಆದರೆ ನನ್ನ ಜನರು ನನ್ನನ್ನು ಅಸಂಖ್ಯಾತ ದಿನಗಳವರೆಗೆ ಮರೆತುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯುವತಿಯು ತನ್ನ ಆಭರಣಗಳನ್ನೂ ಇಲ್ಲವೆ ಮದಲಗಿತ್ತಿ ತನ್ನ ಒಡ್ಯಾಣವನ್ನು ಮರೆತುಬಿಡುವಳೋ? ಆದರೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:32
24 ತಿಳಿವುಗಳ ಹೋಲಿಕೆ  

ಮರೆತುಬಿಟ್ಟರವರು ತಮ್ಮ ಮುಕ್ತಿದಾತ ದೇವನನು I ಈಜಿಪ್ಟಿನಲ್ಲಾತ ಎಸಗಿದ ಮಹತ್ಕಾರ್ಯಗಳನು II


ನೀನು ನನ್ನನ್ನು ಮರೆತುಬಿಟ್ಟು ಸುಳ್ಳನ್ನು ನಂಬಿದ್ದರಿಂದ ಇದೇ ನಿನಗೆ ಒದಗಲಿರುವ ಗತಿ. ಇದೇ ನಾನು ನಿನಗೆ ಅಳೆದುಕೊಡುವ ಪ್ರತೀಕಾರ.


ಇಗೋ ಕೇಳಿ, ಬೋಳು ಗುಡ್ಡಗಳ ಮೇಲಿಂದ ಒಂದು ಶಬ್ದ : ‘ನಾವು ಡೊಂಕುದಾರಿಯನ್ನು ಹಿಡಿದಿದ್ದೇವೆ. ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯನ್ನು ಮರೆತುಬಿಟ್ಟಿದ್ದೇವೆ’ ಎಂದು ಇಸ್ರಯೇಲರು ಕಣ್ಣೀರು ಸುರಿಸುತ್ತಾ ದೇವರ ಕೃಪೆಯನ್ನು ಬೇಡುತ್ತಿದ್ದಾರೆ.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರು ಬದಲಾಯಿಸಿಕೊಂಡಿತೋ? ಆದರೆ ನನ್ನ ಜನ, ತಮ್ಮ ಮಹಿಮೆಯಾದ ನನ್ನನ್ನು ತೊರೆದು ನಿರರ್ಥಕವಾದುವುಗಳನ್ನು ಆರಿಸಿಕೊಂಡಿದ್ದಾರೆ!


ಇಸ್ರಯೇಲೇ, ನಿನ್ನ ಉದ್ಧಾರಕನಾದ ದೇವರನ್ನು ನೀನು ಸ್ಮರಿಸಲಿಲ್ಲ. ನಿನಗೆ ಆಶ್ರಯವಿತ್ತ ಪೊರೆಬಂಡೆಯನ್ನು ಮರೆತುಹೋದೆ. ಬದಲಿಗೆ ಅನ್ಯದೇವರ ಆರಾಧನೆಗಾಗಿ ನಿನಗಿಷ್ಟವಾದ ಉದ್ಯಾನವನಗಳನ್ನು ನೆಟ್ಟೆ.


“ಇಸ್ರಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ. ಜುದೇಯವು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ನಿರ್ಮಿಸಿಕೊಂಡಿದೆ. ಆದರೆ ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಾರುವೆನು. ಅದು ಆ ಸೌಧಗಳನ್ನು ನುಂಗಿಬಿಡುವುದು.”


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಕೆಳ ಪಾತಾಳವೊಂದೇ ಗತಿ ದುಷ್ಟರಿಗೆ I ದೇವರನು ಕೈಬಿಟ್ಟಾ ರಾಷ್ಟ್ರಗಳಿಗೆ II


ನನ್ನ ಜನರಾದರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಾರತಿ ಎತ್ತಿದ್ದುಂಟು. ಸನಾತನ ಸನ್ಮಾರ್ಗಗಳಲ್ಲಿ ಮುಗ್ಗರಿಸಿ ಸರಿಯಲ್ಲದ ಸೀಳುದಾರಿಯಲ್ಲಿ ಅಲೆದದ್ದುಂಟು.


ಈ ದುಷ್ಟಜನರು ನನ್ನ ಮಾತುಗಳನ್ನು ಕೇಳಲೊಲ್ಲರು. ತಮ್ಮ ಹೃದಯದ ಒರಟುತನದಂತೆ ನಡೆದುಬರುತ್ತಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸಿ, ಪೂಜಿಸುತ್ತಿದ್ದಾರೆ. ಇವರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.


ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.


“ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.


ಒಂಟೆಗಳು ಕುಡಿದಾದ ನಂತರ ಅವನು ಆಕೆಯ ಮೂಗಿಗೆ ಅರ್ಧ ತೊಲೆಯ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನೂ ಕೈಗಳಿಗೆ ಹತ್ತು ತೊಲೆಯ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ತೊಡಿಸಿದನು.


ಸೌಲನಿಗಾಗಿ ಅತ್ತು ಪ್ರಲಾಪಿಸಿರಿ ಇಸ್ರಯೇಲಿನ ಮಹಿಳೆಯರೇ, ಉಲ್ಲಾಸಕರ ರಕ್ತಾಂಬರಗಳ ಉಡಿಸಿದವನು ಅವನೇ ಅಲ್ಲವೆ ನಿಮಗೆ? ಅವುಗಳ ಮೇಲೆ ಸುವರ್ಣಾಂಬರಗಳ ತೊಡಿಸಿದವನು ಆತನೇ ಅಲ್ಲವೆ ನಿಮಗೆ?


ಬಳಿಕ ತಾನು ತಂದಿದ್ದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ವಸ್ತ್ರಗಳನ್ನು ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಬೆಲೆಬಾಳುವ ಉಡುಗೊರೆಗಳನ್ನು ಕೊಟ್ಟನು.


ಅವನು ತನ್ನ ತಂಗಿಯ ಮೇಲಿದ್ದ ಮೂಗುತಿಯನ್ನೂ ಬಳೆಗಳನ್ನೂ ನೋಡಿದನು. ಆ ಮನುಷ್ಯ ಆಕೆಗೆ ಹೇಳಿದ ಮಾತುಗಳನ್ನು ಆಕೆಯಿಂದಲೇ ಕೇಳಿ ತಿಳಿದುಕೊಂಡನು. ಬಳಿಕ ಬುಗ್ಗೆಯ ಬಳಿ ಒಂಟೆಗಳೊಂದಿಗೆ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.


ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ನೀವು ನಿಮ್ಮ ನಲ್ಲನಲ್ಲೆಯರನ್ನು ಹುಡುಕಿಕೊಂಡು ಹೋಗುವುದರಲ್ಲಿ ಎಷ್ಟೋ ನಿಪುಣರು ! ಬಲು ಕೆಟ್ಟ ಹೆಂಗಸು ಕೂಡ ನಿಮ್ಮಿಂದ ಕಲಿತುಕೊಳ್ಳಬಹುದಾಗಿದೆ.


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ಸುತ್ತಮುತ್ತಲಿನ ಶತ್ರುಗಳಿಂದ ತಮ್ಮನ್ನು ಬಿಡಿಸಿದ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು.


ಇಂಥ ಯೋಚನೆ ಈ ಕಳ್ಳ ಪ್ರವಾದಿಗಳ ಮನದಲ್ಲಿ ಎಲ್ಲಿಯವರೆಗೆ ಇರುವುದು? ಕನಸು ಕಂಡ ಪ್ರವಾದಿ ತನ್ನ ಕನಸನ್ನು ಬೇಕಾದರೆ ತಿಳಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು