Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:34 - ಕನ್ನಡ ಸತ್ಯವೇದವು C.L. Bible (BSI)

34 ಇದಲ್ಲದೆ, ನಿರ್ದೋಷಿಗಳಾದ ದೀನದಲಿತರ ಪ್ರಾಣರಕ್ತ ನಿಮ್ಮ ಬಟ್ಟೆಗೆ ಅಂಟಿಕೊಂಡಿದೆ! ‘ಇವರು ಕನ್ನ ಕೊರೆಯುವುದನ್ನು ಕಂಡೆವು’ ಎಂದು ನೀವು ನೆವ ಹೇಳುವಂತಿಲ್ಲ. ನಿಮ್ಮ ಈ ಎಲ್ಲ ದುರಭ್ಯಾಸಗಳ ನಿಮಿತ್ತ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವದನ್ನು ಕಂಡೆನೆಂಬ ನೆವ ನಿನಗಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ [ನಿನ್ನನ್ನು ದಂಡಿಸುವೆನು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡವರ ರಕ್ತವು ಸಿಕ್ಕಿದೆ. ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:34
22 ತಿಳಿವುಗಳ ಹೋಲಿಕೆ  

ಮನಸ್ಸೆಯು ಯೆಹೂದ್ಯರನ್ನು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡಲು ಪ್ರೇರಿಸಿದ್ದಲ್ಲದೆ, ನಿರಪರಾಧಿಗಳ ವಧೆಯಿಂದ ಜೆರುಸಲೇಮನ್ನೆಲ್ಲಾ ರಕ್ತಮಯವಾಗಿಸಿದನು.


ಈ ಜನರು ನನ್ನನ್ನು ತೊರೆದು ಬಿಟ್ಟು ತಮಗಾಗಲಿ, ತಮ್ಮ ಪೂರ್ವಜರಿಗಾಗಲಿ, ಜುದೇಯದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದಾರೆ. ಈ ಸ್ಥಳವನ್ನು ಅಪವಿತ್ರಗೊಳಿಸಿದ್ದಾರೆ. ನಿರ್ದೋಷಿಗಳ ರಕ್ತದಿಂದ ತುಂಬಿಸಿದ್ದಾರೆ.


ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು.


ಕಳ್ಳನು ಕನ್ನ ಕೊರೆಯುತ್ತಿರುವಾಗಲೆ ಕೈಗೆ ಸಿಕ್ಕಿ ಕೊಲ್ಲಲ್ಪಟ್ಟರೆ ಅದನ್ನು ನರಹತ್ಯವೆಂದು ಎಣಿಸಕೂಡದು.


ಜೆರುಸಲೇಮ್ ನಗರ ಸುರಿಸಿದ ರಕ್ತ ಅದರಲ್ಲೇ ನಿಂತಿದೆ. ಧೂಳು ಮುಚ್ಚೀತೆಂದು ಆ ಪಟ್ಟಣದವರು ಅದನ್ನು ನೆಲದ ಮೇಲೆ ಹೊಯ್ಯದೆ, ಬರೀ ಬಂಡೆಯ ಮೇಲೆ ನಿಲ್ಲಿಸಿರುತ್ತಾರೆ.


ನೀವು ಬಲಿಯರ್ಪಿಸುತ್ತಾ, ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧಮಾಡಿಕೊಂಡಿರಿ. ಹೀಗಿರುವಾಗ ಇಸ್ರಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೇ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸೆನು; ಇದು ಸರ್ವೇಶ್ವರನಾದ ದೇವರ ನುಡಿ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.


ತಮ್ಮ ಗಂಡುಹೆಣ್ಣು ಮಕ್ಕಳನ್ನೂ ಆಹುತಿಕೊಡುವುದಕ್ಕೆ ಬೆನ್‍ಹಿನ್ನೋಮ್ ಕಣಿವೆಯಲ್ಲಿನ ತೋಫೆತೆಂಬ ಬಲಿಪೀಠವನ್ನು ಕಟ್ಟಿದ್ದಾರೆ. ಇಂಥ ಕಾರ್ಯವನ್ನು ನಾನು ವಿಧಿಸಿಲ್ಲ. ಅದು ನನ್ನ ಮನಸ್ಸಿಗೂ ಸುಳಿದಿಲ್ಲ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಅವರಿಗೆ ಲಜ್ಜೆಯ ಗಂಧವೂ ಇಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದರು.


ನಿಮ್ಮ ಕಾಲುಗಳು ಓಡುವುದು ಕೇಡಿಗಾಗಿ, ನೀವು ತವಕಪಡುವುದು ನಿರಪರಾಧಿಯ ರಕ್ತಪಾತಕ್ಕಾಗಿ. ನಿಮ್ಮ ಈ ಆಲೋಚನೆಗಳು ದುಷ್ಟವಾದುವು, ನೀವು ಹಿಡಿದ ಹಾದಿಗಳು ತರುವುದು ನಾಶವಿನಾಶವನ್ನೇ.


ಓಕ್‍ಮರಗಳ ತೋಪುಗಳಲ್ಲೂ ಸೊಂಪಾಗಿ ಹರಡಿರುವ ಮರಗಳ ಅಡಿಯಲ್ಲೂ ಕಾಮಾಗ್ನಿಯಿಂದ ಕುದಿಯುತ್ತೀರಿ. ಹೊಳೆಕೊರೆದ ಡೊಗರುಗಳಲ್ಲೂ ಬಂಡೆಬಿರುಕುಗಳಲ್ಲೂ ಮಕ್ಕಳನ್ನು ಬಲಿಕೊಡುತ್ತೀರಿ. ನೀವು ವಿದ್ರೋಹಿಗಳ ಸಂತಾನ, ಸುಳ್ಳುಗಾರರ ಸಂತತಿ.


ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾದುವು, ನಿಮ್ಮ ಬೆರಳುಗಳು ಅಕ್ರಮದಿಂದ ಮಲಿನವಾಗಿವೆ, ನಿಮ್ಮ ತುಟಿಗಳು ಸುಳ್ಳು ನುಡಿಯುತ್ತವೆ. ನಿಮ್ಮ ನಾಲಿಗೆ ಕೆಡುಕನ್ನು ಗೊಣಗುತ್ತದೆ.


ನೀವು ನಿಮ್ಮ ನಲ್ಲನಲ್ಲೆಯರನ್ನು ಹುಡುಕಿಕೊಂಡು ಹೋಗುವುದರಲ್ಲಿ ಎಷ್ಟೋ ನಿಪುಣರು ! ಬಲು ಕೆಟ್ಟ ಹೆಂಗಸು ಕೂಡ ನಿಮ್ಮಿಂದ ಕಲಿತುಕೊಳ್ಳಬಹುದಾಗಿದೆ.


ಅನ್ಯರನ್ನಾಗಲಿ, ಅನಾಥರನ್ನಾಗಲಿ, ವಿಧವೆಯರನ್ನೇ ಆಗಲಿ ಶೋಷಣೆಗೆ ಗುರಿಪಡಿಸಬೇಡಿ! ಇಲ್ಲೆಲ್ಲೂ ನಿರ್ದೋಷಿಗಳ ರಕ್ತವನ್ನು ಸುರಿಸಬೇಡಿ. ನಿಮಗೆ ಹಾನಿಕರವಾದ ಅನ್ಯದೇವತಾ ಭಕ್ತಿಯನ್ನು ಬಿಟ್ಟುಬಿಡಿ.


ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ.


ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಿಹರು ಆ ಯಾಜಕರು ಮತ್ತು ಪ್ರವಾದಿಗಳು. ಅವರ ಬಟ್ಟೆಯನ್ನೂ ಯಾರೂ ಮುಟ್ಟರು ಏಕೆಂದರೆ ರಕ್ತದಿಂದ ಅವರು ಕಳಂಕಿತರಾಗಿಹರು.


ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;


ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ. ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


“ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದುಕೊಂಡು ಕೊಯ್ದರೆ, ಇಲ್ಲವೆ ಮಾರಿದರೆ ಅವನು ಒಂದು ಎತ್ತಿಗೆ ಪ್ರತಿಯಾಗಿ ಐದು ಎತ್ತುಗಳನ್ನು ಒಂದು ಕುರಿಗೆ ಪ್ರತಿಯಾಗಿ ನಾಲ್ಕು ಕುರಿಗಳನ್ನು ಕೊಡಬೇಕು.


ಸದ್ಧರ್ಮಿಗಳು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಹರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಸಿಕ್ತವಾಗಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು