Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:6 - ಕನ್ನಡ ಸತ್ಯವೇದವು C.L. Bible (BSI)

6 ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿ ಕಾಡಾಗಿಯೂ ಹಳ್ಳಕೊಳ್ಳವಾಗಿಯೂ ನಿರ್ಜಲವಾಗಿಯೂ ಘೋರಾಂಧಕಾರವಾಗಿಯೂ ಯಾರೂ ಹಾದುಹೋಗದೆಯೂ ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡಿಸಿದ ಯೆಹೋವನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ ನಮ್ಮನ್ನು ಮರುಭೂಮಿಯಲ್ಲಿ ಕಾಡು ಕುಳಿಗಳು ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದುಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡೆಸಿದ ಯೆಹೋವ ದೇವರು ಎಲ್ಲಿ?’ ಎಂದು ಪ್ರಶ್ನೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:6
26 ತಿಳಿವುಗಳ ಹೋಲಿಕೆ  

ಬರಿದಾದ ಭೀಕರ ಮರುಭೂಮಿಯಲಿ ಅವರನು ಕಂಡು ಕಣ್ಣಗುಡ್ಡೆಯಂತೆ ಕಾಪಾಡಿದ ಪ್ರೀತಿಯಿಂದವರನು ಅಪ್ಪಿಕೊಂಡು.


ಸರ್ವೇಶ್ವರ ಇಂತೆನ್ನುತ್ತಾರೆ: “ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಲಿಂದ ನಾನೇ ನಿನ್ನ ಸರ್ವೇಶ್ವರನಾದ ದೇವರು. ನಾನಲ್ಲದೆ ಬೇರೆ ದೇವರುಗಳು ನಿನಗಿಲ್ಲ. ನಾನಲ್ಲದೆ ನಿನಗೆ ಬೇರೆ ಉದ್ಧಾರಕರಿಲ್ಲ.


ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.


ದೇವರು ಪ್ರವಾದಿಯನ್ನು ಕಳುಹಿಸಿ, ಇಸ್ರಯೇಲನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಪ್ರವಾದಿಯ ಮುಖಾಂತರ ಇಸ್ರಯೇಲಿಗೆ ರಕ್ಷಣೆ ದೊರಕಿತು.


ನೀವು ‘ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳೇ ಸುಳ್ಳು ಎನ್ನುತ್ತಾರೆ ಸರ್ವೇಶ್ವರ.


ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’


“ನೀನು ಹೋಗಿ ಜೆರುಸಲೇಮ್ ನಗರಕ್ಕೇ ಕೇಳಿಸುವಂತೆ ಈ ಸಂದೇಶವನ್ನು ಸಾರು : ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವ ವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆಯಿಲ್ಲದ ಅರಣ್ಯಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ; ಇದು ನಿನ್ನ ಹಿತಕ್ಕಾಗಿಯೇ.


ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ನೆನಪಿಗೆ ತಂದುಕೊಂಡೆ ಹಳೆಯ ದಿನಗಳನು I ಸ್ಮರಿಸಿಕೊಂಡೆ ಉರುಳಿಹೋದ ವರುಷಗಳನು II


ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II


ಆದರೆ ‘ನಮ್ಮನ್ನು ಸೃಷ್ಟಿಸಿದ ಕರ್ತನೆಲ್ಲಿ? ಕತ್ತಲಲ್ಲೂ ಕೀರ್ತನೆ ಹಾಡಬಲ್ಲವನೆಲ್ಲಿ?


ಕಾರ್ಮೋಡಗಳು ಅದನ್ನು ಕವಿಯಲಿ ಇರುಳೂ ಮರಣದ ನೆರಳೂ ಅದನ್ನು ಆಕ್ರಮಿಸಲಿ ಹಗಲನ್ನೇ ಮಬ್ಬಾಗಿಸುವ ಮುಸುಕು ಅದನ್ನು ಹೆದರಿಸಲಿ.


“ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು.


ಆಗ ಗಿದ್ಯೋನನು ಅವನಿಗೆ, “ಸ್ವಾಮೀ, ಸರ್ವೇಶ್ವರ ನನ್ನೊಡನೆ ಇದ್ದರೆ ನಮಗೆ ಇದೆಲ್ಲಾ ಏಕೆ ಸಂಭವಿಸಿತು? ನಮ್ಮ ಹಿರಿಯರು, ಸರ್ವೇಶ್ವರ ಅದ್ಭುತಗಳನ್ನು ನಡಿಸಿ ತಮ್ಮನ್ನು ಈಜಿಪ್ಟಿನಿಂದ ಬಿಡಿಸಿದರೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಅವರು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾರಲ್ಲಾ,” ಎನ್ನಲು,


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


“ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ ಅಮೋರಿಯರ ಮಲೆನಾಡಿನ ಮಾರ್ಗವನ್ನು ಹಿಡಿದು, ನೀವು ನೋಡಿದ ಆ ಘೋರ ಮಹಾ ಅರಣ್ಯದಲ್ಲಿ ನಡೆದು, ಕಾದೇಶ್ ಬರ್ನೇಯಕ್ಕೆ ಸೇರಿದೆವು.


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


ಕಾಡು, ಕಗ್ಗಾಡು, ಬೆಂಗಾಡು ಆಗಿವೆ ಅದರ ನಗರಗಳು. ಆ ದೇಶದೊಳು ಯಾರೂ ವಾಸಿಸರು, ಯಾವ ನರಪ್ರಾಣಿಯೂ ಹಾದುಹೋಗದು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ಆ ಜನರು ಸರ್ವೇಶ್ವರ ಸ್ವಾಮಿಯನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ.


ಈಜಿಪ್ಟಿನಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ಕಾಲ ಅರಣ್ಯದ ಮಾರ್ಗವಾಗಿ ನಿಮ್ಮನ್ನು ನಡೆಸಿ ಕರೆತಂದು, ಅಮೋರ್ಯದವರ ನಾಡನ್ನು ನಿಮಗೆ ದೊರಕಿಸಿಕೊಟ್ಟವನು ನಾನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು