Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:7 - ಕನ್ನಡ ಸತ್ಯವೇದವು C.L. Bible (BSI)

7 ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರತಂದು ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆನು; ಆದರೆ ನೀವು ಪ್ರವೇಶಿಸಿ ಆ ನನ್ನ ದೇಶವನ್ನು ಹೊಲೆಮಾಡಿ ನನ್ನ ಸ್ವಾಸ್ತ್ಯವನ್ನು ಅಸಹ್ಯಪಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನಾನು ನಿಮ್ಮನ್ನು ಅನೇಕ ಅಮೂಲ್ಯವಸ್ತುಗಳಿಂದ ಕೂಡಿದ ಫಲವತ್ತಾದ ಭೂಮಿಗೆ ಕರೆದುತಂದೆ. ಅಲ್ಲಿ ಬೆಳೆಯುವ ಫಲಗಳನ್ನು ತಿನ್ನಲಿ ಎಂಬ ಉದ್ದೇಶದಿಂದ ನಾನು ಕರೆದುತಂದೆ. ಆದರೆ ನೀವು ಬಂದು ನನ್ನ ಭೂಮಿಯನ್ನು ಹೊಲಸು ಮಾಡಿದಿರಿ. ನಾನು ಆ ಭೂಮಿಯನ್ನು ನಿಮಗೆ ಕೊಟ್ಟೆ, ಆದರೆ ನೀವು ಅದನ್ನು ಕೆಟ್ಟ ಸ್ಥಳವನ್ನಾಗಿ ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಸಾರವನ್ನೂ, ಮೇಲನ್ನೂ ತಿನ್ನುವ ಹಾಗೆ ಕರೆದುಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸೊತ್ತನ್ನು ಅಸಹ್ಯ ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:7
28 ತಿಳಿವುಗಳ ಹೋಲಿಕೆ  

ಮೊತ್ತ ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಇಮ್ಮಡಿ ಶಿಕ್ಷೆಯನ್ನು ಕೊಡುವೆನು. ಏಕೆಂದರೆ ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ನಾಡನ್ನು ಹೊಲಸುಮಾಡಿದ್ದಾರೆ. ಅಸಹ್ಯವಾದ ವಸ್ತುಗಳಿಂದ ಆ ನನ್ನ ಸ್ವಂತ ನಾಡನ್ನು ತುಂಬಿಸಿಬಿಟ್ಟಿದ್ದಾರೆ.”


ಮೋಶೆಗೆ, “ನೀವು ನಮ್ಮನ್ನು ಕಳಿಸಿದ ನಾಡಿಗೆ ಹೋಗಿದ್ದೆವು. ಅದು ಹಾಲು-ಜೇನು ಹರಿಯುವಂಥ ನಾಡು. ಅಲ್ಲಿನ ಹಣ್ಣುಹಂಪಲುಗಳು ಇಂಥವು.


“ನರಪುತ್ರನೇ, ಇಸ್ರಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು. ಅವರ ನಡತೆ ಮುಟ್ಟಿನ ಹೊಲಸಿನಂತೆ ನನಗೆ ಅಸಹ್ಯವಾಗಿತ್ತು.


ಕಲ್ಲುಮರಗಳಿಗೆ ಆರಾಧನೆಮಾಡಿ ವ್ಯಭಿಚಾರಿಣಿಯಾದಳು. ಇದೆಲ್ಲ ಲಘುವೆಂದು ಭಾವಿಸಿ ತನ್ನ ವೇಶ್ಯಾ ವರ್ತನೆಯಿಂದ ನಾಡನ್ನು ಅಪವಿತ್ರಪಡಿಸಿದಳು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಗಂಡನು ತ್ಯಜಿಸಿದವಳು, ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ, ಅವಳನ್ನು ಆ ಗಂಡನು ಮತ್ತೆ ಸೇರಿಸಿಕೊಳ್ಳುತ್ತಾನೆಯೆ? ಸೇರಿಸಿಕೊಂಡರೆ ಆ ನಾಡು ಕೆಟ್ಟು ಅಪವಿತ್ರವಾಗಿ ಹೋಗುವುದಿಲ್ಲವೇ? ಹೀಗಿರಲು ಓ ಇಸ್ರಯೇಲ್, ಬಹುಮಂದಿ ಮಿಂಡರೊಡನೆ ವೇಶ್ಯವಾಟಿಕೆ ನಡೆಸಿದ ನೀನು ನನ್ನ ಬಳಿಗೆ ಬರುವೆಯಾ?


ಎದ್ದು ತೊಲಗಿರಿ! ಇದು ನಿಮ್ಮ ನೆಮ್ಮದಿಯ ನೆಲೆಯಲ್ಲ. ನಿಮಗೆ ನಾಶವನ್ನು, ವಿಪರೀತ ನಾಶವನ್ನು ಉಂಟುಮಾಡುವ ಹೊಲಸು ಈ ನಾಡಿಗೆ ಅಂಟಿಕೊಂಡಿದೆ.


ನಾನು ಅವರಿಗೆ ‘ನಾಡುಗಳಲ್ಲೆಲ್ಲ ಶ್ರೀಮಂತವಾದ ನಾಡನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ನಾಡಿಗೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆ;


ವಶಮಾಡಿಕೊಂಡರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನು ಸಾರವತ್ತಾದ ಹೊಲಗಳನು, ಧಾನ್ಯ ತುಂಬಿದ ಮನೆಗಳನು, ತೋಡಿದ ಬಾವಿಗಳನು ದ್ರಾಕ್ಷೀತೋಟಗಳನು, ಎಣ್ಣೇಮರ ತೋಪುಗಳನು, ನಾನಾಫಲವೃಕ್ಷಗಳನು. ತಿಂದು ತೃಪ್ತರಾದರು, ಕೊಬ್ಬಿದರು, ನೀವಿತ್ತ ಸಮೃದ್ಧಿಯಲಿ ನಲಿದಾಡಿದರು.


ಅವನ ಶವವನ್ನು ನೀವು ರಾತ್ರಿಯೆಲ್ಲಾ ಆ ಮರದ ಮೇಲೆ ಇರಿಸಬಾರದು; ಅದನ್ನು ಅದೇ ದಿನ ನೆಲದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ಹೀಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡನ್ನು ನೀವೇ ಅಪವಿತ್ರಗೊಳಿಸಬಾರದು.


ಸರ್ವೇಶ್ವರನ ದೃಷ್ಟಿಯಲ್ಲಿ ಯಾವುದು ನ್ಯಾಯವೋ, ಯೋಗ್ಯವೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭ ಉಂಟಾಗುವುದು ಮತ್ತು ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ಕಣ್ಣೆತ್ತಿ ಬೋಳು ಬೆಟ್ಟಗಳನ್ನು ನೋಡು, ಯಾವುದರಲ್ಲಿ ತಾನೆ ನೀನು ವೇಶ್ಯೆಯಾಗಿ ವರ್ತಿಸಲಿಲ್ಲ? ಅರಬೀಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುಹಾಕುತ್ತಾ ಕುಳಿತಿದ್ದೆ. ನಿನ್ನ ವೇಶ್ಯೆತನದಿಂದಲೂ ನಿನ್ನ ಕೆಟ್ಟತನದಿಂದಲೂ ನಾಡನ್ನು ಅಪವಿತ್ರಮಾಡಿರುವೆ.


ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.


ಇಸ್ರಯೇಲ್ ವಂಶವೂ ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿದೆ. ಹೌದು, ಇಸ್ರಯೇಲ್ ವಂಶದವರು ತಮ್ಮ ಕೈಕೆಲಸದ ವಿಗ್ರಹಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಿದ ಮೇಲೆ, ಅವರು ಎತ್ತರವಾದ ಎಲ್ಲ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲ ಮರಗಳನ್ನೂ ನೋಡಿ, ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಒಪ್ಪಿಸುತ್ತಿದ್ದರು.


ಅವರು ಸರ್ವೇಶ್ವರಸ್ವಾಮಿಯ ನಾಡಿನಲ್ಲಿ ವಾಸಮಾಡುವುದಿಲ್ಲ. ಎಫ್ರಯಿಮರು ಈಜಿಪ್ಟಿಗೆ ಹಿಂದಿರುಗುವರು. ಅಸ್ಸೀರಿಯದಲ್ಲಿ ಅವರು ತಿನ್ನುವ ಆಹಾರ ಹೊಲಸಾಗುವುದು.


ಇಸ್ರಯೇಲರು ಮಾತ್ರ ಸ್ವಜನರಾದರು ಸರ್ವೇಶ್ವರನಿಗೆ, ಸ್ವಕೀಯ ಪ್ರಜೆಯಾದರು ಆ ಯಕೋಬ ವಂಶಜರು ಆತನಿಗೆ.


ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


“ನನ್ನ ಪ್ರಜೆಯಾದ ಈಜಿಪ್ಟ್, ನನ್ನ ಕೈಚಳಕದ ಅಸ್ಸೀರಿಯಾ, ನನ್ನ ಸೊತ್ತಾದ ಇಸ್ರಯೇಲ್ ನಿಮಗೆ ಶುಭಮಂಗಳ,” ಎಂದು ಅವುಗಳನ್ನು ಸರ್ವಶಕ್ತ ಸರ್ವೇಶ್ವರ ಸ್ವಾಮಿ ಆಶೀರ್ವದಿಸುವರು.


ಆದ್ದರಿಂದ ನಾನು ‘ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು’ ಎಂದು ಮರುಭೂಮಿಯಲ್ಲಿ ಪ್ರಮಾಣಮಾಡಿ ಹೇಳಿದೆ.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ. ‘ನೀನು ನನ್ನನ್ನು ಮರೆತು, ನನಗೆ ಬೆನ್ನುಮಾಡಿದ್ದರಿಂದ ನಿನ್ನ ಲಂಪಟತನದ ಮತ್ತು ಸೂಳೆತನದ ಫಲವನ್ನು ಅನುಭವಿಸಬೇಕು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು