Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:1 - ಕನ್ನಡ ಸತ್ಯವೇದವು C.L. Bible (BSI)

1 ಯೆರೆಮೀಯ ಈ ಪ್ರವಾದನೆ ಮಾಡುವುದನ್ನು ಇಮ್ಮೇರನ ಮಗ ಹಾಗು ಸರ್ವೇಶ್ವರನ ಆಲಯದ ಮುಖ್ಯಾಧಿಕಾರಿಯಾದ ಯಾಜಕ ಪಷ್ಹೂರನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆರೆಮೀಯನು ಈ ಪ್ರವಾದನೆ ಮಾಡುವುದನ್ನು ಯಾಜಕನಾದ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆರೆಮೀಯನು ಈ ಪ್ರವಾದನೆ ಮಾಡುವದನ್ನು ಯಾಜಕ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪಷ್ಹೂರನೆಂಬುವನು ಯಾಜಕನಾಗಿದ್ದನು. ಅವನು ಯೆಹೋವನ ಆಲಯದ ಮುಖ್ಯಾಧಿಕಾರಿಯಾಗಿದ್ದನು. ಪಷ್ಹೂರನು ಇಮ್ಮೇರನ ಮಗನು. ಯೆಹೋವನ ಆಲಯದ ಪ್ರಾಕಾರದಲ್ಲಿ ಯೆರೆಮೀಯನು ಮಾಡಿದ ಪ್ರವಾದನೆಯನ್ನು ಪಷ್ಹೂರನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆರೆಮೀಯನು ಈ ಮಾತುಗಳನ್ನು ಪ್ರವಾದಿಸಲಾಗಿ, ಯೆಹೋವ ದೇವರ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗ ಪಷ್ಹೂರನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:1
11 ತಿಳಿವುಗಳ ಹೋಲಿಕೆ  

ಹದಿನೈದನೆಯದು ಬಿಲ್ಗನಿಗೆ; ಹದಿನಾರನೆಯದು ಇಮ್ಮೇರನಿಗೆ;


ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಪ್ರಧಾನ ಯಾಜಕ ಸೆರಾಯನು, ಮುಖ್ಯ ಯಾಜಕ ಚೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.


ದೇವಾಲಯದ ದಳಪತಿ ಮತ್ತು ಮುಖ್ಯಯಾಜಕರು ಇದನ್ನು ಕೇಳಿ, ಇದರಿಂದೇನಾಗುವುದೋ ಎಂದು ಕಳವಳಗೊಂಡರು.


ಪೇತ್ರ ಮತ್ತು ಯೊವಾನ್ನ ಜನರನ್ನು ಉದ್ದೇಶಿಸಿ ಇನ್ನೂ ಮಾತನಾಡುತ್ತಿದ್ದರು. ಆಗ ಯಾಜಕರೂ ಮಹಾದೇವಾಲಯದ ದಳಪತಿಗಳೂ ಸದ್ದುಕಾಯರೂ ಅಲ್ಲಿಗೆ ಬಂದರು.


ಅವನ ಪದಾಧಿಕಾರಿಗಳು ಕೂಡ ಜನರಿಗೂ ಯಾಜಕರಿಗೂ ಲೇವಿಯರಿಗೂ ಬಲಿಪಶುಗಳನ್ನು ಸಂತೋಷವಾಗಿ ದಾನಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬುವರು ಯಾಜಕರಿಗೆ ಎರಡು ಸಾವಿರದ ಆರುನೂರು ಪಾಸ್ಕದ ಕುರಿಮರಿಗಳನ್ನೂ ಮುನ್ನೂರು ಹೋರಿಗಳನ್ನೂ ಕೊಟ್ಟರು.


ಪಷ್ಹೂರನೇ ಕೇಳು, ನೀನು ನಿನ್ನ ಮನೆಯ ಎಲ್ಲರೊಡನೆ ಸೆರೆಗೆ ಹೋಗುವೆ. ನೀನು ಮತ್ತು ನಿನ್ನ ಸುಳ್ಳು ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಗೆಳೆಯರೂ ಬಾಬಿಲೋನಿಗೆ ಸೇರಿ ಅಲ್ಲೆ ಸತ್ತು ಮಣ್ಣಾಗುವಿರಿ’.”


‘ಸರ್ವೇಶ್ವರ ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ದೇವಾಲಯದ ಯಾಜಕನನ್ನಾಗಿ ನೇಮಿಸಿದ್ದಾರೆ. ಯಾವನಾದರು ಮೈದುಂಬಿ ಪ್ರವಾದಿಯಾಗಿ ನಟಿಸಿದ್ದೇ ಆದರೆ ಅವನನ್ನು ಕೊಳಕ್ಕೆಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ನಿನಗೆ ವಹಿಸಿದ್ದಾರೆ.


ಆ ಅಧಿಕಾರಿಗಳು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು