Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:13 - ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನನ್ನು ಸ್ತುತಿಸಿರಿ, ಸರ್ವೇಶ್ವರನನ್ನು ಸಂಕೀರ್ತಿಸಿರಿ. ಅವರು ಬಡವರ ಪ್ರಾಣವನ್ನು ಬಿಡಿಸಿದ್ದಾರೆ ಕೆಡುಕರ ಕೈಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ; ಆತನು ಕೆಡುಕರ ಕೈಯಿಂದ ದೀನನ ಪ್ರಾಣವನ್ನು ರಕ್ಷಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ; ಆತನು ಕೆಡುಕರ ಕೈಯಿಂದ ದೀನನ ಪ್ರಾಣವನ್ನು ರಕ್ಷಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ. ಆತನು ಬಡಜನರ ಪ್ರಾಣಗಳನ್ನು ಉಳಿಸುತ್ತಾನೆ. ಆತನು ಅವರನ್ನು ದುಷ್ಟರ ದೌರ್ಜನ್ಯದಿಂದ ರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರಿಗೆ ಹಾಡಿರಿ, ಯೆಹೋವ ದೇವರನ್ನು ಸ್ತುತಿಸಿರಿ. ಏಕೆಂದರೆ, ಅವರು ಬಡವನ ಪ್ರಾಣವನ್ನು ಕೇಡು ಮಾಡುವವರ ಕೈಯಿಂದ ತಪ್ಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:13
9 ತಿಳಿವುಗಳ ಹೋಲಿಕೆ  

ದುರ್ಗವಾಗಿರುವೆ ನೀನು ದೀನದಲಿತರಿಗೆ, ಸುರಕ್ಷಿತ ಕೋಟೆಯಾಗಿರುವೆ ದಟ್ಟದರಿದ್ರರಿಗೆ, ನೆರಳಾಗಿರುವೆ ಬಿಸಿಲೊಳು ಬೆಂದವರಿಗೆ. ಕ್ರೂರಿಗಳ ಹೊಡೆತ ಚಳಿಗಾಲದ ಚಂಡಮಾರುತವಾಗಿರೆ, ಬಿರುಗಾಳಿಯ ಆ ಬಡಿತಕೆ ನೀನಾದೆ ಆಸರೆ.


ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು I ಸೆರೆಯಲ್ಲಿಹ ತನ್ನವರನು ತಿರಸ್ಕರಿಸನು II


ದೀನದಲಿತರನಾತ ಉದ್ಧರಿಸಲಿ I ಬಡಬಗ್ಗರಿಗೆ ನ್ಯಾಯ ದೊರಕಿಸಲಿ I ಪ್ರಜಾಹಿಂಸಕರನು ಸದೆಬಡಿಯಲಿ II


ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು I ಸರ್ವಾಪತ್ತಿನಿಂದವನು ಮುಕ್ತಗೊಂಡನು II


ಇದು ಸರ್ವೇಶ್ವರನಾದ ನನ್ನ ಮಾತು. ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಕ್ರೂರಿಗಳ ಕೈಯಿಂದ ರಕ್ಷಿಸುವೆನು.”


ಸರ್ವೇಶ್ವರ ಹೀಗೆನ್ನುತ್ತಾರೆ: “ಯಕೋಬನನ್ನು ಕುರಿತು ಹರ್ಷಧ್ವನಿಗೈಯಿರಿ ಜನಾಂಗಗಳಾ ಶಿರೋಮಣಿಗೆ ಜೈಕಾರಮಾಡಿರಿ. ‘ಸರ್ವೇಶ್ವರ ಆಳಿದುಳಿದಾ ಇಸ್ರಯೇಲರನ್ನು ರಕ್ಷಿಸಿಹನು’ ಎಂದು ಘೋಷಿಸುತ್ತಾ ಸ್ತುತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು