Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:16 - ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರನು ಕನಿಕರಿಸದೆ ಕೆಡವಿಬಿಟ್ಟ ಪಟ್ಟಣದ ಗತಿ ಅವನಿಗಾಗಲಿ ! ಬೆಳಿಗ್ಗೆ ಕಿರುಚಾಟ, ನಡುಹಗಲಲ್ಲಿ ಕೂಗಾಟ ಅವನ ಕಿವಿಗೆ ಬೀಳಲಿ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಮುಂಜಾನೆಯಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ; ಪ್ರಾತಃಕಾಲದಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ನಗರಗಳ ಗತಿಯು ಅವನಿಗೆ ಬರಲಿ. ಬೆಳಿಗ್ಗೆ ಯುದ್ಧದ ಕೂಗಾಟವೂ, ಮಧ್ಯಾಹ್ನದಲ್ಲಿ ಯುದ್ಧದ ಕಿರುಚಾಟವೂ ಅವನ ಕಿವಿಗೆ ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ಮನುಷ್ಯನು, ಯೆಹೋವ ದೇವರು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಅವನು ಬೆಳಿಗ್ಗೆ ಕೂಗನ್ನೂ, ಮಧ್ಯಾಹ್ನದಲ್ಲಿ ಆರ್ಭಟವನ್ನೂ ಕೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:16
25 ತಿಳಿವುಗಳ ಹೋಲಿಕೆ  

ಕಳ್ಳಕಾಕರ ಗುಂಪು ಫಕ್ಕನೆ ಅವರ ಮೇಲೆ ಬೀಳಲಿ. ಅವರ ಮನೆಮಠಗಳಿಂದ ಕಿರಿಚಾಟ ಕೇಳಿಬರಲಿ. ಅವರು ನನ್ನನ್ನು ಕೆಡವಲು ಗುಂಡಿಯನ್ನು ತೋಡಿದ್ದಾರೆ. ನನ್ನ ಕಾಲುಗಳಿಗೆ ಉರುಲನ್ನು ಗುಟ್ಟಾಗಿ ಒಡ್ಡಿದ್ದಾರೆ.


ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.


ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಕೂಡ ದೇವರು ಬಿಡಲಿಲ್ಲ. ದುರ್ಜನರಿಗೆ ಬರಲಿರುವ ದುರ್ಗತಿ ಏನೆಂದು ಸೂಚಿಸುವುದಕ್ಕಾಗಿ ಆ ಪಟ್ಟಣಗಳನ್ನು ಸುಟ್ಟು ಭಸ್ಮಮಾಡಿದರು.


ಲೋತನು ಸೊದೋಮ್ ಊರನ್ನು ಬಿಟ್ಟು ತೆರಳಿದ ದಿನದಂದೇ ಆಕಾಶದಿಂದ ಅಗ್ನಿ ಮತ್ತು ಗಂಧಕದ ಮಳೆ ಸುರಿದು ಎಲ್ಲರನ್ನು ನಾಶಮಾಡಿತು.


ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”


ಕೋಟೆಕೊತ್ತಲಗಳನ್ನು, ಘನಗೋಪುರಗಳನ್ನು ಆಕ್ರಮಿಸಲು ಯುದ್ಧಕಹಳೆಯು ಮೊಳಗುವ ದಿನ, ಯುದ್ಧಘೋಷಣೆಗಳನ್ನು ಆರ್ಭಟಿಸುವ ದಿನ.


ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.


ನಗರವನ್ನು ಪ್ರವೇಶಿಸಿ ಒಂದು ದಿನದ ಪ್ರಯಾಣಮಾಡಿದ ನಂತರ ಯೋನನು ಸ್ವಾಮಿಯ ಸಂದೇಶವನ್ನು ಸಾರುತ್ತಾ, “ಜನರೇ, ಕೇಳಿ: ನಿಮ್ಮ ನಗರ ನಲವತ್ತು ದಿನಗಳಲ್ಲಿ ನಾಶವಾಗುವುದು,” ಎಂದನು.


“ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


ಆದಕಾರಣ ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಕೆರಿಯೋತಿನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು. ಸೈನಿಕರ ಆರ್ಭಟ, ರಣಕಹಳೆಗಳ ಗರ್ಜನೆ, ಯುದ್ಧದ ಕೋಲಾಹಲ - ಇವುಗಳ ಮಧ್ಯೆ ಮೋವಾಬಿನ ಜನರು ಮಡಿಯುವರು.


ಆದಕಾರಣ ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು. ಆಗ ಯುದ್ಧಾರ್ಭಟವೂ ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಎಂತಲೇ ನಿನ್ನ ಜಾತಿಜನಾಂಗಗಳ ವಿರುದ್ಧ ಯುದ್ಧ ಘೋಷಣೆ ಮೊಳಗುವುದು. ಕಾಳಗದ ದಿನದಲ್ಲಿ ಕೋಟೆಕೊತ್ತಲಗಳು ಸೂರೆಯಾಗುವುವು. ಶಲ್ಮಾನ ರಾಜನು ಬೇತ್‍ಅರ್ಬೇಲ್ ಪಟ್ಟಣವನ್ನು ನೆಲಸಮಮಾಡಿದಂತೆ ಆಗುವುದು. ತಾಯಿ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಸಾಯಿಸಿದಂತೆ ಇದೆಲ್ಲ ನಡೆಯುವುದು.


ಜೆರುಸಲೇಮ್ ಗುರುತಿನ ಬಾಣ ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ಬಾಯಿತೆರೆದು ಸಂಹಾರ ಧ್ವನಿಮಾಡಿ, ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ದಿಬ್ಬಹಾಕಿ, ಒಡ್ಡು ಕಟ್ಟಬೇಕೆಂಬ ಸೂಚನೆ ಅದರಿಂದ ಬಂದಿತು.


ಇದೀಗಲೇ ನೀವು ನಿಮ್ಮ ಮಾರ್ಗಗಳನ್ನೂ ನಡತೆಗಳನ್ನೂ ತಿದ್ದುಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡಿ. ಆಗ ನಿಮಗೆ ತಿಳಿಸಿದ ಕೇಡು ಒದಗದಂತೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.


ದಂಡನೆಗೆ ನಿರ್ಣಯಿಸಲಾದ ಆ ಜನಾಂಗದವರು ತಮ್ಮ ಕೆಟ್ಟತನವನ್ನು ಬಿಟ್ಟು ಹಿಂತಿರುಗಿದ್ದೇ ಆದರೆ ನಾನು ಬರಮಾಡಬೇಕೆಂದಿದ್ದ ಆ ವಿಪತ್ತನ್ನು ನಾನು ಮನಮರುಗಿ ಬರಮಾಡದಿರುವೆನು.


ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?


ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”


‘ಸೊದೋಮ್’ ಊರು ಹಾಳಾಯಿತು ಕ್ಷಣಮಾತ್ರದಲ್ಲೆ ಅದರ ಮೇಲೆ ಯಾರೂ ಕೈಮಾಡದೆಯೇ. ಅದಕ್ಕಿಂತಲೂ ಹೆಚ್ಚಾಯಿತಲ್ಲಾ ನನ್ನ ಜನರ ಅಧರ್ಮ!


ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ.


“ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ನಾಡಿಗೆ ಸರ್ವೇಶ್ವರ ಉಂಟುಮಾಡಿದ ರೋಗೋಪದ್ರವಗಳನ್ನು ಕಂಡು ಆಶ್ಚರ್ಯಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು