Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:4 - ಕನ್ನಡ ಸತ್ಯವೇದವು C.L. Bible (BSI)

4 ಏಕೆಂದರೆ ಸರ್ವೇಶ್ವರನೆ ಹೇಳಿರುವ ಮಾತಿವು - ‘ಇಗೋ, ನಾನು ನಿನ್ನನ್ನು ನಿನಗೂ ನಿನ್ನ ಎಲ್ಲ ಸ್ನೇಹಿತರಿಗೂ ಭಯಾನಕನನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು. ಅದನ್ನು ನೀನು ಕಣ್ಣಾರೆ ಕಾಣುವೆ. ನಾನು ಜುದೇಯರನೆಲ್ಲ ಬಾಬಿಲೋನಿನ ಅರಸನ ಕೈಗೊಪ್ಪಿಸುವೆನು. ಅವನು ಇವರನ್ನು ಬಾಬಿಲೋನಿಗೆ ಸೆರೆಯಾಗಿ ಕೊಂಡೊಯ್ದು ಕತ್ತಿಗೆ ತುತ್ತಾಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಏಕಂದರೆ ಯೆಹೋವನು - ಇಗೋ, ನಾನು ನಿನ್ನನ್ನು ನಿನಗೂ ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗೆ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ಅದನ್ನು ಕಣ್ಣಾರೆ ಕಾಣುವಿ; ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲು ಪಡುವಂತೆ ಮಾಡುತ್ತೇನೆ. ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು. ನಿನ್ನ ಕಣ್ಣುಗಳು ಅದನ್ನು ನೋಡುವುವು. ಯೆಹೂದ್ಯರನ್ನೆಲ್ಲಾ ನಾನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅವರನ್ನು ಬಾಬಿಲೋನಿಗೆ ಒಯ್ದು ಖಡ್ಗದಿಂದ ಕೊಲ್ಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:4
22 ತಿಳಿವುಗಳ ಹೋಲಿಕೆ  

“ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ತಮ್ಮ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗ ಅಹಾಬ ಮತ್ತು ಮಾಸೇಯನ ಮಗ ಚಿದ್ಕೀಯ ಇವರ ವಿಷಯವಾಗಿ ಹೀಗೆನ್ನುತ್ತಾರೆ: ‘ಇಗೋ ನಾನು ಇವರನ್ನು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈಗೆ ಬಿಡುವೆನು. ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಅರಸನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೆ ಬಿಟ್ಟುಹೋಗಬೇಕಾಯಿತು.


“ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ಈ ನಗರದವರೂ ಇದರ ಸುತ್ತಮುತ್ತಿನ ಊರಿನವರೂ ನನ್ನ ಮಾತನ್ನು ಕೇಳದೆಹೋದರು. ತಮ್ಮ ಮನಸ್ಸನ್ನು ಕಲ್ಲಾಗಿಸಿಕೊಂಡರು. ಆದುದರಿಂದ ನಾನು ಈ ನಗರಕ್ಕೆ ಶಾಪ ಹಾಕಿದ ಕೇಡನ್ನೆಲ್ಲಾ ಅವರಿಗೆ ಬರಮಾಡುವೆನು,” ಎಂದು ಎಲ್ಲ ಜನರಿಗೆ ಸಾರಿದನು.


ಊರ ಹೊರಗೆ ಹೋಗುವಂತಿಲ್ಲ, ದಾರಿಯಲ್ಲಿ ನಡೆಯುವಂತಿಲ್ಲ. ಸುತ್ತಮುತ್ತಲೂ ಶತ್ರುವಿನ ಕತ್ತಿ, ಎಲ್ಲೆಲ್ಲೂ ದಿಗಿಲು ಎಂದರೆ ದಿಗಿಲು!”


ಕ್ಷಣ ಮಾತ್ರದಲಿ ಅಳಿದು ಹಾಳಾಗುವರು I ಭೀಕರವಾಗಿ ನಿರ್ಮೂಲವಾಗುವರು II


ಇವನ ಇಬ್ಬರು ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿ, ಅವನಿಗೆ ಬೇಡಿಹಾಕಿ ಎರಡು ಕಣ್ಣುಗಳನ್ನೂ ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ನನ್ನ ಸಾನ್ನಿಧ್ಯ ಸೇವೆಯಿಂದ ನಿಮ್ಮಲ್ಲಿ ಒಬ್ಬನನ್ನು ಉಳಿಸಿ ಮಿಕ್ಕವರನ್ನು ತೆಗೆದುಹಾಕುವೆನು. ಉಳಿಸಲಾದವನು ಕೂಡ ಕುರುಡನಾಗಿ ನಿನ್ನ ವ್ಯಥೆಗೆ ಕಾರಣನಾಗುವನು. ನಿನ್ನ ಸಂತಾನದವರೆಲ್ಲರು ಕತ್ತಿಯಿಂದ ಸಾಯುವರು.


ಈ ದುಷ್ಟಜನರು ನನ್ನ ಮಾತುಗಳನ್ನು ಕೇಳಲೊಲ್ಲರು. ತಮ್ಮ ಹೃದಯದ ಒರಟುತನದಂತೆ ನಡೆದುಬರುತ್ತಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸಿ, ಪೂಜಿಸುತ್ತಿದ್ದಾರೆ. ಇವರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.


ದಕ್ಷಿಣ ನಾಡಿನ ನಗರಗಳು ಮುತ್ತಿಗೆಗೆ ತುತ್ತಾಗಿವೆ. ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಜುದೇಯವೆಲ್ಲ ಸೆರೆಹೋಗಿದೆ; ಸಂಪೂರ್ಣವಾಗಿ ಸೆರೆಯಾಗಿದೆ’.”


ಪಷ್ಹೂರನೇ ಕೇಳು, ನೀನು ನಿನ್ನ ಮನೆಯ ಎಲ್ಲರೊಡನೆ ಸೆರೆಗೆ ಹೋಗುವೆ. ನೀನು ಮತ್ತು ನಿನ್ನ ಸುಳ್ಳು ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಗೆಳೆಯರೂ ಬಾಬಿಲೋನಿಗೆ ಸೇರಿ ಅಲ್ಲೆ ಸತ್ತು ಮಣ್ಣಾಗುವಿರಿ’.”


“ಆದರೆ, ನನ್ನ ಕಣ್ಣಿಗೆ ಕಾಣುತ್ತಿರುವುದೇನು? ಅವರು ಓಡುತ್ತಿರುವರು ನೋಡು, ಧೈರ್ಯಗೆಟ್ಟು, ಬೆನ್ನುಗೊಟ್ಟು. ಅವರ ಶೂರರು ಹಿಂದಿರುಗದೆ ಓಡುತ್ತಿರುವರು ಪೆಟ್ಟುತಿಂದು, ದಿಗಿಲು ಕವಿದಿದೆ ಸುತ್ತ ಮುತ್ತಲು,” ಸರ್ವೇಶ್ವರನ ವಾಣಿ ಇದು.


ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಮಹಾಯಾಜಕ ಸೆರಾಯನು, ಎರಡನೇ ದರ್ಜೆಯ ಯಾಜಕ ಜೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು