Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:5 - ಕನ್ನಡ ಸತ್ಯವೇದವು C.L. Bible (BSI)

5 ಅಷ್ಟು ಮಾತ್ರವಲ್ಲ, ಈ ನಗರದ ಎಲ್ಲ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಹಾಗು ಜುದೇಯದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಇವರ ಶತ್ರುಗಳ ಕೈವಶಮಾಡುವೆನು. ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ, ಆದಾಯವನ್ನೂ ಮತ್ತು ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿ, ನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮತ್ತು ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬೆಲಿಗೆ ತೆಗೆದುಕೊಂಡು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸಂಪತ್ತನ್ನು ಸಂಗ್ರಹಿಸಿ ಸಿರಿವಂತರಾಗಲು ಜೆರುಸಲೇಮಿನ ಜನರು ಬಹಳ ಕಷ್ಟಪಟ್ಟು ದುಡಿದರು. ಆದರೆ ನಾನು ಅದೆಲ್ಲವನ್ನು ಅವರ ವೈರಿಗಳಿಗೆ ಒಪ್ಪಿಸುವೆನು. ಜೆರುಸಲೇಮಿನ ರಾಜನ ಬಳಿ ಅನೇಕ ನಿಧಿನಿಕ್ಷೇಪಗಳಿವೆ. ಆದರೆ ನಾನು ಆ ನಿಧಿನಿಕ್ಷೇಪಗಳನ್ನೆಲ್ಲಾ ವೈರಿಗೆ ಒಪ್ಪಿಸುತ್ತೇನೆ. ವೈರಿಯು ಅವುಗಳನ್ನು ಬಾಬಿಲೋನ್ ದೇಶಕ್ಕೆ ತೆಗೆದುಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ, ಅದರ ಎಲ್ಲಾ ನಿಧಿನಿಕ್ಷೇಪಗಳನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ, ಯೆಹೂದದ ಅರಸರ ಎಲ್ಲಾ ಭಂಡಾರಗಳನ್ನೂ ಅವರ ಶತ್ರುಗಳ ಕೈಗೆ ಒಪ್ಪಿಸುವೆನು. ಅವರು ಅವುಗಳನ್ನು ಸುಲಿದುಕೊಂಡು, ತೆಗೆದುಕೊಂಡು ಬಾಬಿಲೋನಿಗೆ ಒಯ್ಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:5
24 ತಿಳಿವುಗಳ ಹೋಲಿಕೆ  

ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ. ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ಸರ್ವೇಶ್ವರ : “ನಾಡಿನಾದ್ಯಂತ ನನ್ನ ಜನರು ಮಾಡಿದ ಎಲ್ಲ ಪಾಪಗಳ ನಿಮಿತ್ತ ಅವರ ಸೊತ್ತು ಸಂಪತ್ತನ್ನು ಪುಕ್ಕಟೆಯಾಗಿ ಕೊಳ್ಳೆಗಾರರ ಪಾಲಾಗಿಸುವೆನು.


ದೋಚಿಕೊಂಡನು ದ್ರೋಹಿ ಆಕೆಯ ಆಸ್ತಿಯನ್ನು ಕೈಚಾಚಿ. 'ಸೇರಿಸಬಾರದು ಸಭೆಗೆ ಮ್ಲೇಚ್ಛರನ್ನು’ ಎಂಬುದು ದೇವನ ಆಣತಿ. ಆದರಿಗೋ ಅಂಥವರೇ ಪವಿತ್ರಾಲಯ ಪ್ರವೇಶಿಸುವ ದುರ್ಗತಿ !


ನಿಮ್ಮ ಪ್ರಾಂತ್ಯಗಳಲ್ಲೆಲ್ಲ ನೀವು ಮಾಡಿದ ಪಾಪದ ನಿಮಿತ್ತ ನಾನು ನಿಮ್ಮ ಎಲ್ಲ ಸೊತ್ತುಸಂಪತ್ತುಗಳನ್ನು ಮತ್ತು ಪೂಜಾಸ್ಥಳಗಳನ್ನು ಸೂರೆಗೆ ಈಡುಮಾಡುವೆನು.


ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಮೌಲ್ಯವಸ್ತುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಸಹೋದರನಾದ ಚಿದ್ಕೀಯನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು.


ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು . ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.


ವೈರಿಗಳೂ ವಿರೋಧಿಗಳೂ ಜೆರುಸಲೇಮಿನ ಬಾಗಿಲೊಳಗೆ ಕಾಲಿಡುವರೆಂದು ವಿಶ್ವದ ರಾಜರಾಗಲಿ, ನಿವಾಸಿಗಳಾಗಲಿ ನಂಬಿರಲಿಲ್ಲ ಯಾರೂ.


ಜೆರುಸಲೇಮ್ ದಿಕ್ಕುಪಾಲಾಗಿ ಕಷ್ಟಪಡುವಾಗ ನೆನಸಿಕೊಳ್ಳುತ್ತಾಳೆ ತನ್ನ ಪ್ರಾಚೀನ ವೈಭವಗಳನ್ನೆಲ್ಲಾ. ತನ್ನ ಜನತೆ ವೈರಿಗಳ ವಶವಾದಾಗ ಆಕೆಗೆ ಸಿಗಲಿಲ್ಲ ಯಾರೊಬ್ಬರ ಬೆಂಬಲ. ಆಕೆಯಾ ಹೀನಸ್ಥಿತಿ ನೋಡಿ ವೈರಿಗಳು ಮಾಡಿದರು ಪರಿಹಾಸ್ಯ.


ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬಾಬಿಲೋನಿಯದವರು ಬೆಂಕಿಯಿಂದ ಸುಟ್ಟು ಜೆರುಸಲೇಮಿನ ಸುತ್ತಣವಿದ್ದ ಗೋಡೆಗಳನ್ನು ಕೆಡವಿದರು.


ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿನದಲ್ಲಿ ನಗರದ ಪೌಳಿಗೋಡೆ ಒಡಕುಬಿದ್ದು ಜೆರುಸಲೇಮ್ ಶತ್ರುವಶವಾಯಿತು.


ನಾಡಿನ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಕೊಳ್ಳೆಗಾರರು ಕಾಡುಗುಡ್ಡೆಗಳ ಮೇಲೆಲ್ಲ ಕಂಡುಬಂದಿದ್ದಾರೆ. ಕಬಳಿಸಿಬಿಡುವುದು ನನ್ನ ಖಡ್ಗ ಯಾರಿಗು ನೆಮ್ಮದಿಯಿಲ್ಲದ ಹಾಗೆ.


ನಾಶನದ ಮೇಲೆ ನಾಶನದ ಸುದ್ದಿ, ನಾಡೆಲ್ಲ ಕಾಡಾಯಿತು. ದಿಢೀರೆಂದು ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ತುಂಡುತುಂಡಾದವು !


ನಾವು ಚಿಕ್ಕಂದಿನಿಂದ ನೋಡಿರುವಂತೆ ನಮ್ಮ ಪಿತೃಗಳು ದುಡಿದದ್ದನ್ನೂ ಅವರ ದನಕುರಿಗಳನ್ನೂ ಅವರ ಗಂಡುಹೆಣ್ಣು ಮಕ್ಕಳನ್ನೂ ಬಾಳ್ ದೇವತೆ ಕಬಳಿಸುತ್ತಾ ಬಂದಿದೆ.


ನಿನ್ನ ಪೂರ್ವಜರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಕೂಡಿಸಿಟ್ಟ ಎಲ್ಲವನ್ನು ಬಾಬಿಲೋನಿಯಾಗೆ ಕೊಂಡೊಯ್ಯುವ ದಿನ ಬರುವುದು; ಇಲ್ಲಿ ಏನೂ ಉಳಿಯುವುದಿಲ್ಲ.


“ಇಗೋ, ಮುತ್ತಿಗೆಯ ದಿಬ್ಬಗಳು! ನಗರವನ್ನು ಆಕ್ರಮಿಸಲು ಬಂದುಬಿಟ್ಟಿದ್ದಾರೆ. ಖಡ್ಗ-ಕ್ಷಾಮ-ವ್ಯಾಧಿಗಳಿಂದ ನಗರವು ವಿರೋಧಿಗಳಾದ ಬಾಬಿಲೋನಿಯರ ಕೈ ಹಿಡಿತಕ್ಕೆ ಸಿಕ್ಕಿಹೋಗಿದೆ. ನೀವು ನುಡಿದಂತೆ ನೆರವೇರಿದೆ. ನಿಮ್ಮ ಕಣ್ಣಿಗೆ ಎಲ್ಲ ಬಟ್ಟಬಯಲಾಗಿದೆ.


ಎಫ್ರಯಿಮ್ ಕಳೆಗಳ ನಡುವೆ ಸೊಂಪಾಗಿ ಬೆಳೆದ ಜೊಂಡಿನಂತಿದೆ. ಆದರೆ ಸರ್ವೇಶ್ವರ ಮರುಭೂಮಿಯಿಂದ ಮೂಡಣಗಾಳಿ ಬೀಸುವಂತೆ ಮಾಡುವರು. ಅದರ ಬುಗ್ಗೆ ಬತ್ತಿಹೋಗುವುದು. ಅದರ ಒರತೆ ಒಣಗಿಹೋಗುವುದು. ಅದರ ಸಿರಿಸಂಪತ್ತಿನ ನಿಧಿಯನ್ನು ಶತ್ರುಗಳು ಸೂರೆಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು