Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:11 - ಕನ್ನಡ ಸತ್ಯವೇದವು C.L. Bible (BSI)

11 “ಜುದೇಯದ ಅರಸನ ಮನೆತನದ ವಿಷಯವಾಗಿ ಸರ್ವೇಶ್ವರ ಹೇಳಿರುವ ಈ ಮಾತನ್ನು ಗಮನಿಸಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೂದದ ಅರಸನ ಮನೆತನದ ವಿಷಯವಾಗಿ ಯೆಹೋವನು ಹೇಳಿರುವ ಈ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೂದದ ಅರಸನ ಮನೆತನದ ವಿಷಯವಾಗಿ ಯೆಹೋವನು ಹೇಳಿರುವ ಈ ಮಾತನ್ನು ಕೇಳಿರಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಯೆಹೂದದ ರಾಜಮನೆತನದವರಿಗೆ ಈ ವಿಷಯಗಳನ್ನು ತಿಳಿಸಿರಿ: ‘ಯೆಹೋವನ ಸಂದೇಶವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು: ‘ಯೆಹೋವ ದೇವರ ವಾಕ್ಯವನ್ನು ಕೇಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:11
6 ತಿಳಿವುಗಳ ಹೋಲಿಕೆ  

‘ಈ ಬಾಗಿಲುಗಳಲ್ಲಿ ಸೇರುವ ಜುದೇಯದ ಅರಸರೇ, ಎಲ್ಲ ಯೆಹೂದ್ಯರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಕೇಳಿರಿ.


ಆಗ ನಾನು ಇಂತೆಂದೆನು: “ಯಕೋಬ ವಂಶದ ಮುಖಂಡರೇ, ಇಸ್ರಯೇಲ್ ವಂಶದ ಅಧಿಪತಿಗಳೇ, ಕಿವಿಗೊಟ್ಟು ಕೇಳಿರಿ. ನ್ಯಾಯನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೆ?


ಸರ್ವೇಶ್ವರ ನನಗೆ ಹೀಗೆಂದರು : “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ.


‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.


ಸರ್ವೇಶ್ವರ ಸ್ವಾಮಿ ನನಗೆ ಹೀಗೆ ಎಂದು ಆಜ್ಞೆಮಾಡಿದರು: “ನೀನು ಜುದೇಯದ ಅರಸನ ಮನೆಗೆ ಹೋಗು. ಅಲ್ಲಿ ಈ ಮಾತನ್ನು ಹೇಳು:


ಆದಕಾರಣ ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಸರ್ವೇಶ್ವರ ಹೀಗೆನ್ನುತ್ತಾರೆ: “ಇವನಿಗಾಗಿ ಯಾರೂ ‘ಅಯ್ಯೋ ಸೋದರಸೋದರಿಯೇ’ ಎಂದು ಗೋಳಾಡರು ‘ಅಯ್ಯೋ ನಮ್ಮೊಡೆಯಾ, ರಾಜಾಧಿರಾಜ’ ಎಂದು ಪ್ರಲಾಪಿಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು