ಯೆರೆಮೀಯ 21:13 - ಕನ್ನಡ ಸತ್ಯವೇದವು C.L. Bible (BSI)13 ಕಣಿವೆಯಲ್ಲಿನ ನಗರಿಯೇ, ಬಯಲಿನ ಬಂಡೆಯಲ್ಲಿರುವ ಪುರಿಯೇ, ‘ನಮ್ಮ ಮೇಲೆ ಯಾರಿಳಿದು ಬಂದಾರು? ನಮ್ಮ ನಿವಾಸಗಳಿಗೆ ಯಾರು ನುಗ್ಗಿಯಾರು?’ ಎನ್ನುವವರೇ, ಇಗೋ ನಾನೆ ನಿಮಗೆ ವಿರುದ್ಧವಾಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಹಾ, ತಗ್ಗಿನ ನಗರವೇ, ಬಯಲು ಭೂಮಿಯ ಶಿಖರದ ಮೇಲಣ ಪುರಿಯೇ, ನಾನು ನಿನ್ನ ವಿರುದ್ಧವಾಗಿದ್ದೇನೆ. “ಯಾರು ಇಳಿದು ನಮ್ಮ ಮೇಲೆ ಬಂದಾರು? ನಮ್ಮ ನಿವಾಸಗಳಲ್ಲಿ ಯಾರು ನುಗ್ಗುವರು?” ಎಂದು ಹೇಳುವವರೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಹಾ, ತಗ್ಗಿನ ನಗರಿಯೇ, ಪ್ರಸ್ಥಭೂವಿುಯ ಶಿಖರದ ಮೇಲಣ ಪುರಿಯೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಯಾರು ಇಳಿದು ನಮ್ಮ ಮೇಲೆ ಬಂದಾರು, ನಮ್ಮ ನಿವಾಸಗಳಲ್ಲಿ ಯಾರು ನುಗ್ಗಿಯಾರು ಎನ್ನುವವರೇ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಜೆರುಸಲೇಮ್ ನಗರವೇ, ನಾನು ನಿನ್ನ ವಿರುದ್ಧವಾಗಿದ್ದೇನೆ. ನೀನು ಬೆಟ್ಟದ ಮೇಲೆ ಕುಳಿತಿರುವೆ, ನೀನು ರಾಣಿಯಂತೆ ಈ ಕಣಿವೆಯ ಮೇಲೆ ಕುಳಿತಿರುವೆ. ‘ನಮ್ಮ ಮೇಲೆ ಯಾರೂ ಧಾಳಿ ಮಾಡಲಾರರು, ನಮ್ಮ ಭದ್ರವಾದ ನಗರವನ್ನು ಯಾರೂ ಪ್ರವೇಶ ಮಾಡಲಾರರು’ ಎಂದು ಜೆರುಸಲೇಮಿನ ನಿವಾಸಿಗಳಾದ ನೀವು ಹೇಳುವಿರಿ.” ಆದರೆ ಯೆಹೋವನ ಸಂದೇಶವನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇಗೋ, ತಗ್ಗಿನ ನಗರಿಯೇ, ಬಯಲಿನ ಬಂಡೆಯಲ್ಲಿ ವಾಸಮಾಡುವವರೇ, “ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರುವರೆಂದು, ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಕಟಾ! ನನ್ನ ಜೀವದಾಣೆ, ನಾನು ಆ ಕುರಿಗಾಹಿಗಳಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿ ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.