ಯೆರೆಮೀಯ 21:14 - ಕನ್ನಡ ಸತ್ಯವೇದವು C.L. Bible (BSI)14 ನಿಮ್ಮ ದುಷ್ಕೃತ್ಯಗಳಿಗೆ ವಿಧಿಸುವೆನು ತಕ್ಕ ದಂಡನೆ, ಬೆಂಕಿ ಹಚ್ಚುವೆನು ನಿಮ್ಮ ಪುರಿಯೆಂಬ ವನಕ್ಕೆ, ಅದು ಕಬಳಿಸಿಬಿಡುವುದು ಸುತ್ತಮುತ್ತಣ ವಸ್ತುಗಳನ್ನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರಿಯೆಂಬ ವನಕ್ಕೆ ಬೆಂಕಿಹಚ್ಚುವೆನು, ಅದು ಸುತ್ತುಮುತ್ತಣದನ್ನೆಲ್ಲಾ ನುಂಗಿಬಿಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ನೀವು ತಕ್ಕ ಶಿಕ್ಷೆಯನ್ನು ಅನುಭವಿಸುವಿರಿ. ನಾನು ನಿಮ್ಮ ಅರಣ್ಯಗಳಲ್ಲಿ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ನಿಮ್ಮ ಸುತ್ತಮುತ್ತಲಿನ ಪ್ರತಿಯೊಂದು ವಸ್ತುವನ್ನು ಸುಟ್ಟುಹಾಕುತ್ತದೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸುತ್ತೇನೆ, ಎಂದು ಯೆಹೋವ ದೇವರು ಹೇಳುತ್ತಾರೆ. ಅದರ ಅಡವಿಗೆ ಬೆಂಕಿ ಹಚ್ಚುತ್ತೇನೆ. ಅದರ ಸುತ್ತಲಿಗಿರುವುದನ್ನೆಲ್ಲಾ ಅದು ನುಂಗಿಬಿಡುವುದು.’ ” ಅಧ್ಯಾಯವನ್ನು ನೋಡಿ |
ನೀನು ನಿನ್ನ ಸೇವಕರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ. ಅಲ್ಲದೆ, ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ : ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ. ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ, ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ. ಒಳಹೊಕ್ಕಿದ್ದೇನೆ ಅಲ್ಲಿನ ದೂರದ ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡುಮೇಡುಗಳನ್ನೇ