Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:4 - ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲರ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ: ‘ಇಗೋ ನಿಮ್ಮ ಪೌಳಿಗೋಡೆಗೆ ಮುತ್ತಿಗೆ ಹಾಕಿರುವ ಬಾಬಿಲೋನಿನ ಅರಸನಿಗೂ ಅವನ ಸೈನಿಕರಿಗೂ ವಿರುದ್ಧವಾಗಿ ನೀವು ಹಿಡಿದಿರುವ ಆಯುಧಗಳನ್ನು ನಿಮ್ಮ ವಿರುದ್ಧವಾಗಿಯೇ ತಿರುಗಿಸಿಬಿಡುವೆನು. ಅವುಗಳನ್ನೆಲ್ಲ ಈ ನಗರದ ನಡುವೆ ಗುಡ್ಡೆಹಾಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವುದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ, ಈ ಪಟ್ಟಣದೊಳಗೆ ಕೂಡಿಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಈ ಪಟ್ಟಣದೊಳಗೆ ಕೂಡಿಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನ್ನು ನೀವು ನಿಮ್ಮ ರಕ್ಷಣೆಗಾಗಿಯೂ ಬಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಬಾಬಿಲೋನಿನ ಜನರ ವಿರುದ್ಧವಾಗಿಯೂ ಬಳಸುತ್ತಿದ್ದೀರಿ. ಆದರೆ ನಾನು ಆ ಆಯುಧಗಳನ್ನು ವಿಫಲಗೊಳಿಸುತ್ತೇನೆ. “‘ಬಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಬಳಿಯಿದೆ. ತಕ್ಷಣವೇ ನಾನು ಆ ಸೈನ್ಯವನ್ನು ಜೆರುಸಲೇಮಿನ ಒಳಗಡೆ ತರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ‘ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬಿಲೋನಿನ ಅರಸನಿಗೂ, ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವುದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನೂ, ನಾನು ಹಿಂದಕ್ಕೆ ತಳ್ಳಿ, ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿಬರುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:4
23 ತಿಳಿವುಗಳ ಹೋಲಿಕೆ  

ಈ ಊರಿನವರು ಬಾಬಿಲೋನಿಯರ ವಿರುದ್ಧ ಕದನಕ್ಕೆ ಹೊರಟರೆ ಏನು ಪ್ರಯೋಜನ? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರಷ್ಟೆ. ಇವರ ಅಧರ್ಮದ ನಿಮಿತ್ತ ಈ ನಗರಕ್ಕೆ ವಿಮುಖವಾಗಿ, ಕಡುಕೋಪಾವೇಶನಾಗಿ ನಾನೇ ಇವರನ್ನು ಸದೆಬಡಿಯುವೆನು.


ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ಕೊಂಡು ಒಯ್ಯುವನು. ನಾನು ಅವನಿಗೆ ದಯೆತೋರುವ ತನಕ ಅಲ್ಲೇ ಇರುವನು. ನೀವು ಬಾಬಿಲೋನಿಯರೊಡನೆ ಯುದ್ಧಮಾಡಿದರೂ ಜಯವಾಗದು. ಇದು ಸರ್ವೇಶ್ವರನ ನುಡಿ’ ಎಂದು ಹೇಳುತ್ತಿರುವೆ, ಏಕೆ?” ಎಂದು ಆಪಾದಿಸಿ ಸೆರೆಯಲ್ಲಿ ಇಟ್ಟಿದ್ದನು.


ಇಗೋ, ಬೆಟ್ಟಗುಡ್ಡಗಳಿಂದ ಕೇಳಿಬರುತ್ತಿದೆ ಜನಜಂಗುಳಿಯಂಥ ಗದ್ದಲ; ಒಟ್ಟಿಗೆ ಕೂಡಿಕೊಂಡ ದೇಶವಿದೇಶಗಳ ಆರ್ಭಟ; ಸಜ್ಜಾಗಿ ನಿಂತಿದೆ ಸೇನಾಧೀಶ್ವರ ಸರ್ವೇಶ್ವರನ ಸೈನ್ಯ.


ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ.


ಜೆರುಸಲೇಮಿಗೆ ಎದುರಾಗಿ ಹೋರಾಡಲು ಅನ್ಯರಾಷ್ಟ್ರಗಳನ್ನು ಒಂದುಗೂಡಿಸುವೆನು. ಅವು ಆ ನಗರವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಿ, ಹೆಂಗಸರ ಮೇಲೆ ಅತ್ಯಾಚಾರವೆಸಗುವರು. ಅರ್ಧಕ್ಕೆ ಅರ್ಧ ಜನ ಸೆರೆಹೋಗುವರು. ಮಿಕ್ಕವರು ಅಲ್ಲೇ ಸುರಕ್ಷಿತವಾಗಿರುವರು.


ಸ್ವಾಮಿ ತಿರಸ್ಕರಿಸಿಬಿಟ್ಟಿದ್ದಾನೆ ತನ್ನ ಬಲಿಪೀಠವನ್ನೇ ಅಸಹ್ಯಗೊಂಡು ತೊರೆದುಬಿಟ್ಟಿದ್ದಾನೆ ತನ್ನ ಪವಿತ್ರಸ್ಥಾನವನ್ನೇ ಸಿಯೋನ್ ಅರಮನೆಯ ಗೋಡೆಗಳನ್ನು ಕೆಡವಲು ಬಿಟ್ಟಿದ್ದಾನೆ ಹಗೆಗಳನ್ನೇ. ಹಬ್ಬಹರಿದಿನಗಳ ಜಯಘೋಷವೋ ಎಂಬಂತೆ ಘೋಷಣೆ ಹಾಕುತ್ತಿದ್ದಾರಲ್ಲಾ ಶತ್ರುಗಳು ಸರ್ವೇಶ್ವರನ ಮಂದಿರದಲ್ಲೆ !


ಸ್ವಾಮಿಯೇ ಶತ್ರುವಾಗಿ ಕಬಳಿಸಿದ ಇಸ್ರಯೇಲನ್ನು ನಾಶಮಾಡಿದ ಅದರ ಅರಮನೆಗಳೆಲ್ಲವನ್ನು ನೆಲಸಮಗೊಳಿಸಿದ ಅದರ ಕೋಟೆಕೊತ್ತಲಗಳನ್ನು ಯಥೇಚ್ಛವಾಗಿಸಿದ ಯೆಹೂದ ನಾಡಿನ ಗೋಳಾಟವನ್ನು.


ನೇರ್ಗಲ್‍ಸರೆಚರ್, ಸಮ್ಗರ್‍ನೆಬೊ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥ ನೇರ್ಗಲ್‍ಸರೆಚರ್, ಹೀಗೆ ಬಾಬಿಲೋನಿಯದ ಅರಸನ ಎಲ್ಲ ಪದಾಧಿಕಾರಿಗಳು ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಕುಳಿತುಕೊಂಡರು


ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಅವರಾರೂ ಉಳಿಯದಂತೆ ಅವರಿಗೆ ನಿರಂತರವಾಗಿ ಪುತ್ರಶೋಕವನ್ನುಂಟುಮಾಡುವೆನು. ನಾನು ಅವರಿಗೆ ವಿಮುಖನಾಗುವೆನು. ಅವರ ಗತಿ ಹೇಳತೀರದಂತಾಗುವುದು.


ಅದು ಮಾತ್ರವಲ್ಲ, ಸರ್ವೇಶ್ವರನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಸಾಂಬ್ರಾಣಿಕಳಸ ಮುಂತಾದ ಕಂಚಿನ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಖೈದಿಗಳೊಂದಿಗೆ ಕಾರಾಗೃಹವನ್ನು ಸೇರುವಿರಿ; ಇಲ್ಲವೆ, ಇತರರ ಸಮೇತ ಹತರಾಗುವಿರಿ. ಇದೇ ನಿಮ್ಮ ಗತಿ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಏಕೆಂದರೆ ಸರ್ವೇಶ್ವರನೆ ಹೇಳಿರುವ ಮಾತಿವು - ‘ಇಗೋ, ನಾನು ನಿನ್ನನ್ನು ನಿನಗೂ ನಿನ್ನ ಎಲ್ಲ ಸ್ನೇಹಿತರಿಗೂ ಭಯಾನಕನನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು. ಅದನ್ನು ನೀನು ಕಣ್ಣಾರೆ ಕಾಣುವೆ. ನಾನು ಜುದೇಯರನೆಲ್ಲ ಬಾಬಿಲೋನಿನ ಅರಸನ ಕೈಗೊಪ್ಪಿಸುವೆನು. ಅವನು ಇವರನ್ನು ಬಾಬಿಲೋನಿಗೆ ಸೆರೆಯಾಗಿ ಕೊಂಡೊಯ್ದು ಕತ್ತಿಗೆ ತುತ್ತಾಗಿಸುವನು.


ಆಗ ಯೆರೆಮೀಯನಿಗೆ ಸರ್ವೇಶ್ವರನ ವಾಣಿ ಉಂಟಾಗಿ, ಆ ದೂತರಿಗೆ, “ನೀವು ಹೋಗಿ ಚಿದ್ಕೀಯನಿಗೆ ಈ ಉತ್ತರವನ್ನು ತಿಳಿಸಿರಿ:


ಜುದೇಯದ ಅರಸ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಸರ್ವೇಶ್ವರನೇ ಹೀಗೆಂದಿದ್ದಾರೆ: ನಾನು ಈ ನಗರವನ್ನು ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಸುವೆನು. ಅವನು ಇದನ್ನು ಆಕ್ರಮಿಸುವನು.


“ಇಗೋ, ಮುತ್ತಿಗೆಯ ದಿಬ್ಬಗಳು! ನಗರವನ್ನು ಆಕ್ರಮಿಸಲು ಬಂದುಬಿಟ್ಟಿದ್ದಾರೆ. ಖಡ್ಗ-ಕ್ಷಾಮ-ವ್ಯಾಧಿಗಳಿಂದ ನಗರವು ವಿರೋಧಿಗಳಾದ ಬಾಬಿಲೋನಿಯರ ಕೈ ಹಿಡಿತಕ್ಕೆ ಸಿಕ್ಕಿಹೋಗಿದೆ. ನೀವು ನುಡಿದಂತೆ ನೆರವೇರಿದೆ. ನಿಮ್ಮ ಕಣ್ಣಿಗೆ ಎಲ್ಲ ಬಟ್ಟಬಯಲಾಗಿದೆ.


ಆದ್ದರಿಂದ ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ಯೆಹೂದ್ಯರಿಗೂ ಜೆರುಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ’.”


ಶತ್ರು ಬಂದೆರಗಿದಾಗ ಸ್ವಾಮಿ ತನ್ನ ಶಕ್ತಿಯುತ ಕೈಯನ್ನು ಹಿಂದೆಗೆದುಬಿಟ್ಟ, ಇಸ್ರಯೇಲಿನ ಕೋಡನ್ನು ಕಡಿದು ಪುಡಿಪುಡಿ ಮಾಡಿಬಿಟ್ಟ, ಸುತ್ತುಗಟ್ಟಿ ನುಂಗುವ ಅಗ್ನಿಜ್ವಾಲೆಯಂತೆ ಯಕೋಬನನ್ನು ದಹಿಸಿಬಿಟ್ಟ.


ನಿನ್ನ ಎಡಗೈಯಿಂದ ಬಿಲ್ಲನ್ನು ಕಿತ್ತುಹಾಕಿ, ನಿನ್ನ ಬಲಗೈಯಿಂದ ಬಾಣಗಳನ್ನು ಉದುರಿಸಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು